ಮತ್ತೆ ಸುದ್ದಿಯಲ್ಲಿ ಶಾಸಕ ಪ್ರದೀಪ್ ಈಶ್ವರ್, ಸಿಗುತ್ತಾ ಸಚಿವ ಸ್ಥಾನ?

ಅಚ್ಚರಿ ಎಂಬಂತೆ ಪ್ರದೀಪ್ ಈಶ್ವರ್ ಅವರು ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಡಾ ಕೆ ಸುಧಾಕರ್ ಅವರನ್ನು ಸೋಲಿಸಿದ್ದಾರೆ. ಅಂದಿನ ಬಿಜೆಪಿಯ ಪ್ರಭಾವಿ ಮಂತ್ರಿಯಾಗಿದ್ದ ಸುಧಾಕರ್‌ರವರನ್ನು ಸೋಲಿಸಿ  ಎಲ್ಲರ ಹುಬ್ಬೇರುವಂತೆ ಮಾಡಿದ್ದು ಇತಿಹಾಸ. ರಾಜಕೀಯ ಪ್ರವೇಶ ಮಾಡಿದ ಮೊದಲ ಹಂತದಲ್ಲೇ ವಿಧಾಸಭೆ ಪ್ರವೇಶ ಮಾಡಿರುವ ಪ್ರದೀಪ್ ಈಶ್ವರ್, ತಮ್ಮ ಭಾಷಣ, ಮಾತುಗಳಿಂದಲೇ ಚಿರಪರಿಚಿತರಾಗಿದ್ದಾರೆ. ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

ಮತ್ತೆ ಸುದ್ದಿಯಲ್ಲಿ ಶಾಸಕ ಪ್ರದೀಪ್ ಈಶ್ವರ್, ಸಿಗುತ್ತಾ ಸಚಿವ ಸ್ಥಾನ?
ಪ್ರದೀಪ್ ಈಶ್ವರ್
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ರಮೇಶ್ ಬಿ. ಜವಳಗೇರಾ

Updated on:Jun 24, 2024 | 10:37 PM

ಚಿಕ್ಕಬಳ್ಳಾಪುರ, (ಜೂನ್ 24) : ಒಂದೆಡೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಡಿಸಿಎಂ ಹುದ್ದೆ ಹೆಚ್ಚಿಸುವ ಬಗ್ಗೆ ಚರ್ಚೆ ಮತ್ತೆ ಜೋರಾಗಿದೆ. ಸಚಿವರಾದ ಕೆಎನ್ ರಾಜಣ್ಣ ಮತ್ತು ಸತೀಶ್ ಜಾರಕಿಹೊಳಿ ಅವರು ಡಿಸಿಎಂ ಹುದ್ದೆ ಹೆಚ್ಚಿಸಬೇಕೆಂದು ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ. ಇದರ ಮಧ್ಯೆ ಇತ್ತ ಮತ್ತೆ ಸಚಿವ ಸಂಪುಟ ವಿಸ್ತರಣೆ ಮಾಡಿ ಪ್ರದೀಪ್ ಈಶ್ವರ್​ಗೆ ಮಂತ್ರ ಮಾಡಬೇಕೆಂಬ ಕೂಗು ಕೇಳಿಬಂದಿದೆ. ಹೌದು…  ಪ್ರದೀಪ್ ಈಶ್ವರ್ ಇದೇ ಮೊದಲ ಬಾರಿಗೆ ಶಾಸಕರಾಗಿದ್ದು, ಈ ಒಂದು ವರ್ಷ ಕಳೆದಿದೆ ಅಷ್ಟೇ. ಆಗಲೇ ಶಾಸಕ ಪ್ರದೀಪ್ ಈಶ್ವರ್​ಗೆ ಸಚಿವ ಸ್ಥಾನ ನೀಡುವಂತೆ ಚಿಕ್ಕಬಳ್ಳಾಪುರದಲ್ಲಿ ಬಲಿಜ ಸಮುದಾಯ ಒತ್ತಾಯಿಸಿದೆ.

ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಬಲಿಜ ಸಮುದಾಯ ಹಾಗೂ ಬೆಂಬಲಿಗರು ಸುದ್ದಿಗೋಷ್ಟಿ ನಡೆಸಿ, ರಾಜ್ಯದಲ್ಲಿ ಬಲಿಜ ಸಮುದಾಯದಲ್ಲಿ ಏಕೈಕ ಶಾಸಕ ಪ್ರದೀಪ್ ಈಶ್ವರ್. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಆಗ್ರಹಿಸಿದ್ದಾರೆ.

ಪ್ರಥಮ ಬಾರಿಗೆ ಶಾಸಕರಾಗಿದ್ದರೂ ಮಂತ್ರಿಸ್ಥಾನಕ್ಕೆ ಬೇಡಿಕೆ

ಇನ್ನು ಪ್ರದೀಪ್‌ ಈಶ್ವರ್ ಚಿಕ್ಕಬಳ್ಳಾಪುರದ ಶಾಸಕರಾಗಿ ಒಂದು ವರ್ಷವಾಗಿದೆ. ಶಾಸಕರಾಗಿ ಒಂದು ವರ್ಷವಾಗಿದೆ. ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಎಸ್.ಎನ್.ಸುಬ್ಬಾರೆಡ್ಡಿ ಮೂರು ಬಾರಿ ಶಾಸಕರಾಗಿದ್ದು, ಮಂತ್ರಿಸ್ಥಾನಕ್ಕಾಗಿ ಕಾದು ಕುಳಿತಿದ್ದಾರೆ. ಇನ್ನೂ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದ ಡಾ. ಎಂ.ಸಿ.ಸುಧಾಕರ್ ಹಾಲಿ ಸಚಿವರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಇನ್ನು ಗೌರಿಬಿದನೂರಿನಲ್ಲಿ ಪಕ್ಷೇತರ ಶಾಸಕರಾಗಿರುವ ಕೆ.ಹೆಚ್.ಪುಟ್ಟಸ್ವಾಮಿಗೌಡ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೂ ಶಾಸಕ ಪ್ರದೀಪ್‌ ಈಶ್ವರ್‌ಗೆ ಮಂತ್ರಿಸ್ಥಾನ ನೀಡುವಂತೆ ಶಾಸಕ ಪ್ರದೀಪ್‌ ಈಶ್ವರ್ ಬೆಂಬಲಿಗರು, ಬಲಿಜ ಸಮುದಾಯದ ಮುಖಂಡರು, ಅಹಿಂದ ಸಂಘಟನೆಗಳ ಕೆಲವು ಮುಖಂಡರು ಸುದ್ಧಿಗೋಷ್ಠಿ ನಡೆಸಿ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯ ಮಾಡಿದರು.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಜೋರಾಗುತ್ತಿದೆ ಡಿಸಿಎಂ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು

ಅಹಿಂದ, ಬಲಿಜ, ಯುವ ಖೋಟಾದಡಿಯಲ್ಲಿ ಮಂತ್ರಿಸ್ಥಾನಕ್ಕೆ ಬೇಡಿಕೆ

ಇನ್ನು ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯಕಾಂಗ್ರೆಸ್‌ನಲ್ಲಿ 3-4 ಬಾರಿ ಶಾಸಕರಾದ ಹಿರಿಯ ಶಾಸಕರಿದ್ದಾರೆ. ಅವರವರದೇ ಖೋಟಾಗಳಲ್ಲಿ ಮಂತ್ರಿಸ್ಥಾನಕ್ಕಾಗಿ ಕಾದು ಕುಳಿತಿದ್ದಾರೆ. ಇಂತಹದ್ದರಲ್ಲಿ ಶಾಸಕ ಪ್ರದೀಪ್‌ಈಶ್ವರ್‌ಗೆ ಮಂತ್ರಿಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಾಯ ಮಾಡಲಾಗುತ್ತಿದೆ. ಪ್ರಥಮ ಬಾರಿಗೆ ಶಾಸಕರಾಗಿರುವ ಪ್ರದೀಪ್‌ಈಶ್ವರ್‌ಗೆ ಅಹಿಂದ, ಬಲಿಜ, ಯುವಖೋಟಾದಡಿಯಲ್ಲಿ ಮಂತ್ರಿಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:32 pm, Mon, 24 June 24

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು