AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಯುವಕನ ಭೀಕರ ಕೊಲೆ: ಕಲ್ಲಿನಿಂದ ಮುಖ ಜಜ್ಜಿ, ಮರ್ಮಾಂಗಕ್ಕೆ ಒದ್ದು ಹತ್ಯೆ

ಚಿಕ್ಕಬಳ್ಳಾಪುರದಲ್ಲಿ 29 ವರ್ಷದ ಯುವಕನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿರುವಂತಹ ಘಟನೆ ನಡೆದಿದೆ. ಸದ್ಯ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತನ ಪತ್ನಿಯೊಂದಿಗೆ ಜಗಳವಾದ ನಂತರ ಯುವಕ ಮನೆಯಿಂದ ಹೊರಟಿದ್ದರು ಎಂದು ತಿಳಿದುಬಂದಿದೆ. ಕೌಟುಂಬಿಕ ಕಲಹ ಕೊಲೆಗೆ ಕಾರಣ ಎಂದು ಅನುಮಾನ ವ್ಯಕ್ತವಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಯುವಕನ ಭೀಕರ ಕೊಲೆ: ಕಲ್ಲಿನಿಂದ ಮುಖ ಜಜ್ಜಿ, ಮರ್ಮಾಂಗಕ್ಕೆ ಒದ್ದು ಹತ್ಯೆ
ಮೃತ ಶ್ರೀಕಾಂತ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 05, 2025 | 9:54 AM

Share

ಚಿಕ್ಕಬಳ್ಳಾಪುರ, ಜೂನ್​ 05: ಐಪಿಎಲ್​​ನಲ್ಲಿ ಆರ್​​ಸಿಬಿ (RCB) ಭರ್ಜರಿ ಗೆಲುವು ಸಾಧಿಸಿ ಹವಾ ಸೃಷ್ಠಿಸಿದೆ. ಅಭಿಮಾನಿಗಳು ಎಲ್ಲೆಡೆ ಪಟಾಕಿ ಹೊಡೆದು ಸಂಭ್ರಮಾಚರಣೆಯಲ್ಲಿದ್ದರೆ, ಇತ್ತ ಚಿಕ್ಕಬಳ್ಳಾಪುರ ನಗರದ ಜನನಿಬಿಡ ಪ್ರದೇಶದಲ್ಲಿ ಕಲ್ಲಿನಿಂದ ಓರ್ವ ಯುವಕನ ಮುಖ ಜಜ್ಜಿ ಮತ್ತು ಮರ್ಮಾಂಗಕ್ಕೆ ಒದ್ದು ಹತ್ಯೆ (Kill) ಮಾಡಿರುವಂತಹ ಭೀಕರ ಘಟನೆ ನಡೆದಿದೆ.

ಅಂಡರ್‌ಗ್ರೌಂಡ್​ನಲ್ಲಿ ಯುವಕನ ಶವ ಪತ್ತೆ

ನಗರದ ಬಿ.ಬಿ.ರಸ್ತೆಯಲ್ಲಿರುವ ಸುಮ ಆಗ್ರೋ ಸೀಡ್ಸ್ ಅಂಗಡಿ ಮುಂಭಾಗದ ಅಂಡರ್‌ಗ್ರೌಂಡ್​ನಲ್ಲಿ ಓರ್ವ ಯುವಕನ ಶವ ಪತ್ತೆಯಾಗಿದ್ದು, ಶವದ ಮುಖವನ್ನು ಕಲ್ಲಿನಿಂದ ಜಜ್ಜಿ, ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ನಗರಠಾಣೆ ಪೊಲೀಸರು, ಶವದ ಗುರುತು ಪತ್ತೆ ಹಚ್ಚಿದ್ದಾರೆ. ಮೃತ ವ್ಯಕ್ತಿಯನ್ನು ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ನಗರದ ನಿವಾಸಿ ಶ್ರೀಕಾಂತ್ (29) ಎಂದು ಗುರುತಿಸಲಾಗಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ತನಿಖೆಕೈಗೊಂಡಿದ್ದಾರೆ.

ಇದನ್ನೂ ಓದಿ: ಆರ್​ಸಿಬಿಗೆ ಐಪಿಎಲ್ ಟ್ರೋಫಿ: ಬೆಂಗಳೂರಿನಲ್ಲಿ ಸಂಭ್ರಮಾಚರಣೆ ವೇಳೆ ಕ್ರೌರ್ಯ, ಯುವಕನಿಗೆ ಚಾಕು ಇರಿತ

ಇದನ್ನೂ ಓದಿ
Image
ತಕ್ಷಣವೇ ಸಂಭ್ರಮಾಚರಣೆ ಬೇಡವೆಂದರೂ ಕೇಳಿಲ್ಲ: ಪೊಲೀಸರಿಂದ ತೀವ್ರ ಅಸಮಾಧಾನ
Image
Karnataka Rains: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ
Image
ಬೆಂಗಳೂರು ಕಾಲ್ತುಳಿತದಲ್ಲಿ ಮೃತಪಟ್ಟವರು ಯಾರೆಲ್ಲ? ಇಲ್ಲಿದೆ ಪೂರ್ಣ ವಿವರ
Image
ಸುಹಾಸ್ ಶೆಟ್ಟಿ ಕೊಲೆ ಕೇಸ್​: ಆರೋಪಿ ಅಬ್ದುಲ್ ರಜಾಕ್ ಬಂಧನ

ಇನ್ನು ಶ್ರೀಕಾಂತ್ ಪತ್ನಿ ಭಾರ್ಗವಿ ಜೊತೆ ಮೊನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದನಂತೆ. ಇದರಿಂದ ಬೇಸರಗೊಂಡು ಶ್ರೀಕಾಂತ್ ರಾತ್ರಿ 10 ಗಂಟೆ ಸಮಯದಲ್ಲಿ ಮನೆಯಿಂದ ಹೋಗಿದ್ದಾರೆ. ನಿನ್ನೆ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾನೆ. ಕೊಲೆ ನಡೆದ ಸ್ಥಳದಲ್ಲಿ ಸಿಸಿ ಕ್ಯಾಮೆರಾಗಳಿದ್ದು, ಓರ್ವ ಮಹಿಳೆ ಹಾಗೂ ಪುರುಷ ಬಂದು-ಹೋಗಿರುವ ದೃಶ್ಯ ಸೆರೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆದರೆ ಇತ್ತ ಮೃತನ ತಾಯಿ ಮೀನಾಕ್ಷಮ್ಮ ಸೊಸೆ ಹಾಗೂ ಮಗನಿಗೆ ಕೌಟುಂಬಿಕ ಕಲಹವಿದ್ದು, ಯಾರು ಕೊಲೆ ಮಾಡಿದ್ದಾರೆ, ಏಕೆ ಕೊಲೆ ಮಾಡಿದ್ದಾರೆ ಗೊತ್ತಿಲ್ಲವೆಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ಮಗಳ ಅಡ್ಮಿಷನ್​ಗಾಗಿ ಊರಿಗೆ ತೆರಳುತ್ತಿದ್ದ ತಂದೆಯನ್ನ ಮಾರ್ಗ ಮಧ್ಯೆ ಕೊಂದ ಅಪರಿಚಿತರು

ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರ ನಗರಠಾಣಾ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಆರೋಪಿಗಳ ಬಗ್ಗೆ ಸಿಸಿ ಕ್ಯಾಮೆರಾದಲ್ಲಿ ಸುಳಿವು ಸಿಕ್ಕಿದ್ದು ಬಂಧನಕ್ಕೆ ಬಲೆ ಬಿಸಿದ್ದಾರೆ. ಆರೋಪಿಗಳ ಬಂಧನದ ನಂತರ ಕೊಲೆಯ ರಹಸ್ಯ ಬಯಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.