
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 10: ಅವರಿಬ್ಬರು ಹಣ್ಣಿನ ವ್ಯಾಪಾರಿಗಳು. ಜೊತೆಗೆ ಗೆಳೆಯರು (friend) ಹೌದು. ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲೇ ಕೂತು ವ್ಯಾಪಾರ ಮಾಡುತ್ತಿದ್ದರು. ಆದರೆ ಮಂಗಳವಾರ ಒಂದು ದುರಂತ ನಡೆದು ಹೋಗಿದೆ. ತಮಾಷೆಯಲ್ಲೇ ಶುರುವಾದ ಜಗಳ, ನೋಡ ನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಅರ್ಬಾಜ್ನನ್ನು ಫರ್ಹಾದ್ ಕೊಲೆ (kill) ಮಾಡಿದ್ದಾನೆ.
ಅರ್ಬಾಜ್ ಮತ್ತು ಫರ್ಹಾದ್, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ನಿನ್ನೆ ಕೂಡ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಆದರೆ ಇಬ್ಬರ ನಡುವೆ ನಿನ್ನೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಅರ್ಬಾಜ್‌ನ ಕೊಲೆ ಆಗಿದೆ.
ಚಿಂತಾಮಣಿ ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆ ಎದುರು ಇಬ್ಬರು ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ನಿತ್ಯವೂ ಇಬ್ಬರು ಪರಸ್ಪರ ತಮ್ಮ ಮಾತಿನ ಮೂಲಕವೇ ಕಾಲೆಳೆಯುತ್ತಿದ್ದರು. ಅದರಂತೆಯೇ ನಿನ್ನೆ ಮಾತುನಾಡುತ್ತಾ ಗಲಾಟೆಗೆ ನಿಂತಿದ್ದಾರೆ. ನೋಡ ನೋಡುತ್ತಿದ್ದಂತೆ ಫರ್ಹಾದ್, ಅರ್ಬಾಜ್ ಮೇಲೆ ಕತ್ತರಿಯಿಂದ ಇರಿದಿದ್ದಾನೆ.
ಇದನ್ನೂ ಓದಿ: ಪ್ರೇಯಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ಪ್ರಿಯಕರ ಆತ್ಮಹತ್ಯೆ, ಡೆತ್ ನೋಟ್ ನಲ್ಲೇನಿದೆ?
ಇಬ್ಬರ ನಡುವೆ ತಮಾಷೆಯಿಂದಲೇ ಆರಂಭವಾದ ಜಗಳ ವಿಕೋಪಕ್ಕೆ ಹೋಗಿದೆ. ಫರ್ಹಾದ್ ಸೀದಾ ಕತ್ತರಿಯಿಂದ ಅರ್ಬಾಜ್ ಕುತ್ತಿಗೆಗೆ ಇರಿದಿದ್ದಾನೆ. ರಕ್ತಸ್ರಾವವಾಗಿ ಅಲ್ಲೇ ಕುಸಿದು ಬಿದ್ದಿದ್ದ ಅರ್ಬಾಜ್‌ನನ್ನ ಎದುರಲ್ಲೇ ಇರುವ ಆಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಪ್ರಾಣ ಬಿಟ್ಟಿದ್ದಾನೆ. ಸದ್ಯ ಚಿಂತಾಮಣಿ ನಗರ ಪೊಲೀಸರು ಆರೋಪಿ ಫರ್ಹಾದ್‌ನನ್ನ ಬಂಧಿಸಿದ್ದಾರೆ.
ನಿತ್ಯ ಜೊತೆಗೆ ಕೂತು ವ್ಯಾಪಾರ ಮಾಡುತ್ತಿದ್ದರು. ಆದರೆ ಅವರ ನಡುವೆ ತಮಾಷೆಗೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ದುರಂತವೇ ಸರಿ.
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದ ಘಟನೆ ದಾವಣಗೆರೆ ನಗರದ ಆರ್ಟಿಒ ಕಚೇರಿ ಬಳಿಯ ಬೂದಾಳ್ ರಸ್ತೆಯಲ್ಲಿ ನಡೆದಿತ್ತು.
ಇದನ್ನೂ ಓದಿ: ಮಲಗಿದ್ದಾಗ ಗಂಡನನ್ನು ಕೊಲ್ಲಲು ಪತ್ನಿ ಯತ್ನ: ಪತಿ ಸಾವಿನಿಂದ ಬಚಾವ್ ಆಗಿದ್ದೇ ರೋಚಕ
ಅಪಘಾತದಲ್ಲಿ ಮೃತಪಟ್ಟ ಯುವಕ ಉತ್ತರ ಪ್ರದೇಶ ಮೂಲದವನು ಎಂದು ತಿಳಿದು ಬಂದಿದ್ದು, ಯುಪಿಯಿಂದ ಬಂದು ಶಿವನಗರದಲ್ಲಿ ಸಲೂನ್ ಶಾಂಪ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಇನ್ನಿಬ್ಬರ ಮಾಹಿತಿ ತಿಳಿದು ಬಂದಿರಲಿಲ್ಲ. ಗಂಭೀರವಾಗಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿತ್ತು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:53 am, Wed, 10 September 25