ಚಿಕ್ಕಬಳ್ಳಾಪುರ, (ಜೂನ್ 24) : ಒಂದೆಡೆ ಕರ್ನಾಟಕ ಕಾಂಗ್ರೆಸ್ನಲ್ಲಿ ಡಿಸಿಎಂ ಹುದ್ದೆ ಹೆಚ್ಚಿಸುವ ಬಗ್ಗೆ ಚರ್ಚೆ ಮತ್ತೆ ಜೋರಾಗಿದೆ. ಸಚಿವರಾದ ಕೆಎನ್ ರಾಜಣ್ಣ ಮತ್ತು ಸತೀಶ್ ಜಾರಕಿಹೊಳಿ ಅವರು ಡಿಸಿಎಂ ಹುದ್ದೆ ಹೆಚ್ಚಿಸಬೇಕೆಂದು ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ. ಇದರ ಮಧ್ಯೆ ಇತ್ತ ಮತ್ತೆ ಸಚಿವ ಸಂಪುಟ ವಿಸ್ತರಣೆ ಮಾಡಿ ಪ್ರದೀಪ್ ಈಶ್ವರ್‌ಗೆ ಮಂತ್ರ ಮಾಡಬೇಕೆಂಬ ಕೂಗು ಕೇಳಿಬಂದಿದೆ. ಹೌದು… ಪ್ರದೀಪ್ ಈಶ್ವರ್ ಇದೇ ಮೊದಲ ಬಾರಿಗೆ ಶಾಸಕರಾಗಿದ್ದು, ಈ ಒಂದು ವರ್ಷ ಕಳೆದಿದೆ ಅಷ್ಟೇ. ಆಗಲೇ ಶಾಸಕ ಪ್ರದೀಪ್ ಈಶ್ವರ್‌ಗೆ ಸಚಿವ ಸ್ಥಾನ ನೀಡುವಂತೆ ಚಿಕ್ಕಬಳ್ಳಾಪುರದಲ್ಲಿ ಬಲಿಜ ಸಮುದಾಯ ಒತ್ತಾಯಿಸಿದೆ.
ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಬಲಿಜ ಸಮುದಾಯ ಹಾಗೂ ಬೆಂಬಲಿಗರು ಸುದ್ದಿಗೋಷ್ಟಿ ನಡೆಸಿ, ರಾಜ್ಯದಲ್ಲಿ ಬಲಿಜ ಸಮುದಾಯದಲ್ಲಿ ಏಕೈಕ ಶಾಸಕ ಪ್ರದೀಪ್ ಈಶ್ವರ್. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಆಗ್ರಹಿಸಿದ್ದಾರೆ.
ಇನ್ನು ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರದ ಶಾಸಕರಾಗಿ ಒಂದು ವರ್ಷವಾಗಿದೆ. ಶಾಸಕರಾಗಿ ಒಂದು ವರ್ಷವಾಗಿದೆ. ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಎಸ್.ಎನ್.ಸುಬ್ಬಾರೆಡ್ಡಿ ಮೂರು ಬಾರಿ ಶಾಸಕರಾಗಿದ್ದು, ಮಂತ್ರಿಸ್ಥಾನಕ್ಕಾಗಿ ಕಾದು ಕುಳಿತಿದ್ದಾರೆ. ಇನ್ನೂ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದ ಡಾ. ಎಂ.ಸಿ.ಸುಧಾಕರ್ ಹಾಲಿ ಸಚಿವರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಇನ್ನು ಗೌರಿಬಿದನೂರಿನಲ್ಲಿ ಪಕ್ಷೇತರ ಶಾಸಕರಾಗಿರುವ ಕೆ.ಹೆಚ್.ಪುಟ್ಟಸ್ವಾಮಿಗೌಡ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೂ ಶಾಸಕ ಪ್ರದೀಪ್ ಈಶ್ವರ್‌ಗೆ ಮಂತ್ರಿಸ್ಥಾನ ನೀಡುವಂತೆ ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರು, ಬಲಿಜ ಸಮುದಾಯದ ಮುಖಂಡರು, ಅಹಿಂದ ಸಂಘಟನೆಗಳ ಕೆಲವು ಮುಖಂಡರು ಸುದ್ಧಿಗೋಷ್ಠಿ ನಡೆಸಿ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯ ಮಾಡಿದರು.
ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಜೋರಾಗುತ್ತಿದೆ ಡಿಸಿಎಂ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು
ಇನ್ನು ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯಕಾಂಗ್ರೆಸ್‌ನಲ್ಲಿ 3-4 ಬಾರಿ ಶಾಸಕರಾದ ಹಿರಿಯ ಶಾಸಕರಿದ್ದಾರೆ. ಅವರವರದೇ ಖೋಟಾಗಳಲ್ಲಿ ಮಂತ್ರಿಸ್ಥಾನಕ್ಕಾಗಿ ಕಾದು ಕುಳಿತಿದ್ದಾರೆ. ಇಂತಹದ್ದರಲ್ಲಿ ಶಾಸಕ ಪ್ರದೀಪ್‌ಈಶ್ವರ್‌ಗೆ ಮಂತ್ರಿಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಾಯ ಮಾಡಲಾಗುತ್ತಿದೆ. ಪ್ರಥಮ ಬಾರಿಗೆ ಶಾಸಕರಾಗಿರುವ ಪ್ರದೀಪ್‌ಈಶ್ವರ್‌ಗೆ ಅಹಿಂದ, ಬಲಿಜ, ಯುವಖೋಟಾದಡಿಯಲ್ಲಿ ಮಂತ್ರಿಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:32 pm, Mon, 24 June 24