AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಾಲಿಗೆ ರಾಡ್ ಅಳವಡಿಕೆ: ಅಸಲಿಗೆ ಆಗಿದ್ದೇನು?

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಳೆದ ಒಂದು ವಾರದಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಹಾಗೂ ಆಸ್ಪತ್ರೆಯ ಬೆಡ್‌ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಷ್ಟಕ್ಕೂ ಪ್ರದೀಪ್ ಈಶ್ವರ್ ಅವರ ಕಾಲಿಗೆ ಆಗಿದ್ದೇನು ಎನ್ನುವ ಡಿಟೇಲ್ಸ್ ಇಲ್ಲಿದೆ.

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಾಲಿಗೆ ರಾಡ್ ಅಳವಡಿಕೆ:  ಅಸಲಿಗೆ ಆಗಿದ್ದೇನು?
Pradeep Eshwar
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Nov 15, 2026 | 9:50 PM

Share

ಚಿಕ್ಕಬಳ್ಳಾಪುರ, ನವೆಂಬರ್ 15: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಬಲಗಾಲಿಗೆ ಗಾಯ ಮಾಡಿಕೊಂಡು ವಿಶ್ರಾಂತಿಯಲ್ಲಿದ್ದಾರೆ. ಬಲಗಾಲಿಗೆ ಫುಲ್ ಬ್ಯಾಂಡೆಜ್ ಹಾಕಿಕೊಂಡು ಆಸ್ಪತ್ರೆಯ ಬೆಡ್‌ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬೇರೆ ಬೇರೆ ರೀತಿಯ ಚರ್ಚೆಗಳು ಆಗುತ್ತಿವೆ. ಅಷ್ಟಕ್ಕೂ ಅಸಲಿಗೆ ಅವರಿಗೆ ಏನಾಗಿದೆ ಅಂದ್ರೆ, ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಪರಿಣಾಮ ಬಲಗಾಲಿನ ಮೂಳೆ ಮುರಿಬಿದ್ದಿದ್ದು, ಸದ್ಯ ವೈದ್ಯರು ಸರ್ಜರಿ ಮಾಡಿ ಕಾಲಿನಲ್ಲಿ ರಾಡ್ ಅಳವಡಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾಲಿನೊಳಗೆ ರಾಡ್ ಅಳವಡಿಕೆ

ಆಸ್ಪತ್ರೆಯ ಬೆಡ್‌ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದ್ರಿಂದ ಕ್ಷೇತ್ರದ ಜನರು, ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆತಂಕ ಮೂಡಿಸಿತ್ತು. ಇನ್ನು ಟಿವಿ9ಗೆ ಲಭ್ಯವಾದ ಮಾಹಿತಿಯ ಪ್ರಕಾರ, ನಿವಾಸದ ಬಳಿ ಕಾರಿನಿಂದ ಇಳಿದು ಲಿಫ್ಟ್‌ಗೆ ತೆರಳುವ ಸಂದರ್ಭದಲ್ಲಿ ಮೆಟ್ಟಿಲಿನ ಮೇಲೆ ಬಿದ್ದಿದ್ದ ನೀರಿನ  ಕಾಲಿಟ್ಟ ಪರಿಣಾಮ ಕಾಲು ಜಾರಿದೆ. ಈ ವೇಳೆ ಆಯತಪ್ಪಿ ಬೀಳುವುದನ್ನು ತಪ್ಪಿಸಲು ಮುಂದಕ್ಕೆ ಬಾಗಿದಾಗ ಕಾಲಿನ ಮೂಳೆ ಮುರಿದಿದೆ. ಹೀಗಾಗಿ ತಜ್ಞ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಕಾಲಿಗೆ ರಾಡ್ ಅಳವಡಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ದುಡಿದ ಸಂಬಳ ಕೇಳಿದ್ದೇ ತಪ್ಪಾಯ್ತಾ?: ಚಾಲಕನ ತಲೆಗೆ ರಾಡ್‌ನಿಂದ ಹೊಡೆದು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ ಮಾಲೀಕ

ವೈದ್ಯರ ಸೂಚನೆಯಂತೆ ಶಾಸಕ ಪ್ರದೀಪ್ ಈಶ್ವರ್, ಕನಿಷ್ಠ ಆರರಿಂದ ಎಂಟು ವಾರಗಳ ಕಾಲ ಕಡ್ಡಾಯವಾಗಿ ವಿಶ್ರಾಂತಿ ಪಡೆಯಬೇಕಿದೆ. ಹೆಚ್ಚು ಓಡಾಡಿದರೆ ಗಾಯ ಮತ್ತಷ್ಟು ಉಲ್ಬಣಿಸುವ ಸಾಧ್ಯತೆಯಿದ್ದು, ಮೂಳೆ ಸರಿಯಾಗಿ ಕೂಡಿಕೊಳ್ಳಲು ವಿಶ್ರಾಂತಿ ಅಗತ್ಯ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಆದರೂ ತಮ್ಮ ನೀಟ್ ಅಕಾಡೆಮಿಯ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಮೇಲ್ವಿಚಾರಣೆಗಾಗಿ ಅಂಬ್ಯುಲೆನ್ಸ್ ಮೂಲಕ ತೆರಳಿ ಪರಿಶೀಲನೆ ನಡೆಸಿ ಮತ್ತೆ ಆಸ್ಪತ್ರೆಗೆ ಮರಳುತ್ತಿದ್ದಾರೆ.

ಮತ್ತೊಂದೆಡೆ ಶಾಸಕರು ಶೀಘ್ರ ಗುಣಮುಖರಾಗಿ ಕ್ಷೇತ್ರಕ್ಕೆ ಮರಳಲಿ ಎಂದು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ದೇವಸ್ಥಾನ, ಮಸೀದಿ ಮತ್ತು ಚರ್ಚ್‌ಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಇಲ್ಲಿ ಕ್ಲಿಕ್ ಮಾಡಿ

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಪ್ರಾಸ ಬಳಸಿ ಸ್ಪರ್ಧಿಗಳ ವ್ಯಕ್ತಿತ್ವ ವಿವರಿಸಿದ ಮಾಡರ್ನ್ ಕವಿ ಮಂಜ: ವಿಡಿಯೋ
ಪ್ರಾಸ ಬಳಸಿ ಸ್ಪರ್ಧಿಗಳ ವ್ಯಕ್ತಿತ್ವ ವಿವರಿಸಿದ ಮಾಡರ್ನ್ ಕವಿ ಮಂಜ: ವಿಡಿಯೋ
ಅಧ್ಯಕ್ಷ ಸ್ಥಾನದಲ್ಲಿದ್ದರೂ ಮೈಕ್ ಆಫ್ ಮಾಡಿದ್ದಕ್ಕೆ ಶಾಸಕ ಕೆಂಡಾಮಂಡಲ
ಅಧ್ಯಕ್ಷ ಸ್ಥಾನದಲ್ಲಿದ್ದರೂ ಮೈಕ್ ಆಫ್ ಮಾಡಿದ್ದಕ್ಕೆ ಶಾಸಕ ಕೆಂಡಾಮಂಡಲ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು