AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ರಸ್ತೆ ಅಪಘಾತದಲ್ಲಿ KPTCL​​​ನ ಇಬ್ಬರು ಸಿಬ್ಬಂದಿ, ಓರ್ವ ಲೈನ್​ ಮ್ಯಾನ್​ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕೆಪಿಟಿಸಿಎಲ್​​ನ ಇಬ್ಬರು ಸಿಬ್ಬಂದಿ ಮತ್ತು ಬೆಸ್ಕಾಂನ ಓರ್ವ ಲೈನ್​ ಮ್ಯಾನ್​ ಮೃತಪಟ್ಟಿದ್ದಾರೆ. ಓರ್ವ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕಬಳ್ಳಾಪುರ: ರಸ್ತೆ ಅಪಘಾತದಲ್ಲಿ KPTCL​​​ನ ಇಬ್ಬರು ಸಿಬ್ಬಂದಿ, ಓರ್ವ ಲೈನ್​ ಮ್ಯಾನ್​ ಸಾವು
ಅಪಘಾತವಾದ ಕಾರು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ವಿವೇಕ ಬಿರಾದಾರ|

Updated on:Jun 07, 2024 | 2:59 PM

Share

ಚಿಕ್ಕಬಳ್ಳಾಪುರ, ಜೂನ್​ 07: ಗೌರಿಬಿದನೂರು (Gauribidanur) ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕರ್ನಾಟಕ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ನ ಇಬ್ಬರು ಸಿಬ್ಬಂದಿ ಮತ್ತು ಬೆಸ್ಕಾಂನ (BESCOM) ಓರ್ವ ಲೈನ್​ ಮ್ಯಾನ್​ ಮೃತಪಟ್ಟಿದ್ದಾರೆ. ಕೆಪಿಟಿಸಿಎಲ್ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಮೃತರು. ಓರ್ವ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ನಾಲ್ವರು ಬ್ರಿಜಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ವಾಟದಹೊಸಹಳ್ಳಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಯಲ್ಲಿ ಉರುಳಿ ಬಿದ್ದಿದೆ. ಕಳೆದ ರಾತ್ರಿಯೇ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕುತ್ತಿದ್ದಾರೆ.

ಲಾರಿ ಡಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

ವಿಜಯನಗರ: ಖಾಸಗಿ ಬಸ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾನೆ. ಹಲವರಿಗೆ ಗಾಯಗಳಾಗಿವೆ. ಹೊಸಪೇಟೆ ತಾಲೂಕಿನ ಜಂಬಯ್ಯನ ಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ಖಾಸಗಿ ಬಸ್ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಬರುತ್ತಿತ್ತು. ಲಾರಿ ಹೊಸಪೇಟೆ ಕಡೆಯಿಂದ ಕೂಡ್ಲಿಗಿ ಕಡೆ ಹೊರಟಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ತಂತಿ ತುಳಿದು ಬಾಲಕಿ ಸಾವು

ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿಯಲ್ಲಿ ನಡೆದಿದೆ. ಎರಡನೇ ತರಗತಿ ಓದುತ್ತಿದ್ದ 8 ವರ್ಷದ ಬಾಲಕಿ ತುಳಸಿ ಮೃತ ದುರ್ದೈವಿ.  ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:32 am, Fri, 7 June 24

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ