ಡೈರಿ ಸಿಬ್ಬಂದಿಯಿಂದಲೇ ನಂದಿನಿ ಹಾಲಿಗೆ ನೀರು ಬೆರಸಿ ವಂಚನೆ

ಚಿಕ್ಕಬಳ್ಳಾಪುರದ ಚಿಮುಲ್ ಡೈರಿಯಲ್ಲಿ ಹಾಲಿಗೆ ನೀರು ಮಿಶ್ರಣ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಾಡಿಕೆರೆ ಡೈರಿಯ ಸಿಬ್ಬಂದಿ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಚಿಮುಲ್ ಎಂ.ಡಿ. ತನಿಖಾ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಮಾಡಿಕೆರೆ ಹಾಲಿನ ಡೈರಿ ಬಿ.ಎಂ.ಸಿ ಕೇಂದ್ರ ಸಹಾಯಕನನ್ನು ವಜಾ ಮಾಡಲಾಗಿದೆ.

ಡೈರಿ ಸಿಬ್ಬಂದಿಯಿಂದಲೇ ನಂದಿನಿ ಹಾಲಿಗೆ ನೀರು ಬೆರಸಿ ವಂಚನೆ
ಡೈರಿ ಸಿಬ್ಬಂದಿಯಿಂದಲೇ ನಂದಿನಿ ಹಾಲಿಗೆ ನೀರು ಬೆರಸಿ ವಂಚನೆ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 17, 2025 | 10:20 PM

ಚಿಕ್ಕಬಳ್ಳಾಪುರ, ಜನವರಿ 17: ರೈತರು ಹಗಲು ರಾತ್ರಿ ಕಷ್ಟ ಪಟ್ಟು ಹೈನೋದ್ಯಮದ ಮೂಲಕ ಹಾಲಿನ (milk) ಡೈರಿಗಳಿಗೆ ಶುದ್ದ ಹಾಲು ಸರಬರಾಜು ಮಾಡಿದರೆ, ಇತ್ತ ಸ್ವತಃ ಡೈರಿಗಳ ಸಿಬ್ಬಂದಿಗಳು ಶುದ್ದ ಹಾಲಿಗೆ ನೀರು ಮಿಶ್ರಣ ಮಾಡಿ ಹಾಲಿನ ಒಕ್ಕೂಟ ಹಾಗೂ ನಂದಿನಿ ಹಾಲಿನ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಪ್ರಕರಣ ಬಯಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಹಾಲಿನ ಡೈರಿ ಬಿ.ಎಂ.ಸಿ ಕೇಂದ್ರದಲ್ಲಿ ಹಸುವಿನ ಹಾಲಿಗೆ ಮನಸ್ಸೊ ಇಚ್ಚೆ ನೀರು ಮಿಶ್ರಣ ಮಾಡಿ ನಂದಿನಿ ಗ್ರಾಹಕರು ಹಾಗೂ ಚಿಮುಲ್​ಗೆ ವಂಚನೆ ಮಾಡಲು ಯತ್ನಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹಾಲು ಉತ್ಪಾದನೆಯಲ್ಲಿ ಕುಂಠಿತ: ಹೈನೋದ್ಯಮದಿಂದ ವಿಮುಖರಾಗುತ್ತಿದ್ದಾರಾ ರೈತರು?

ಹೌದು ಸ್ವತಃ ಮಾಡಿಕೆರೆ ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು  ಹಾಲಿನ ಡಂಪ್ ಟ್ಯಾಂಲ್​ಗೆ ನೀರು ಕಲಬೆರಕೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದ ಮೆಗಾ ಡೈರಿಗೆ ಸರಬರಾಜು ಮಾಡಿ ಈಗ ಸಿಕ್ಕಿ ಬಿದ್ದಿದ್ದಾರೆ. ಸ್ವತಃ ಡೈರಿ ಸಿಬ್ಬಂದಿಗಳ ಕಳ್ಳಾಟವನ್ನು ಮತ್ತೊರ್ವ ಸಿಬ್ಬಂದಿ ತಮ್ಮ ಮೊಬೈಲ್​ನಲ್ಲಿ ರೆಕಾರ್ಡ ಮಾಡಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಇನ್ನೂ ಮಾಡಿಕೆರೆ ಹಾಲಿನ ಡೈರಿ ಬಿ.ಎಂ.ಸಿ ಕೇಂದ್ರದಲ್ಲಿ ನಡೆದಿದೆ ಎನ್ನಲಾದ ಹಾಲಿನ ಮಿಶ್ರಣ ಅಕ್ರಮ ವಿಚಾರ ಬಯಲಾಗುತ್ತಿದ್ದಂತೆ ಸ್ವತಃ ಚಿಮುಲ್ ಎಂ.ಡಿ. ಶ್ರೀನಿವಾಸಗೌಡ ಅಲರ್ಟ ಆಗಿದ್ದು, ಡೈರಿಯ ಸಹಾಯಕ ಚೇತನ್ ನನ್ನು ಕೆಲಸದಿಂದ ವಜಾ ಮಾಡಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಸರ್ಕಾರಿ ಬಾಲಕಿಯರ ಮಂದಿರದಲ್ಲಿ ರಾಕ್ಷಸೀಯ ಕೃತ್ಯಗಳು ಬಯಲು

ಹಾಗೂ ಹಾಲಿನ ಟ್ಯಾಂಕರ್ ನ ಚಾಲಕನ ಮಾರ್ಗ ಬದಲಾವಣೆ ಮಾಡಿ, ಹಾಲಿಗೆ ನೀರು ಮಿಶ್ರಣ ಕಳ್ಳಾಟ ತನಿಖೆಗೆ ಸಮಿತಿಯೊಂದನ್ನು ರಚಿಸಿದ್ದು, ಅಕ್ರಮ ತಡೆಗಟ್ಟುವ ಭರವಸೆ ನೀಡಿದ್ದಾರೆ. ನಂದಿನಿ ಹಾಲು ಹಾಗೂ ಅದರ ಉತ್ಪನ್ನಗಳು ಪರಿಶುದ್ದ ಅನ್ನೊ ಮಾತಿದೆ. ಇಂಥದರಲ್ಲಿ ಕೆಲವು ಡೈರಿ ಸಿಬ್ಬಂದಿಗಳು ದುರಾಸೆಗೆ ಬಿದ್ದು, ಹಾಲಿಗೆ ನೀರು ಮಿಶ್ರಣ ಮಾಡಿ ನಂದಿನಿ ನಂಬಿಕೆಗೆ ಧಕ್ಕೆ ತರುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ