AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 illumination: ಜಿ20 ಶೃಂಗಸಭೆ ಪ್ರಯುಕ್ತ ನಂದಿಯ ಭೋಗನಂದೀಶ್ವರ ದೇವಸ್ಥಾನಕ್ಕೆ ಅದ್ಭುತ ವಿದ್ಯುತ್ ದೀಪಾಲಂಕಾರ

Bhoganandishwara temple: ಈ ದೀಪಾಲಂಕಾರವನ್ನು ಡಿ. ರವರೆಗೂ ನಡೆಸಲು ಯಾವುದೇ ಲೋಪ ಉಂಟಾಗದಂತೆ ಅಗತ್ಯ ಸೌಕರ್ಯ ಕಲ್ಪಿಸಲು ಜಿಲ್ಲಾಧಿಕಾರಿ ನಾಗರಾಜ್ ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು.

G20 illumination: ಜಿ20 ಶೃಂಗಸಭೆ ಪ್ರಯುಕ್ತ ನಂದಿಯ ಭೋಗನಂದೀಶ್ವರ ದೇವಸ್ಥಾನಕ್ಕೆ ಅದ್ಭುತ ವಿದ್ಯುತ್ ದೀಪಾಲಂಕಾರ
ಜಿ20 ಶೃಂಗಸಭೆ ಪ್ರಯುಕ್ತ ನಂದಿಯ ಭೋಗನಂದೀಶ್ವರ ದೇವಸ್ಥಾನಕ್ಕೆ ಅದ್ಭುತ ವಿದ್ಯುತ್ ದೀಪಾಲಂಕಾರ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Dec 05, 2022 | 5:46 PM

ಚಿಕ್ಕಬಳ್ಳಾಪುರ : ಭಾರತವು ಜಿ20 ಶೃಂಗಸಭೆಯ ಆತಿಥ್ಯ ವಹಿಸಿರುವುದರಿಂದ ವಿಶ್ವ ಪ್ರಸಿದ್ಧ ನಂದಿ ಭೋಗನಂದೀಶ್ವರ ದೇವಸ್ಥಾನಕ್ಕೆ (Chikkaballapur Bhoganandishwara temple) ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಭಾರತ ಜಿ–20 ಗುಂಪಿನ ಅಧ್ಯಕ್ಷತೆಯನ್ನು ಇತ್ತೀಚೆಗೆ ವಹಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳೂ (UNESCO world heritage site) ಸೇರಿದಂತೆ ದೇಶದ 100 ಸ್ಮಾರಕಗಳು ಡಿಸೆಂಬರ್ 1 ರಿಂದ 7 ರವರೆಗೆ ಜಿ–20 ಲಾಂಛನವನ್ನು ಒಳಗೊಂಡಂತೆ ದೀಪಾಲಂಕಾರದಿಂದ ಝಗಮಗಿಸಲಿವೆ (G20 illumination).

ದೇಶದ ನೂರು ಪ್ರಮುಖ ಪ್ರವಾಸಿ ತಾಣಗಳಿಗೆ ಡಿಸೆಂಬರ್ 7ರ ವರೆಗೆ ವಿದ್ಯುತ್ ದೀಪಾಲಂಕಾರ ಇರಲಿದೆ. ಇದರಲ್ಲಿ ನಂದಿ ಕ್ಷೇತ್ರವೂ ಸೇರಿದೆ. ಭೋಗನಂದೀಶ್ವರ ದೇವಸ್ಥಾನದ ಭಿತ್ತಿಗಳು, ಪಡಸಾಲೆಗಳು, ಮಂಟಪಗಳು, ಆವರಣದಲ್ಲಿನ ಎಲ್ಲಾ ದೇವಸ್ಥಾನಗಳು ಸೇರಿದಂತೆ ಹೊರಾಂಗಣದ ಸ್ಮಾರಕಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ. ದೇವಾಲಯದಲ್ಲಿ ಎಲ್ ಇಡಿ ಪರದೆ ಅಳವಡಿಸಲಾಗಿದ್ದು, ಜಿ 20 ಶೃಂಗಸಭೆಯ ವಿವರವನ್ನು ಅದರಲ್ಲಿ ಬಿತ್ತರವಾಗುತ್ತಿದೆ.

ಈ ದೀಪಾಲಂಕಾರವನ್ನು ಡಿಸೆಂಬರ್ 7 ರವರೆಗೂ ನಡೆಸಲು ಯಾವುದೇ ಲೋಪ ಉಂಟಾಗದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಜಿಲ್ಲಾಧಿಕಾರಿ ಎನ್. ನಾಗರಾಜ್ ಅವರು ಇಂದು (ಸೋಮವಾರ) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು. ಜಿಲ್ಲಾಡಳಿತ ಉತ್ತಮ ಸಹಕಾರ ನೀಡುತ್ತಿರುವುದಕ್ಕೆ ಭಾರತದ ಪುರಾತತ್ವ ಸರ್ವೇಕ್ಷಣ ಇಲಾಖೆ (ಆರ್ಕಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ -Archaeological Survey of India -ASI) ಸಂಸ್ಥೆಯ ನಿರ್ದೇಶಕರು ಹಾಗೂ ದೀಪಾಲಂಕಾರ ವ್ಯವಸ್ಥೆಯ ನೋಡೆಲ್ ಅಧಿಕಾರಿ ಮದನ್ ಸಿಂಗ್ ಚೌಹಾಣ್ ಅವರು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಧನ್ಯವಾದ ತಿಳಿಸಿದರು.

ಸಭೆಯ ನಂತರ ಜಿಲ್ಲಾಧಿಕಾರಿಗಳು ಮತ್ತು ಪುರಾತತ್ವ ಇಲಾಖೆಯ ಅಧಿಕಾರಿಗಳು ಭೋಗನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಎಲ್. ನಾಗೇಶ್, ಪುರಾತತ್ವ ಇಲಾಖೆಯ ಬೆಂಗಳೂರು ವೃತ್ತದ ಅಧೀಕ್ಷಕ ಬಿಪಿನ್ ಚಂದ್ರ, ಉಪವಿಭಾಗಾಧಿಕಾರಿ ಡಾ.ಸಂತೋಷ್ ಕುಮಾರ್, ತಹಸೀಲ್ದಾರ್ ಗಣಪತಿ ಶಾಸ್ತ್ರೀ, ಮುಜರಾಯಿ ತಹಸೀಲ್ದಾರ್ ಭಾಗ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ಜಿ20 ಶೃಂಗವು 19 ದೇಶಗಳನ್ನು ಒಳಗೊಂಡಿದೆ: ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ದಕ್ಷಿಣ ಕೊರಿಯಾ, ಮೆಕ್ಸಿಕೋ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಯುಕೆ, ಯುಎಸ್ಎ ಮತ್ತು ಯುರೋಪಿಯನ್ ಯೂನಿಯನ್ (EU).

ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ