AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲರ್ಟ್: ಈ ಭಾನುವಾರ ನಂದಿಬೆಟ್ಟಕ್ಕೆ ಹೋಗುವ ಪ್ಲ್ಯಾನ್ ಇದ್ರೆ ಮುಂದೂಡಿ

ವೀಕೆಂಡ್‌ ಅಂದ್ರೆ ಸಾಕು ಬೆಂಗಳೂರಿಗರಿಗೆ ನಂದಿಬೆಟ್ಟ ಒಂದು ರೀತಿಯ ಎಂಜಾಯ್ ಮಾಡುವ ಹಾಟ್​​ಸ್ಪಾಟ್. ಅದರಲ್ಲೂ ಈ ಮಳೆಗಾಲದಲ್ಲೂ ಇಲ್ಲಿನ ವೆದರ್ ನೋಡಲು ಸುಂದರವಾಗಿರುತ್ತೆ. ಆದ್ರೆ ಈ ಭಾನುವಾರ ನಂದಿಬೆಟ್ಟಕ್ಕೆ ಹೋಗಬೇಕು ಅಂತ ಪ್ಲಾನ್ ಮಾಡಿಕೊಂಡವರಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಶಾಕ್ ಕೊಟ್ಟಿದೆ. ಆಗಸ್ಟ್ 9ರಂದು ನಂದಿ ಬೆಟ್ಟಕ್ಕೆ ಹೋಗುವ ಮುನ್ನ ಇದನ್ನು ಓದಲೇ ಬೇಕು.

ಅಲರ್ಟ್: ಈ ಭಾನುವಾರ ನಂದಿಬೆಟ್ಟಕ್ಕೆ ಹೋಗುವ ಪ್ಲ್ಯಾನ್ ಇದ್ರೆ ಮುಂದೂಡಿ
Nandi Hills
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Aug 07, 2026 | 8:14 PM

Share

ಚಿಕ್ಕಬಳ್ಳಾಪುರ, (ಆಗಸ್ಟ್ 07): ನಂದಿಬೆಟ್ಟದಲ್ಲಿ  ಮಾನ್ಸೂನ್‌ ಮ್ಯಾರಥಾನ್‌ ಹಿನ್ನೆಲೆಯಲ್ಲಿ, ನಂದಿಬೆಟ್ಟಕ್ಕೆ (nandi hills) ವಾಹನಗಳ ಸಂಚಾರ ಬಂದ್‌ ಮಾಡಲಾಗಿದೆ. ಹೌದು…ಇದೇ ಆಗಸ್ಟ್ 9ರಂದು ನಂದಿಹಿಲ್ಸ್‌ ಮಾನ್ಸೂನ್‌ ಮ್ಯಾರಥಾನ್‌ (monsoon marathon) ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಆಗಸ್ಟ್‌ 8ರ ರಾತ್ರಿ 11 ಗಂಟೆಯಿಂದ ಆಗಸ್ಟ್‌ 9ರ ಮಧ್ಯಾಹ್ನ 12 ಗಂಟೆಯವರೆಗೆ ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಿ ಚಿಕ್ಕಬಳ್ಳಾಪುರ (Chikkaballapur) ಜಿಲ್ಲಾಧಿಕಾರಿ ಜಿ. ಪ್ರಭು ಅವರು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಕಾರಹಳ್ಳಿ ಕ್ರಾಸ್‌ನಿಂದ ನಂದಿಬೆಟ್ಟದವರೆಗೆ ವಾಹನಗಳ ಸಂಚಾರ ಬಂದ್‌ ಇರಲಿದೆ.

ನಂದಿಬೆಟ್ಟದಲ್ಲಿ ನಡೆಯಲಿರುವ ನಂದಿಹಿಲ್ಸ್ ಮಾನ್ಸೂನ್‌ ಮ್ಯಾರಥಾನ್‌ನಲ್ಲಿ 10 ಕಿಲೋಮೀಟರ್‌ ಹಾಗೂ 21 ಕಿಲೋಮೀಟರ್‌ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಸುಮಾರು 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಮ್ಯಾರಥಾನ್‌ನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಮ್ಯಾರಥಾನ್‌ ಯಶಸ್ವಿಯಾಗಿ ನಡೆಸಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ನಂದಿಹಿಲ್ಸ್‌ ಮಾನ್ಸೂನ್‌ ಮ್ಯಾರಥಾನ್‌ಗೆ ಡಿಸಿಎಂ ಜಿ. ಪರಮೇಶ್ವರ್‌ ಚಾಲನೆ ನೀಡಲಿದ್ದಾರೆ. ಮ್ಯಾರಥಾನ್‌ ನಲ್ಲಿ ಭಾಗವಹಿಸುವ ವಾನಹಗಳಿಗೆ ಪಾಸ್‌ ನೀಡಲಾಗಿದ್ದು, ಆ ವಾಹನಗಳಿಗೆ ಮಾತ್ರ ಅವಕಾಶ ಇರಲಿದೆ. ಇನ್ನುಳಿದ ಬೇರೆ ವಾಹನಗಳಿಗೆ ನಿರ್ಬಂಧವಿರಲಿದೆ.

ಇದನ್ನೂ ಓದಿ: Karnataka Weather Forecast: ಆ.13ರ ವರೆಗೆ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ

ಒಟ್ನಲ್ಲಿ ವಿಶ್ವವಿಖ್ಯಾತ ಪ್ರವಾಸಿ ತಾಣವಾಗಿರುವ ನಂದಿಗಿರಿಧಾಮದಲ್ಲಿ, ಭಾನುವಾರ ನಡೆಯಲಿರುವ ಮ್ಯಾರಥಾನ್‌ ಹಿನ್ನೆಲೆಯಲ್ಲಿ, ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಪಾಲಿಸುವುದು ಅನಿವಾರ್ಯವಾಗಿದೆ. ಹೀಗಾಗಿ ವೀಕೆಂಡ್‌ನಲ್ಲಿ ನಂದಿಬೆಟ್ಟಕ್ಕೆ ಬರೋ ಪ್ಲಾನ್‌ ಇದ್ರೆ ಸ್ವಲ್ಪ ಬದಲಾಯಿಸಿಕೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್