AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಟ್ರಮೊನಿ ಮೂಲಕ ಮಹಿಳೆಯರಿಗೆ ವಂಚನೆ: ಮುದುಕನ ಮದ್ವೆ ಕಥೆ-ವ್ಯಥೆ

ಡೈವರ್ಸಿ ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಂಡು ವಂಚಿಸುತ್ತಿದ್ದ ಸುರೇಶ್ ನಾಯ್ಡು ಎಂಬಾತನನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮರುಮದುವೆಗೆ ನೋಂದಾಯಿಸಿಕೊಂಡು ಮಹಿಳೆಯರಿಂದ ಹಣ ಪಡೆದು ವಂಚಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ. ಒಬ್ಬ ಮಹಿಳೆಯಿಂದ 2.80 ಲಕ್ಷ ರೂಪಾಯಿ ಪಡೆದಿರುವುದು ದೃಢಪಟ್ಟಿದೆ. ಆರೋಪಿ ತನ್ನ ಆರ್ಥಿಕ ಸಂಕಷ್ಟದಿಂದಾಗಿ ಈ ಕೃತ್ಯ ಎಸಗಿದ್ದಾನೆ ಎಂದು ಒಪ್ಪಿಕೊಂಡಿದ್ದಾನೆ.

ಮ್ಯಾಟ್ರಮೊನಿ ಮೂಲಕ ಮಹಿಳೆಯರಿಗೆ ವಂಚನೆ: ಮುದುಕನ ಮದ್ವೆ ಕಥೆ-ವ್ಯಥೆ
ಆರೋಪಿ ಸುರೇಶ್​ ನಾಯ್ಡು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:May 09, 2025 | 6:02 PM

Share

ಚಿಕ್ಕಬಳ್ಳಾಪುರ, ಮೇ 09: ಡೈವರ್ಸಿ ಮ್ಯಾಟ್ರಿಮೋನಿ ಸೈಟ್​ನಲ್ಲಿ ಮರು ಮದುವೆಗೆ ನೊಂದಣಿ ಮಾಡಿಕೊಂಡಿದ್ದ ಮಹಿಳೆಯರಿಗೆ ವಂಚಿಸುತ್ತಿದ್ದ ವೃದ್ಧನನ್ನು ಚಿಕ್ಕಬಳ್ಳಾಪುರ ಪೊಲೀಸರು (Chikkaballapur Police) ಬಂಧಿಸಿದ್ದಾರೆ. ಬೆಂಗಳೂರಿನ (Bengaluru) ಮಹಾದೇವಪುರ ನಿವಾಸಿ ಸುರೇಶ ನಾಯ್ಡು ಇ (61) ಬಂಧಿತ ಆರೋಪಿ. ಸುರೇಶ ನಾಯ್ಡುಗೆ ಈಗಾಗಲೇ ಎರಡು ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ.

ಆದರೂ ಕೂಡ ಆರೋಪಿ ಸುರೇಶ್​ ನಾಯ್ಡು ಡೈವ​ರ್ಸಿ ಮ್ಯಾಟ್ರಿಮೋನಿ ಸೈಟ್​ನಲ್ಲಿ ಮರು ಮದುವೆಗೆ ನೊಂದಣಿ ಮಾಡಿಕೊಂಡಿದ್ದ, ಮಹಿಳೆಯರಿಗೆ “ತಮ್ಮ ಮದುವೆಯಾಗುವುದಾಗಿ ನಂಬಿಸುತ್ತಿದ್ದನು. ಬಳಿಕ ಮಹಿಳೆಯರಿಂದ ಹಣ ಪಡೆದು ವಂಚನೆ ಮಾಡುತ್ತಿದ್ದನು. ಇದ ರೀತಿ ಚಿಕ್ಕಬಳ್ಳಾಪುರದ ಲೇಡಿ ನರ್ಸಿಂಗ್ ಆಪೀಸರ್ ಒಬ್ಬರನ್ನು ಮದುವೆ ಮಾಡೊಕೊಳ್ಳುವುದಾಗಿ ನಂಬಿಸಿ ಅವರಿಂದ 2.80 ಲಕ್ಷ ರೂ. ಪಡೆದು ಬ್ಲಾಕ್ ಮೆಲ್ ಮಾಡಿ ಬೆದರಿಕೆ ಹಾಕಿದ್ದಾನೆ.

ನಂತರ, ಮಹಿಳೆ ಚಿಕ್ಕಬಳ್ಳಾಪುರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಸುರೇಶ ನಾಯ್ಡು ಅನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ, ಬೆಂಗಳೂರಿನ ಯಶವಂತಪುರದಲ್ಲಿ ಓರ್ವ ಮಹಿಳೆ, ಮಲೇಷ್ಯಾದಲ್ಲಿ ಓರ್ವ ಮಹಿಳೆ, ಚಿಕ್ಕಬಳ್ಳಾಪುರದಲ್ಲಿ ಓರ್ವ ಮಹಿಳೆ ಸೇರಿದಂತೆ ಕೆಲವು ಮಹಿಳೆಯರಿಗೆ ವಂಚನೆ ಮಾಡಿರುವುದು ಬಯಲಾಗಿದೆ.

ಇದನ್ನೂ ಓದಿ
Image
ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು
Image
ಚಿಕ್ಕಬಳ್ಳಾಪುರ: ಕಂಟೇನರ್​ ಬಿದ್ದು ತಂದೆ-ಮಗಳು ಸ್ಥಳದಲ್ಲೇ ಸಾವು
Image
ನಂದಿ ಬೆಟ್ಟ ರೋಪ್​ ವೇ: ಅರಣ್ಯ ಇಲಾಖೆಯಿಂದ ಸಿಕ್ತು ಗ್ರೀನ್​ ಸಿಗ್ನಲ್
Image
ಮನೆಯಿಂದ ಆಚೆ ಹಾಕಿದ್ದ ಮಗಳಿಗೆ ತಕ್ಕ ಪಾಠ ಕಲಿಸಿದ ಅಪ್ಪ: ಮಗಳಿಗೆ ತಕ್ಕ ತಂದೆ

ಇದನ್ನೂ ಓದಿ: ಚಿಕ್ಕಬಳ್ಳಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 5140 ಮೊಬೈಲ್​ಗಳನ್ನ ಕದ್ದಿದ್ದ ಕಳ್ಳರ ಬಂಧನ

ಸುರೇಶ ನಾಯ್ಡು ಇ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ತನ್ನ ತಂದೆ ಮೃತಪಟ್ಟ ನಂತರ ಆರ್ಥಿಕ ಸಂಕಷ್ಟವಾಗಿ ಲಕ್ಷ ಲಕ್ಷ ಸಾಲ ಮಾಡಿಕೊಂಡಿದ್ದು, ಸಾಲದ ಹಣ ತೀರಿಸಲು ಮಹಿಳೆಯರಿಗೆ ವಂಚನೆ ಮಾಡುತ್ತಿದ್ದಾಗಿ ಬಾಯಿ ಬಿಟ್ಟಿದ್ದಾನೆ. ಮಾಡಿದ ತಪ್ಪಿಗೆ ಸುರೇಶ ನಾಯ್ಡು ಈಗ ಪೊಲೀಸರ ಅತಿಥಿಯಾಗಿದ್ದು, ನೊಂದ ಮಹಿಳೆಯರಿಗೆ ಬಾಳು ಕೊಡುವ ನೆಪದಲ್ಲಿ ವಂಚನೆ ಮಾಡಿರುವುದು ಬಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:00 pm, Fri, 9 May 25

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ