AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿ ಪಿಎಸ್​​​​ಐ, ಎಎಸ್​​​​ಐ ಇದೀಗ ಲೋಕಾಯುಕ್ತ ಅತಿಥಿ

ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ವಿವಾದ ಪ್ರಕರಣದಲ್ಲಿ 'ಬಿ-ರಿಪೋರ್ಟ್' ಸಲ್ಲಿಸಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಅವರ ಮೇಲಿದೆ. ಮೊದಲ ಕಂತಾಗಿ 70,000 ರೂ. ಪಡೆಯುತ್ತಿದ್ದಾಗ ಎಎಸ್ಐ ವೆಂಕಟೇಶಪ್ಪ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು. ತನಿಖೆ ನಂತರ ಪಿಎಸ್ಐ ಶರಣಪ್ಪ ಕೂಡ ಬಂಧಿತರಾಗಿದ್ದು, ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತದ ಕಟ್ಟುನಿಟ್ಟಿನ ಕ್ರಮ ಪ್ರದರ್ಶಿಸಿದೆ.

'ಬಿ-ರಿಪೋರ್ಟ್' ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿ ಪಿಎಸ್​​​​ಐ, ಎಎಸ್​​​​ಐ ಇದೀಗ ಲೋಕಾಯುಕ್ತ ಅತಿಥಿ
ಪಿಎಸ್ಐ (PSI) ಶರಣಪ್ಪ ಮತ್ತು ಎಎಸ್ಐ (ASI) ವೆಂಕಟೇಶಪ್ಪ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Mar 03, 2026 | 10:38 PM

Share

ಚಿಕ್ಕಬಳ್ಳಾಪುರ, ಮಾ.3: ಜಮೀನು ವಿವಾದವೊಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಇಬ್ಬರು ಅಧಿಕಾರಿಗಳು ಈಗ ಲೋಕಾಯುಕ್ತ ಪೊಲೀಸರ ಅತಿಥಿಗಳಾಗಿದ್ದಾರೆ. ಪಿಎಸ್ಐ (PSI) ಶರಣಪ್ಪ ಮತ್ತು ಎಎಸ್ಐ (ASI) ವೆಂಕಟೇಶಪ್ಪ ಬಂಧಿತ ಆರೋಪಿಗಳು.

ಮೊಟ್ಲೂರು ಗ್ರಾಮದ ರಘು ಎಂಬುವವರ ಜಮೀನು ವಿವಾದಕ್ಕೆ ಸಂಬಂಧಿಸಿದ ಗಲಾಟೆ ಪ್ರಕರಣದಲ್ಲಿ ಅನುಕೂಲಕರವಾಗಿ ‘ಬಿ-ರಿಪೋರ್ಟ್’ (B-Report) ಸಲ್ಲಿಸಲು ಎಎಸ್ಐ ವೆಂಕಟೇಶಪ್ಪ 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಪಿಎಸ್ಐ ಶರಣಪ್ಪ ಅವರ ಸೂಚನೆಯ ಮೇರೆಗೆ ಎಎಸ್ಐ ವೆಂಕಟೇಶಪ್ಪ ಈ ಹಣದ ಡೀಲ್ ನಡೆಸುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್‌ ಶಾಸಕ

ಲಂಚದ ಹಣದ ಪೈಕಿ ಮೊದಲ ಕಂತಾಗಿ 70,000 ರೂಪಾಯಿ ಹಣವನ್ನು ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದ ಬಳಿ ರಘು ಅವರಿಂದ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಎಎಸ್ಐ ವೆಂಕಟೇಶಪ್ಪ ಅವರನ್ನು ವಶಕ್ಕೆ ಪಡೆದರು. ವೆಂಕಟೇಶಪ್ಪ ಹಣ ಪಡೆದ ಬೆನ್ನಲ್ಲೇ ವಿಚಾರಣೆ ನಡೆಸಿದ ಲೋಕಾಯುಕ್ತ ತಂಡ, ಪಿಎಸ್ಐ ಶರಣಪ್ಪ ಅವರ ಪಾತ್ರವನ್ನು ಖಚಿತಪಡಿಸಿಕೊಂಡು ಅವರನ್ನೂ ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆ ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್