AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಮಾಟಮಂತ್ರಕ್ಕೆ‌ ಬೆಚ್ಚಿಬಿದ್ದ ಚಿಕ್ಕಬಳ್ಳಾಪುರ ಜನ

ಚಿಕ್ಕಬಳ್ಳಾಪುರದ ಒಎಂಬಿ ನಗರದಲ್ಲಿ ಮಾಟಮಂತ್ರದ ಭೀತಿ ಹರಡಿದೆ. ನಿಂಬೆಹಣ್ಣು, ಅರಿಶಿನ, ಕುಂಕುಮದ ಕುರುಹುಗಳು ಕಂಡುಬಂದಿವೆ. ಟೈಲರ್ ಶಾಂತಕುಮಾರ್ ಅವರ ಅಂಗಡಿಯ ಮುಂದೆ ಇದೇ ರೀತಿಯ ಘಟನೆಗಳು ನಡೆದಿದ್ದು, ಸಿಸಿಟಿವಿ ಮೂಲಕ ಮುನಿಲಕ್ಷ್ಮಮ್ಮ ಎಂಬ ಮಹಿಳೆಯನ್ನು ಪತ್ತೆಹಚ್ಚಲಾಗಿದೆ. ಇದೇ ಪ್ರದೇಶದ ಜಯಲಕ್ಷ್ಮೀ ಅವರ ಪತಿಯ ಮರಣಕ್ಕೂ ಮಾಟಮಂತ್ರವನ್ನು ಕಾರಣವೆಂದು ಆರೋಪಿಸಲಾಗಿದೆ. ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಮಹಿಳೆಯ ಮಾಟಮಂತ್ರಕ್ಕೆ‌ ಬೆಚ್ಚಿಬಿದ್ದ ಚಿಕ್ಕಬಳ್ಳಾಪುರ ಜನ
ಚಿಕ್ಕಬಳ್ಳಾಪುರ ಪೊಲೀಸ್​ ಠಾಣೆ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ವಿವೇಕ ಬಿರಾದಾರ

Updated on: Mar 19, 2025 | 8:05 AM

ಚಿಕ್ಕಬಳ್ಳಾಪುರ, ಮಾರ್ಚ್​ 19: ಚಿಕ್ಕಬಳ್ಳಾಪುರ (Chikkaballapur) ಪಟ್ಟಣದ ಒಎಂಬಿ ನಗರದಲ್ಲಿನ ಜನರು ಮಾಟಮಂತ್ರದ (Black Magic) ಭೀತಿಯಲ್ಲಿ ವಾಸಿಸುತ್ತಿದ್ದಾರೆ. ನಿತ್ಯ ಬೆಳಗಾದರೆ ಕೆಲ ಅಂಗಡಿ ಮತ್ತು ಮನೆಗಳ ಮುಂದೆ ನಿಂಬೆಹಣ್ಣು, ಅರಿಶಿನ ಮತ್ತು ಕುಂಕಮ ಇರುತ್ತಿದ್ದು ಮಾಟಮಂತ್ರದ ಕುರುಹುಗಳು ಎನ್ನಲಾಗುತ್ತಿದೆ. ಇದೇ ರಸ್ತೆಯಲ್ಲಿರುವ ಶಾಂತಕುಮಾರ್ ಎಂಬುವರ ಟೈಲರಿಂಗ್ ಅಂಗಡಿ ಮುಂದೆ ಪ್ರತಿ ದಿನವೂ ಒಂದಲ್ಲ ಒಂದು ನಿಂಬೆಹಣ್ಣಿನ ತುಂಡುಗಳು, ಹರಿಶಿನ ಕುಂಕುಮದ ಕುರುಹುಗಳು ಪತ್ತೆಯಾಗುತ್ತಿದ್ದವಂತೆ.

ಇದರಿಂದ ಆತಂಕಗೊಂಡ ಟೈಲರ್ ಶಾಂತಕುಮಾರ್ ಅವರು ಈ ರೀತಿ ಮಾಡುತ್ತಿರುವುದು ಯಾರು ಅಂತ ಪತ್ತೆ ಹಚ್ಚಲು ಅಂಗಡಿ ಮುಂದೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿದರು. ಸಿಸಿಟಿವಿ ಕ್ಯಾಮೆರಾ ಅಳವಡಿಸಿದ ಎರಡೇ ದಿನಕ್ಕೆ ಎದುರುಗಡೆ ಮನೆಯ ಮಹಿಳೆ ಮುನಿಲಕ್ಷ್ಮಮ್ಮ ಅವರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದಿದೆ. ಇದಾದ ಬಳಿಕ ಟೈಲರ್ ಶಾಂತಕುಮಾರ್ ಅವರ ಮನೆಯವರಿಗೆ ಒಂದಾಲ್ಲ ಒಂದು ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆಯಂತೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ಹೈನುಗಾರರಿಗೆ ಯುಗಾದಿ ಬೋನಸ್​

ಇದನ್ನೂ ಓದಿ
Image
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
Image
ಬಿಸಿಲಿಗೆ ಹೈರಾಣಾದ ಜನ: ವಾಂತಿ, ಬೇದಿ, ಜ್ವರ, ಜಾಂಡೀಸ್​ ಉಲ್ಬಣ
Image
ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, ಇಬ್ಬರು ಸಜೀವ ದಹನ
Image
ಮಹಿಳಾ ದಿನಾಚರಣೆ: ಚಿಕ್ಕಬಳ್ಳಾಪುರದ ಸ್ವಚ್ಛ ವಾಹಿನಿಗೆ ಮಹಿಳಾ ಸಾರಥಿ

ಇದೇ ಏರಿಯಾದಲ್ಲಿ ವಾಸವಾಗಿರುವ ಜಯಲಕ್ಷ್ಮೀ ಎಂಬುವರದ್ದು ಮತ್ತೊಂದು ವ್ಯಥೆ. ಜಯಲಕ್ಷ್ಮೀ ಅವರು ಹೇಳುವ ಪ್ರಕಾರ, ಆರೋಗ್ಯವಾಗಿದ್ದ ಅವರ ಪತಿ ಇದ್ದಕ್ಕಿದ್ದಂತೆ ತೀರಿಕೊಂಡರಂತೆ. ವೈದ್ಯರು ಏನೂ ಸಮಸ್ಯೆ ಇಲ್ಲ ಅಂತ ವರದಿ ನೀಡಿದ, 15 ದಿನಕ್ಕೆ ನನ್ನ ಪತಿ ತೀರಿಕೊಂಡರು. ಇದಕ್ಕೆಲ್ಲಾ ಮಾಟಮಂತ್ರವೇ ಕಾರಣ ಅಂತ ಆರೋಪಿಸಿದ್ದಾರೆ. ಹೀಗಾಗಿ, ಮುನಿಲಕ್ಷ್ಮಮ್ಮ ಅವರ ವಿರುದ್ಧ ಒಎಂಬಿ ನಗರ ನಿವಾಸಿಗಳು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಮಹಿಳೆಯ ಕಾಟ ತಪ್ಪಿಸುವಂತೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ