AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿ ಮೇಲೆ ಕ್ಲರ್ಕ್ ಅತ್ಯಾಚಾರ: ಪರೀಕ್ಷೆ ಗೈಡ್ ಮಾಡ್ತೇನೆಂದು ಬಲೆಗೆ ಬೀಳಿಸಿಕೊಂಡಿದ್ದ SDA

ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಗೈಡ್ ಮಾಡುತ್ತೇನೆಂದು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪ ಕಾಲೇಜಿನ ಕ್ಲರ್ಕ್ ಮೇಲೆ ಕೇಳಿಬಂದಿದೆ. ಸರ್ಕಾರಿ ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅದೇ ಕಾಲೇಜಿನ ಕ್ಲರ್ಕ್ ಅತ್ಯಾಚಾರ ಎಸಗಿ ಗರ್ಭೀಣಿ ಮಾಡಿದ ಆರೋಪ ಕೇಳಿ ಬಂದಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ವಿದ್ಯಾರ್ಥಿನಿ ಮೇಲೆ ಕ್ಲರ್ಕ್ ಅತ್ಯಾಚಾರ: ಪರೀಕ್ಷೆ ಗೈಡ್ ಮಾಡ್ತೇನೆಂದು ಬಲೆಗೆ ಬೀಳಿಸಿಕೊಂಡಿದ್ದ SDA
Bhimaraj
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jul 08, 2025 | 2:13 PM

Share

ಚಿಕ್ಕಬಳ್ಳಾಪುರ, (ಜುಲೈ 07): ಡಿಗ್ರಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸ (sexual assault) ಆಕೆಯನ್ನು ಗರ್ಭಿಣಿ ಮಾಡಿರುವ ಆರೋಪ ಚಿಕ್ಕಬಳ್ಳಾಪುರ (Chikkaballapur) ಡಿಗ್ರಿ ಕಾಲೇಜಿನ ಕ್ಲರ್ಕ್​ ವಿರುದ್ಧ ಕೇಳಿಬಂದಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಗೈಡ್ ಮಾಡುವ ನೆಪದಲ್ಲಿ SDA ಭೀಮರಾಜ್ ಎನ್ನುವಾತ ವಿದ್ಯಾರ್ಥಿನಿಯನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ಈ ಸಂಬಂಧ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪೊಲೀಸರು ಕ್ಲಕ್​ ಭೀಮರಾಜ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮತ್ತೊಂದೆಡೆ ಏಕೆ ದೂರು ಕೊಟ್ಟೆ ಎಂದು ಆರೋಪಿ ಭೀಮರಾಜ್ ಪರವಾಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಲಾಗುತ್ತಿದೆ ಎನ್ನಲಾಗಿದೆ.

ಈ ಸಂಬಂಧ ವಿದ್ಯಾರ್ಥಿನಿ ಈಗ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಕ್ಲರ್ಕ್​ ವಿರುದ್ಧ ಅತ್ಯಾಚಾರ ಪ್ರಕರಣ ದೂರು ದಾಖಲು ಮಾಡಿದ್ದಾಳೆ. ಯು.ಪಿ.ಎಸ್.ಸಿ. ಪರೀಕ್ಷೆ ಬರೆದು ಐ.ಎ.ಎಸ್ ಅಧಿಕಾರಿಯಾಗಬೇಕು ಎಂದುಕೊಂಡಿದ್ದ ಬಿಎಸ್ಸಿ ವಿದ್ಯಾರ್ಥಿನಿಯೊರ್ವಳು, ತಾನು ವಿದ್ಯಾಭ್ಯಾಸ ಮಾಡುತ್ತಿದ್ದ ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿದವರನ್ನು ಹುಡುಕಾಡುತ್ತಿದ್ದಾಗ ಕ್ಲರ್ಕ್​ ಭೀಮರಾಜ್ ಬಿ ಎನ್ನುವತ ಸಿಕ್ಕಿದ್ದಾನೆ. ಇಬ್ಬರ ಪರಿಚಯ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಗೈಡ್ ಮಾಡುತ್ತೇನೆ. ಹಾಗೇ ನನ್ನ ಪತ್ನಿಯಿಂದಲೂ ಗೈಡ್ ಮಾಡಿಸ್ತಿನಿ ಎಂದು ಪುಸಲಾಯಿಸಿ ವಿದ್ಯಾರ್ಥಿನಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅನುಮಾನದ ಭೂತ: ಪತ್ನಿಯ ಮುಖವನ್ನು ಚಾಕುವಿನಿಂದ ವಿರೂಪಗೊಳಿಸಿದ ಪತಿ

ಇನ್ನೂ ಪೊಲೀಸರು ಆರೋಪಿ ಭೀಮರಾಜ್ ಬಿ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಆರೋಪಿ ತಾನು ಮಾಡಿದ ಪಾಪದ ಕೆಲಸ ಒಪ್ಪಿಕೊಂಡಿದ್ದಾನಂತೆ. ಇದರಿಂದ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮತ್ತೊಂದೆಡೆ ಆರೋಪಿಗೆ ಮದುವೆಯಾಗಿ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ. ಪತ್ನಿ ಚಿಕ್ಕಬಳ್ಳಾಪುರದ ಸರ್ಕಾರಿ ಕಚೇರಿಯೊಂದರಲ್ಲಿ ಸರ್ಕಾರಿ ನೌಕರಳಾಗಿ ಕೆಲಸ ಮಾಡ್ತಿದ್ದಾಳೆ. ಹೀಗಿದ್ದರೂ ತನ್ನದೆ ಕಾಲೇಜಿನ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಆಕೆ ವಿದ್ಯಾಬ್ಯಾಸಕ್ಕೆ ಮುಳ್ಳಾಗಿದ್ದಾನೆ.

ಚಿಕ್ಕಬಳ್ಳಾಪುರ ಮಹಿಳಾ ಠಾಣೆ ಪೊಲೀಸರು, ಆರೋಪಿ ಭೀಮರಾಜ್ ಬಿ ವಿರುದ್ದ ಭಾರತೀಯ ನ್ಯಾಯ ಸಂಹಿತೆಯಡಿ ಅತ್ಯಾಚಾರ, ಪ್ರಾಣ ಬೆದರಿಕೆ, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದು ತನಿಖೆ ತೀವ್ರಗೋಳಿಸಿದ್ದಾರೆ.

Published On - 8:46 pm, Mon, 7 July 25

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ