ಚಿಕ್ಕಬಳ್ಳಾಪುರ: 2018ರಲ್ಲಿ ಬಾಲಕಿಯ ಅಪಹರಣ, ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 12 ವರ್ಷ ಜೈಲು, 30 ಸಾವಿರ ದಂಡ ವಿಧಿಸಿದ ಕೋರ್ಟ್
2018ರಲ್ಲಿ ನಡೆದಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಕೋರ್ಟ್ ಇಂದು ಶಿಕ್ಷೆ ಪ್ರಕಟಿಸಿದೆ
ಚಿಕ್ಕಬಳ್ಳಾಪುರ: 2018ರ ಜನವರಿ 7ರಂದು ಬಾಲಕಿಯೋರ್ವಳನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ, 30 ಸಾವಿರ ರೂ. ದಂಡದ ಶಿಕ್ಷೆ ವಿಧಿಸಿ ಚಿಕ್ಕಬಳ್ಳಾಪುರ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಬಾಲಕಿಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ಪ್ರಕಟಿಸಿದೆ. ಈ ಪ್ರಕರಣ ಜಿಲ್ಲೆಯ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಸರಸ್ವತಿ ನಗರಕ್ಕೆ ಹೊಸ ಪೊಲೀಸ್ ಠಾಣೆ ಮಂಜೂರು ಬೆಂಗಳೂರು: ನಗರದ ಪಶ್ಚಿಮ ವಿಭಾಗ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಕಾರಣ ಗೋವಿಂದರಾಜ ನಗರದ ಸರಸ್ವತಿ ನಗರದಲ್ಲಿ ನೂತನ ಪೊಲೀಸ್ ಠಾಣೆ ಸ್ಥಾಪಿಸಲು ಸರ್ಕಾರ ಅನುಮತಿ ನೀಡಿ ಆದೇಶ ಪ್ರಕಟಿಸಿದೆ. ಅಪರಾಧ ಪ್ರಕರಣಗಳಾದ ಮೊಬೈಲ್ ಅಪಹರಣ, ಸರಗಳ್ಳತನ, ವಾಹನ ಕಳವು ಪ್ರಕರಣಗಳು ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿವೆ. ವಿಜಯನಗರದಲ್ಲಿ A ಪಟ್ಟಿ ರೌಡಿಶೀಟರ್ 42 ಜನ, ಬಿ ಪಟ್ಟಿ ರೌಡಿಶೀಟರ್ 51, ಒಟ್ಟು 93 ರೌಡಿಶೀಟರ್ಗಳಿದ್ದಾರೆ. ಹಾಗಾಗಿ ವಿಜಯನಗರ ಠಾಣೆಯನ್ನ ವಿಭಜಿಸಿ ನೂತನ ಪೊಲೀಸ್ ಠಾಣೆ ತೆರೆಯಲು ಮನವಿ ಮಾಡಲಾಗಿತ್ತು. ಮನವಿಯನ್ನು ಪುರಸ್ಕರಿಸಿದ ಸರ್ಕಾರ ಅಪರಾಧ ಪ್ರಕರಣಗಳನ್ನು ತಡೆಯುವ ಕಾರಣದಿಂದ ಹೊಸ ಪೊಲೀಸ್ ಠಾಣೆ ತೆರೆಯಲು ಆದೇಶ ನೀಡಿದೆ.
ಹೆಬ್ಬಗೋಡಿ ಪೊಲೀಸ್ ಠಾಣೆಯ ಗೋಡೆಯಲ್ಲಿ ಬಿರುಕು ಮೆಟ್ರೋ ಕಾಮಗಾರಿಯ ಕಾರಣದಿಂದ ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣೆಯ ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಕಾಮಗಾರಿ ನಡೆಸುತ್ತಿರುವ ಬಿಎಂಆರ್ಸಿಎಲ್ ಈಗಾಗಲೇ ಪೊಲೀಸ್ ಠಾಣೆಯನ್ನು ತೆರವುಗೊಳಿಸುವಂತೆ ಸೂಚಿಸಿದೆ. ಆದರೆ ಪೊಲೀಸ್ ಠಾಣೆಯ ಬಳಿಯ ಕಾಮಗಾರಿಯನ್ನು ಮುಂಚಿತವಾಗಿ ಮುಗಿಸಿಕೊಡಲು ಪೊಲೀಸ್ ಸಿಬ್ಬಂದಿ ಮನವಿ ಮಾಡಿದ್ದಾರೆ. ಮೆಟ್ರೋ ಪಿಲ್ಲರ್ ಮಧ್ಯೆಯೇ ಹೆಬ್ಬಗೋಡಿ ಉಪ ವಿಭಾಗ ಪೊಲೀಸ್ ಠಾಣೆಯಿದ್ದು, ಶಬ್ದ ಮಾಲಿನ್ಯದ ಮಧ್ಯೆ ಕೆಲಸ ಮಾಡಲು ಪೊಲೀಸರಿಗೆ ಕಿರಿಕಿರಿಯಾಗುತ್ತಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:
Afghanistan Crisis: ಅಫ್ಘಾನಿಸ್ತಾನದಲ್ಲಿ ಇಂದು ಅಥವಾ ನಾಳೆ ತಾಲಿಬಾನ್ ಸರ್ಕಾರ ರಚನೆ ಸಾಧ್ಯತೆ
30 ತಾಸು ಕೊರೆಯುವ ಚಳಿಯಲ್ಲಿ ನಿಂತು ಅಫ್ಘಾನಿಸ್ತಾನದಲ್ಲಿ ಬೈಡೆನ್ ಜೀವ ಕಾಪಾಡಿದ್ದವಗೆ ವಿಸಾ ಕೊಡಲು ಅಮೆರಿಕ ಮೀನಮೇಷ