ಉಪನ್ಯಾಸಕ ಕಿರುಕುಳ ಆರೋಪ: ವಿಡಿಯೋ ಮಾಡಿಟ್ಟು ವಿದ್ಯಾರ್ಥಿ ಆತ್ಮಹತ್ಯೆ, ಸಮಸ್ಯೆ ಆಲಿಸುವಂತೆ ಚುಂಚಶ್ರೀಗೆ ಮನವಿ

ಖಾಸಗಿ ಡಿಪ್ಲೊಮಾ ಕಾಲೇಜಿನ ಉಪನ್ಯಾಸಕ ವಿನಃ ಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಅದೇ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿಗಳ ಸಮಸ್ಯೆ ಆಲಿಸುವಂತೆ ಮೃತ ವಿದ್ಯಾರ್ಥಿ ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಗೆ ಮನವಿ ಮಾಡಿದ್ದಾನೆ.

ಉಪನ್ಯಾಸಕ ಕಿರುಕುಳ ಆರೋಪ: ವಿಡಿಯೋ ಮಾಡಿಟ್ಟು ವಿದ್ಯಾರ್ಥಿ ಆತ್ಮಹತ್ಯೆ, ಸಮಸ್ಯೆ ಆಲಿಸುವಂತೆ ಚುಂಚಶ್ರೀಗೆ ಮನವಿ
ಮೃತ ವಿದ್ಯಾರ್ಥಿ ಗಜೇಂದ್ರ, ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 17, 2023 | 5:21 PM

ಚಿಕ್ಕಬಳ್ಳಾಪುರ, ನವೆಂಬರ್​​ 17: ಖಾಸಗಿ ಡಿಪ್ಲೊಮಾ ಕಾಲೇಜಿನ ಉಪನ್ಯಾಸಕ ವಿನಃ ಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಅದೇ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿ (Student) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ವಿದ್ಯಾರ್ಥಿ ಗಜೇಂದ್ರ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಈ ವಿಚಾರವಾಗಿ ಬಿ.ಜಿ.ಎಸ್ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಮಸ್ಯೆ ಆಲಿಸುವಂತೆ ಮೃತ ವಿದ್ಯಾರ್ಥಿ ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಗೆ ಮನವಿ ಮಾಡಿದ್ದಾನೆ.

ನಗರದ ಬಿ.ಜಿ.ಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೃತ ವಿದ್ಯಾರ್ಥಿ ಗಜೇಂದ್ರ 2 ವರ್ಷದ ಮೆಕ್ಯಾನಿಕಲ್ ವಿದ್ಯಾಭ್ಯಾಸ ಮಾಡುತ್ತಿದ್ದ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿ ಗ್ರಾಮದ ನಿವಾಸಿ. ಗಜೇಂದ್ರ ಆತ್ಮಹತ್ಯೆಗೂ ಮುನ್ನ ತನ್ನ ಮೊಬೈಲ್​ನಲ್ಲಿ ವಿಡಿಯೋ ರೆಕಾರ್ಡ ಮಾಡಿದ್ದು ತನ್ನ ಸಾವಿಗೆ ತನ್ನ ಕಾಲೇಜಿನ ಉಪನ್ಯಾಸಕ ಮಂಜುನಾಥ್​ ಕಾರಣ. ವಿನಃ ಕಾರಣ ತನ್ನನ್ನು ಟಾರ್ಗೆಟ್ ಮಾಡಿದ್ದು ಸಹಪಾಠಿಗಳ ಸಮ್ಮೂಖದಲ್ಲಿ ತನಗೆ ನಿಂದಿಸುವುದು, ನೋಟ್ ಬುಕ್ ಹರಿದು ಹಾಕುವುದನ್ನು ಮಾಡಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ಗದಗ: ಕುಡಿದ‌ ಮತ್ತಿನಲ್ಲಿ ತಾಯಿ ಮಡಿಲಲ್ಲಿದ್ದ ಹಸುಗೂಸನ್ನು ಹೊತ್ತೊಯ್ದ ತಂದೆ, ಮುಂದೇನಾಯ್ತು?

ನಿನ್ನೆ ಸಾಯಂಕಾಲವೆ ಗಜೇಂದ್ರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇಂದು ಆತ್ನ ಮೊಬೈಲ್ ಪೋನ್ ತೆರೆದು ನೋಡಿದಾಗ ಡೆತ್ ವಿಡಿಯೋ ದೊರಕಿದೆ. ಇದ್ರಿಂದ ಆಕ್ರೋಶಗೊಂಡ ಆತನ ಸಂಬಂಧಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು, ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜು ಎದುರು ಪ್ರತಿಭಟನೆ ನಡೆಸಿ ಉಪನ್ಯಾಸಕ ಮಂಜುನಾಥ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಾಸನ: ಆಗಿಲೆ ಗ್ರಾಮದ ಕುಂತಿ ಬೆಟ್ಟದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಬರ್ಬರ ಹತ್ಯೆ ಮಾಡಿದ ಪಾಗಲ್ ಪ್ರೇಮಿ

ಆದರೆ ಮಂಜುನಾಥ ಇಂದು ರಜೆ ಹಾಕಿದ್ದು ಕಾಲೇಜಿಗೆ ಬಂದಿಲ್ಲ. ನಂತರ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ವೈ.ಆರ್, ಉಪನ್ಯಾಸಕ ಮಂಜುನಾಥ್ ವಿರುದ್ದ ಇದುವರೆಗೂ ಮೃತ ವಿದ್ಯಾರ್ಥಿಯಾಗಲಿ, ಇಲ್ಲಾ ಬೇರೆ ವಿದ್ಯಾರ್ಥಿಗಳು ಆಗಲಿ ದೂರು ನೀಡಿಲ್ಲ. ಮೃತನ ಆರೋಪವನ್ನು ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದೇನೆ. ಆಡಳಿತ ಮಂಡಳಿ ಕ್ರಮ ಕೈಗೊಳ್ಳುತ್ತದೆ ಎಂದಿದ್ದಾರೆ.

ಅದೇನೊ ಸಮಸ್ಯೆ ಇದ್ರೂ ಕಾಲೇಜಿನ ಪ್ರೀನ್ಸಿಪಾಲ್, ಪೋಷಕರು, ಇಲ್ಲಾ ಪೊಲೀಸರ ಮೂಲಕ ಸಮಸ್ಯೆ ಬಗೆಯರಿಸಿಕೊಳ್ಳಬೇಕಿತ್ತು. ಆದರೆ ಸಾವಿಗೆ ಶರಣಾಗಿದ್ದು ಮಾತ್ರ ವಿಪರ್ಯಾಸ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್