Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾಲಕ್ಕಿ ಬಾಳೆಹಣ್ಣಿಗೆ ಚಿನ್ನದ ಬೆಲೆ; ಟೊಮೆಟೊ, ದಾಳಿಂಬೆ ನಂತರ ಬಾಳೆತೋಟಕ್ಕೆ ಕಳ್ಳರ ಕಾಟ

ಟೊಮೆಟೊ, ದಾಳಿಂಬೆ, ಈರುಳ್ಳಿ ನಂತರ ಈಗ ಯಾಲಕ್ಕಿ ಬಾಳೆಹಣ್ಣಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಬಂದಿದೆ. ಇದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕು ಮಂಚೇನಹಳ್ಳಿಯಲ್ಲಿ ಕಳ್ಳರ ಕಣ್ಣು ರೈತರು ಬೆಳೆದ ಯಾಲಕ್ಕಿ ಬಾಳೆತೋಟಗಳ ಮೇಲೆ ಬಿದ್ದಿದೆ. ರಾತ್ರೋರಾತ್ರಿ ಬಾಳೆತೋಟಕ್ಕೆ ನುಗ್ಗಿ ಬಾಳೆಗೊನೆಗಳನ್ನು ಕಳ್ಳತನ ಮಾಡುತ್ತಿದ್ದಾರೆ. 

ಯಾಲಕ್ಕಿ ಬಾಳೆಹಣ್ಣಿಗೆ ಚಿನ್ನದ ಬೆಲೆ; ಟೊಮೆಟೊ, ದಾಳಿಂಬೆ ನಂತರ ಬಾಳೆತೋಟಕ್ಕೆ ಕಳ್ಳರ ಕಾಟ
ಯಾಲಕ್ಕಿ ಬಾಳೆಹಣ್ಣಿಗೆ ಕಳ್ಳರ ಕಾಟ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 23, 2023 | 9:52 PM

ಚಿಕ್ಕಬಳ್ಳಾಪುರ, ನ.23: ರುಚಿ ಹಾಗೂ ಗುಣಮಟ್ಟಕ್ಕೆ ಯಾಲಕ್ಕಿ ಬಾಳೆಹಣ್ಣು ಖ್ಯಾತಿ ಪಡೆದಿದೆ. ಇನ್ನು ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಸುತ್ತಮುತ್ತ ಬೆಳೆಯುವ ಯಾಲಕ್ಕಿ ಬಾಳೆಹಣ್ಣು(Banana)ಗಳಿಗೆ ಹೆಚ್ಚಿನ ಡಿಮ್ಯಾಂಡ್ ಇದೆ. ರೈತರ ಬಾಳೆತೋಟಗಳಲ್ಲೇ ಕೆಜಿ ಬಾಳೆ ಗೊನೆಗೆ 60 ರೂಪಾಯಿಯಿಂದ 80 ರೂಪಾಯಿ ಬೆಲೆ ಇದೆ. ಇನ್ನು ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಯಾಲಕ್ಕಿ ಬಾಳೆ ಹಣ್ಣಿಗೆ 90 ರೂಪಾಯಿಯಿಂದ ರಿಂದ 120 ರೂಪಾಯಿ ಬೆಲೆ ಇದೆ. ಇದರಿಂದ ಕಳ್ಳರು ರೈತರು ಬೆಳೆದ ಬಾಳೆತೋಟಕ್ಕೆ ನುಗ್ಗಿ ರಾತ್ರೋರಾತ್ರಿ ಬಾಳೆಗೊನೆಗಳನ್ನು ಕಳ್ಳತನ ಮಾಡುತ್ತಿದ್ದಾರೆ.

ಇನ್ನು ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಜಿ.ಬೊಮ್ಮಸಂದ್ರ ಗ್ರಾಮದ ರೈತ ಪದ್ಮನಾಭಯ್ಯನವರಿಗೆ ಸೇರಿದ ಬಾಳೆತೋಟ ಕಳ್ಳರ ಪಾಲಾಗಿದೆ. ರೈತ ಪದ್ಮನಾಭಯ್ಯ ಅವರು ಒಂದೂವರೆ ಎಕರೆಯಲ್ಲಿ ಒಂದೂವರೆ ಲಕ್ಷ ರೂಪಾಯಿ ಬಂಡವಾಳ ಹಾಕಿ ಬಾಳೆಹಣ್ಣು ಬೆಳೆದಿದ್ದಾರೆ. ಇನ್ನೇನು ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಬೇಕೆನ್ನುವಷ್ಟರಲ್ಲಿ ತಲಾ 15 ಕೆಜಿ ತೂಕದ 150ಕ್ಕೂ ಹೆಚ್ಚು ಬಾಳೆಗೊನೆ ಸುಮಾರು ಒಂದೂವರೆ ಟನ್‍ನಷ್ಟು ಬಾಳೆಗೊನೆಗಳನ್ನು ಕಳ್ಳರು ಕಟಾವು ಮಾಡಿಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ:ಬಾಳೆಹಣ್ಣು ಸುಲಿದಷ್ಟು ಸುಲಭವಲ್ಲ ಅದನ್ನು ತಿನ್ನುವುದು! ಜಸ್ಟ್​ ಎರಡು ನಿಮಿಷದಲ್ಲಿ ನೀವು ಎಷ್ಟು ಬಾಳೆಹಣ್ಣು ತಿನ್ನಬಲ್ಲಿರಿ?

ರೈತನಿಗೆ ವರ್ಷ, ದೊಣ್ಣೆಗೆ ನಿಮಿಷ ಎನ್ನುವ ಹಾಗೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಹಗಲು-ರಾತ್ರಿ ಕಷ್ಟಪಟ್ಟು ರೈತ ಯಾಲಕ್ಕಿ ಬಾಳೆ ಬೆಳೆದಿದ್ದಾನೆ. ಇದೀಗ ಕೈಗೆ ಬಂದ ತುತ್ತು ಬಾಯಿಗೆ ಬಂತು ಎನ್ನುವಷ್ಟರಲ್ಲಿ ಕಿಡಿಗೇಡಿ ಕಳ್ಳರು ಹುಲುಸಾದ ಬಾಳೆ ಕದ್ದಿದ್ದಾರೆ. ಇದರಿಂದ ನೊಂದಿರುವ ರೈತ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು