AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ ಅಪಘಾತ, ರಾಯರ ದರ್ಶನಕ್ಕೆ ತೆರಳುತ್ತಿದ್ದವರು ಪವಾಡ ಸದೃಶವಾಗಿ ಪಾರು

ಅವರೆಲ್ಲರೂ ರಾಯರ ದರ್ಶನಕ್ಕೆಂದು ಸ್ಲೀಪರ್ ಕೋಚ್ ಬಸ್ ಮೂಲಕ ಮೈಸೂರಿನಿಂದ ಮಂತ್ರಾಲಯಕ್ಕೆ ಪ್ರಯಾಣ ಬೆಳೆಸಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗಾಗಲೇ ಗುರು ರಾಘವೇಂದ್ರರ ದರ್ಶನ ಪಡೆಯಬೇಕಿತ್ತು. ಆದರೆ, ದಾರಿ ಮಧ್ಯೆ ಯಮದೂತನಂತೆ ಇದ್ದ ಕಂಟೈನರ್ ಲಾರಿಗೆ ಬಸ್ ಡಿಕ್ಕಿಯಾಗಿದೆ. ಅದೃಷ್ಟವಶಾತ್, ಪ್ರಯಾಣಿಕರು ಪವಾಡಸದೃಶರಾಗಿ ಪಾರಾಗಿದ್ದಾರೆ.

ಚಿಕ್ಕಬಳ್ಳಾಪುರ: ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ ಅಪಘಾತ, ರಾಯರ ದರ್ಶನಕ್ಕೆ ತೆರಳುತ್ತಿದ್ದವರು ಪವಾಡ ಸದೃಶವಾಗಿ ಪಾರು
ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ ಅಪಘಾತ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jan 20, 2026 | 1:34 PM

Share

ಚಿಕ್ಕಬಳ್ಳಾಪುರ, ಜನವರಿ 20: ಚಿಕ್ಕಬಳ್ಳಾಪುರ (Chikkaballapur) ನಗರದ ಹೊರವಲಯದ ಅಗಲಗುರ್ಕಿ ಬೈಪಾಸ್ ಸೇತುವೆ ಬಳಿ ಸೋಮವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಲೀಪರ್ ಕೋಚ್ ಬಸ್‌ ಒಂದು ಹೆದ್ದಾರಿಯ ಮಧ್ಯೆ ನಿಂತಿದ್ದ ಬೃಹತ್ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಯುವಕ ಮೃತಪಟ್ಟಿದ್ದಾನೆ. 12 ಮಂದಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಬೆಂಗಳೂರಿನ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಟ್ರಾವೆಲ್ಸ್‌ಗೆ ಸೇರಿದ ಸ್ಲೀಪರ್ ಕೋಚ್ ಬಸ್‌ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಅಪಘಾತಕ್ಕೀಡಾಯಿತು.

ಅಪಘಾತದ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕ ಶಿವಪ್ಪ ಎಂಬವರ ಕಾಲು ಬಸ್ ಹಾಗೂ ಕಂಟೈನರ್ ನಡುವೆ ಸಿಲುಕಿಕೊಂಡಿತ್ತು. ಮಾಹಿತಿ ಪಡೆದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹರಸಾಹಸ ಪಟ್ಟು ಅವರನ್ನು ರಕ್ಷಿಸಿದರು. ಅಪಘಾತದಲ್ಲಿ ಬಸ್‌ನಲ್ಲಿದ್ದ 9 ಮಂದಿ ಪ್ರಯಾಣಿಕರು ಹಾಗೂ ಕಂಟೈನರ್ ಲಾರಿಯಲ್ಲಿದ್ದ ಮೂವರು ಸೇರಿ ಒಟ್ಟು 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು 108 ಆಂಬುಲೆನ್ಸ್ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮೂವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದರ ನಡುವೆ ಕಂಟೈನರ್ ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ಬಿಹಾರ ಮೂಲದ 20 ವರ್ಷದ ಯುವಕ ಸುಹಾಸ್ ಎಂಬಾತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಂಟೈನರ್ ಚಾಲಕ ಲಾರಿಯ ಚಕ್ರದ ಕೆಳಗೆ ಕಲ್ಲು ಸಿಲುಕಿದೆಯೇ ಎಂಬುದನ್ನು ಪರಿಶೀಲಿಸುವಂತೆ ಸುಹಾಸ್‌ಗೆ ಸೂಚಿಸಿದ್ದ. ಆ ವೇಳೆ ಸುಹಾಸ್ ಲಾರಿಯ ಕೆಳಗೆ ಇಳಿದಿದ್ದಾಗ, ಅತಿವೇಗವಾಗಿ ಬಂದ ಬಸ್‌ ರಸ್ತೆ ಬದಿ ನಿಂತಿದ್ದ ಕಂಟೈನರ್ ಲಾರಿಯನ್ನು ಗಮನಿಸದೇ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸುಹಾಸ್ ಗಂಭೀರವಾಗಿ ಗಾಯಗೊಂಡು ಕೊನೆಗೆ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಬಸ್​ಗಳಲ್ಲೂ ವಿಮಾನದ ಗಗನಸಖಿಯರ ರೀತಿ ಸಂದೇಶ! ಸಾರಿಗೆ ಇಲಾಖೆಯಿಂದ ಖಾಸಗಿ ಬಸ್​ಗಳಿಗೆ ಹೊಸ ನಿಯಮ

ಅಪಘಾತದ ನಂತರ ಬಸ್‌ನಲ್ಲಿದ್ದ ಪ್ರಯಾಣಿಕರು ಪವಾಡಸದೃಶರಾಗಿ ಪ್ರಾಣಾಪಾಯದಿಂದ ಪಾರಾಗಿದ್ದು, ‘ಗುರು ರಾಯರ ಕೃಪೆಯಿಂದ ಜೀವ ಉಳಿಯಿತು’ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:32 pm, Tue, 20 January 26

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಸಾಲ ಮನ್ನಾಕ್ಕೆ ಆಗ್ರಹಿಸಿ ಮಹಾರಾಷ್ಟ್ರ ಸಿಎಂ ನಿವಾಸದತ್ತ ರೈತರ ಮೆರವಣಿಗೆ
ಸಾಲ ಮನ್ನಾಕ್ಕೆ ಆಗ್ರಹಿಸಿ ಮಹಾರಾಷ್ಟ್ರ ಸಿಎಂ ನಿವಾಸದತ್ತ ರೈತರ ಮೆರವಣಿಗೆ
ಹಣದ ವಿಚಾರಕ್ಕೆ ಕಿರಿಕ್: ಧನ್ವೀರ್ ಮಾತನಾಡಿದ ಇನ್ನೊಂದು ಆಡಿಯೋ ವೈರಲ್
ಹಣದ ವಿಚಾರಕ್ಕೆ ಕಿರಿಕ್: ಧನ್ವೀರ್ ಮಾತನಾಡಿದ ಇನ್ನೊಂದು ಆಡಿಯೋ ವೈರಲ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215 ಕೋಟಿ ರೂ: ಸಿಎಂ ಘೋಷಣೆ
ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215 ಕೋಟಿ ರೂ: ಸಿಎಂ ಘೋಷಣೆ
ದೆಹಲಿಯ ಯಮುನಾ ನದಿಯಲ್ಲಿ ತೇಲಿದ ವಿಷಕಾರಿ ನೊರೆ
ದೆಹಲಿಯ ಯಮುನಾ ನದಿಯಲ್ಲಿ ತೇಲಿದ ವಿಷಕಾರಿ ನೊರೆ
‘ಬರೀ ಟಾಸ್ಕ್ ಆಡಿದರೆ ಸಾಲದು’: ಧನುಷ್ ಆಟದ ಬಗ್ಗೆ ಲಕ್ಷ್ಮಿ ನೇರ ಮಾತು
‘ಬರೀ ಟಾಸ್ಕ್ ಆಡಿದರೆ ಸಾಲದು’: ಧನುಷ್ ಆಟದ ಬಗ್ಗೆ ಲಕ್ಷ್ಮಿ ನೇರ ಮಾತು
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಧನ್ವೀರ್ ಗೌಡ ಮನೆಗೆ ಮುತ್ತಿಗೆ ಹಾಕುತ್ತೇವೆ’: ಝೈದ್ ಖಾನ್ ಫ್ಯಾನ್ಸ್ ಗರಂ
ಧನ್ವೀರ್ ಗೌಡ ಮನೆಗೆ ಮುತ್ತಿಗೆ ಹಾಕುತ್ತೇವೆ’: ಝೈದ್ ಖಾನ್ ಫ್ಯಾನ್ಸ್ ಗರಂ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​: ಬೈಕ್​​ಗಳು ಜಖಂ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​: ಬೈಕ್​​ಗಳು ಜಖಂ
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಸೀಗೆಗುಡ್ಡದಲ್ಲಿ ಜನವೋ ಜನ,ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ
ಸೀಗೆಗುಡ್ಡದಲ್ಲಿ ಜನವೋ ಜನ,ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ