ಮನೆಯಲ್ಲೆ ಮಹಿಳೆ ಅನುಮಾನಸ್ಪದ ಸಾವು; ನ್ಯಾಯಕ್ಕಾಗಿ ಅತ್ತೆ ಮಗನಿಂದ ಆತ್ಮಹತ್ಯೆ ಹೈಡ್ರಾಮಾ

ಗಂಡನ ಮನೆಯಲ್ಲಿದ್ದ ಗೃಹಿಣಿಯೊರ್ವಳು, ಮನೆಯಲ್ಲಿಯೇ ಅನುಮಾನಸ್ಪದವಾಗಿ ಮೃತಪಟ್ಟಿದ್ದಾಳೆ. ಇದಕ್ಕೆ ಆಕೆಯ ಗಂಡನ ಮನೆಯವರೇ ಕಾರಣ, ಕೂಡಲೇ ಅವರನ್ನ ಬಂಧಿಸುವಂತೆ ಒತ್ತಾಯಿಸಿ ಮೃತ ಗೃಹಿಣಿಯ ಅತ್ತೆಯ ಮಗನೊರ್ವ ಶವಗಾರದ ಬಳಿಯೆ ನೇಣು ಬಿಗುದುಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ.

ಮನೆಯಲ್ಲೆ ಮಹಿಳೆ ಅನುಮಾನಸ್ಪದ ಸಾವು; ನ್ಯಾಯಕ್ಕಾಗಿ ಅತ್ತೆ ಮಗನಿಂದ ಆತ್ಮಹತ್ಯೆ ಹೈಡ್ರಾಮಾ
ಮೃತ ಯುವತಿಗೆ ನ್ಯಾಯ ದೊರಕಿಸುವಂತೆ ಆತ್ಮಹತ್ಯೆ ಹೈಡ್ರಾಮಾ ಮಾಡಿದ ಅತ್ತೆ ಮಗ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 15, 2023 | 1:54 PM

ಚಿಕ್ಕಬಳ್ಳಾಪುರ: ನಮ್ಮ ಅತ್ತೆ ಮಗಳ ಸಾವಿಗೆ ನ್ಯಾಯ ಬೇಕು ಎಂದು ಪೊಲೀಸರು, ಸಂಬಂಧಿಗಳು ಹಾಗೂ ವೈದ್ಯರ ಸಮ್ಮಖದಲ್ಲಿಯೇ ಕೈಯಲ್ಲಿ ಹಗ್ಗ ಹಿಡಿದು ನೇಣು ಬಿಗಿದುಕೊಳ್ಳಲು ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಯ ಶವಗಾರದ ಬಳಿ ನಡೆದಿದೆ. ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕಾಮಗಾನಹಳ್ಳಿ ನಿವಾಸಿ 28 ವರ್ಷದ ಪುಷ್ಪಾ ಎನ್ನುವ ಗೃಹಿಣಿ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಗಂಡನ ಮನೆಯವರು ಪುಷ್ಪಾ ಶವವನ್ನು ಆಸ್ಪತ್ರೆಗೆ ಸಾಗಿಸಿ ನಾಪತ್ತೆಯಾಗಿದ್ರು. ಇದರಿಂದ ಶವಗಾರದ ಬಳಿ ಬಂದ ಪುಷ್ಪಾ ಅತ್ತೆಯ ಮಗ ಮುರಳಿ ಎಂಬಾತ ಪುಷ್ಪಾ ಸಾವಿಗೆ ನ್ಯಾಯ ಬೇಕು ಪೊಲೀಸರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಳ್ಳುವ ಹೈಡ್ರಾಮ ಮಾಡಿದ್ದಾನೆ.

ಚಿಂತಾಮಣಿ ತಾಲೂಕಿನ ಮಸಲಹಳ್ಳಿ ನಿವಾಸಿ ಪುಷ್ಪಾಳನ್ನು 8 ವರ್ಷಗಳ ಹಿಂದೆ, ಮಂಚೇನಹಳ್ಳಿ ತಾಲೂಕಿನ ಕಾಮಗಾನಹಳ್ಳಿ ಗ್ರಾಮದ ಶ್ರೀನಿವಾಸ್​ಗೆ ಕೊಟ್ಟು ಎರಡನೆ ಮದುವೆ ಮಾಡಲಾಗಿತ್ತು. ದಂಪತಿಗೆ 6 ವರ್ಷದ ಹೆಣ್ಣು ಮಗುವೂ ಇತ್ತು. ಆದ್ರೆ, ಕೌಟುಂಬಿಕ ಕಲಹ ಹಿನ್ನಲೆ ಆಗಾಗ ಮನಸ್ತಾಪ ಜಗಳ ಇತ್ತಂತೆ, ವರದಕ್ಷಿಣೆಗಾಗಿ ಗಂಡ ಶ್ರೀನಿವಾಸ್, ಅತ್ತೆ ಮಾವ ಕಿರುಕುಳ ಕೊಡುತ್ತಿದ್ದಾರೆ ಎಂದು ಪುಷ್ಪ ಹೇಳಿಕೊಂಡಿದ್ದಾಳಂತೆ, ಆದ್ರೆ, ನಿನ್ನೆ ಏನಾಯಿತೊ ಏನೋ ಪುಷ್ಪಾ ಗಂಡನ ಮನೆಯಲ್ಲಿಯೇ ಶವವಾಗಿದ್ದು ಹಲವು ಅನುಮಾನಗಳು ಮೂಡಿವೆ.

ಇದನ್ನೂ ಓದಿ:Bengaluru: ಪ್ರೇಯಸಿಯ ಹುಟ್ಟುಹಬ್ಬ ಆಚರಿಸಿ ಬಳಿಕ ಚಾಕುವಿನಿಂದ ಕತ್ತು ಕೊಯ್ದು ಬರ್ಬರ ಕೊಲೆ

ಇನ್ನು ಪುಷ್ಪಾ ಸಾವಿಗೆ ಆಕೆಯ ಗಂಡ ಅತ್ತೆ ಮಾವ ಕಾರಣ, ಅವರನ್ನು ಬಂಧಿಸುವಂತೆ ಒತ್ತಾಯಿಸಿ ಮೃತಳ ಕಡೆಯವರು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಬಳಿ ದೊಡ್ಡ ರಂಪಾಟವನ್ನೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮನವೋಲಿಸಿ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡಕಿದ್ದಾರೆ.

ವರದಿ: ಭೀಮಪ್ಪ ಪಾಟೀಲ್ ಟಿವಿ9 ಚಿಕ್ಕಬಳ್ಳಾಪುರ

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Sat, 15 April 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್