ಚಿಂತಾಮಣಿ: ವಿದ್ಯಾರ್ಥಿನಿಯಿಂದ ಶೌಚಗೃಹ ಕ್ಲೀನಿಂಗ್ ವಿಡಿಯೋ ವೈರಲ್!
ಚಿಕ್ಕಬಳ್ಳಾಪುರ: ಕೋಲಾರದಲ್ಲಿ ವಿದ್ಯಾರ್ಥಿಗಳನ್ನು ಶೌಚ ಗುಂಡಿಗಿಳಿಸಿದ ಪ್ರಕರಣ ಮಾಸುವ ಮುನ್ನ ಮತ್ತೊಂದು ಅಂತಹುದೇ ಪ್ರಕರಣ ಯಾವುದೇ ಎಗ್ಗುಸಿಗ್ಗು ಇಲ್ಲದೆ, ಕ್ಯಾಮರಾ ಕಣ್ಣೆದುರೇ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಬೈನಹಳ್ಳಿ ಗ್ರಾಮದ ನಮ್ಮೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು ವಿದ್ಯಾರ್ಥಿನಿಯಿಂದ ಶೌಚಗೃಹ ಕ್ಲೀನಿಂಗ್ ವಿಡಿಯೋ ವೈರಲ್ ಆಗಿದೆ.

ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೌಚಗೃಹ ಸ್ವಚ್ಛಗೊಳಿಸಲು ಬಳಸಬಾರದು ಎಂಬ ಶಿಕ್ಷಣ ಇಲಾಖೆಯ ಆದೇಶವಿದೆ. ಆದರೆ ಈ ಆದೇಶವನ್ನು ಧಿಕ್ಕರಿಸಿ ಶಿಕ್ಷಕರು ವಿದ್ಯಾರ್ಥಿಗಳ ಕೈಯಲ್ಲಿ ಶೌಚಾಲಯ ಕ್ಲೀನಿಂಗ್ ಮಾಡಿಸಿದ್ದಾರೆ. ವಿದ್ಯಾರ್ಥಿನಿ ಶೌಚಾಲಯ ಕ್ಲೀನ್ ಮಾಡುತ್ತಿದ್ದ ವಿಡಿಯೋವನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಘಟನೆಗೆ ಕಾರಣವಾದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಸ್ಥಳೀಯರು ಇದೀಗ ಆಗ್ರಹಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ