AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣ: ತೆರೆವಿಗೆ ಯತ್ನಿಸಿದ್ದಕ್ಕೆ ತಹಶೀಲ್ದಾರ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಹೈಡ್ರಾಮಾ

ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿಯಲ್ಲಿ ನಿರ್ಮಾಣ ಹಂತದ ಮನೆ ತೆರವಿಗೆ ಮುಂದಾದಾಗ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ಕಟ್ಟಿರುವ ಆರೋಪ ಹಿನ್ನೆಲೆ ಕ್ರಮಕ್ಕೆ ಮುಂದಾದ ವೇಳೆ ತಹಶೀಲ್ದಾರ್ ಮತ್ತು ಜಿಲ್ಲಾಡಳಿತ ಹೆಸರು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಹೈಡ್ರಾಮಾವೇ ಸೃಷ್ಟಿಸಿದ್ದಾರೆ.

ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣ: ತೆರೆವಿಗೆ ಯತ್ನಿಸಿದ್ದಕ್ಕೆ ತಹಶೀಲ್ದಾರ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಹೈಡ್ರಾಮಾ
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ನಿರ್ಮಾಣ ಹಂತದ ಮನೆ, ತಹಶೀಲ್ದಾರ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Feb 14, 2026 | 6:26 PM

Share

ಚಿಕ್ಕಬಳ್ಳಾಪುರ, ಫೆಬ್ರವರಿ 14: ಆತನಿಗೆ ಹೆದ್ದಾರಿ ಬದಿಯೇ ಸ್ವಂತ ಜಮೀನಿದೆ. ಸ್ವಂತ ಜಮೀನಿಗೆ ಹೊಂದಿಕೊಂಡಂತೆ ಇರುವ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ (land dispute) ಮನೆ ನಿರ್ಮಾಣಕ್ಕೆ ಮುಂದಾಗಿದ್ದರು. ಇದರಿಂದ ಅಲ್ಲಿಯ ತಹಶೀಲ್ದಾರ್ ನಿರ್ಮಾಣ ಹಂತದ ಮನೆಯನ್ನು ತೆರೆವುಗೊಳಿಸುವುದಕ್ಕೆ ಮುಂದಾಗಿದ್ದೆ ತಡ, ಹೆದುರಿಸಲು ತಹಶೀಲ್ದಾರ್ ವಿರುದ್ದ ಡೆತ್‍ನೋಟ್ ಬರೆದಿಟ್ಟು, ಅಂಟಿಬಯೋಟಿಕ್ಸ್ ಮಾತ್ರೆಗಳನ್ನು ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿ (suicide attempt) ಹೈಡ್ರಾಮಾ ನಡೆಸಿರುವ ಘಟನೆ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಡೆದಿದ್ದೇನು?

ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಮಂಚೇನಹಳ್ಳಿ ತಾಲ್ಲೂಕಿನ ಗಿಡಗಾನಹಳ್ಳಿ ನಿವಾಸಿ ಜಿ.ರಾಧಾಕೃಷ್ಣ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿರುವ ರಾಧಾಕೃಷ್ಣ ಹಾಗೂ ಇವರ ಪತ್ನಿ ಗ್ರಾಮಪಂಚಾಯ್ತಿಯಲ್ಲಿ ನೌಕರರಾಗಿದ್ದಾರೆ. ಇನ್ನು ಗಿಡಗಾನಹಳ್ಳಿ ಗ್ರಾಮದಲ್ಲಿ ಹೆದ್ದಾರಿಗೆ ಹೊಂದಿಕೊಂಡಂತೆ ರಾಧಾಕೃಷ್ಣಗೆ ಸ್ವಂತ ಜಮೀನಿದೆ. ಸ್ವಂತ ಜಮೀನಿನ ಪಕ್ಕದಲ್ಲಿ ಸರ್ಕಾರಿ ಜಮೀನಿದೆ. ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದರಿಂದ ಮಂಚೇನಹಳ್ಳಿ ತಹಶೀಲ್ದಾರ್ ಪೂರ್ಣಿಮಾ ನಿರ್ಮಾಣ ಹಂತದ ಮನೆಯನ್ನು ತೆರೆವುಗೊಳಿಸಲು ಮುಂದಾಗಿದ್ದರು. ಇದರಿಂದ ಕೆರಳಿದ ರಾಧಾಕೃಷ್ಣ ತಹಶೀಲ್ದಾರ್‍ರನ್ನು ಬೆದರಿಸಲು ತಹಶೀಲ್ದಾರ್ ವಿರುದ್ದವೇ ಡೆತ್‍ನೋಟ್ ಬರೆದಿಟ್ಟು, ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ: ಹಾವೇರಿ: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ

ಇನ್ನು ಗಿಡಗಾನಹಳ್ಳಿ ಹಾಗೂ ಬುದ್ದಿವಂತನಹಳ್ಳಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ರಾಜ್ಯಸರ್ಕಾರ, ಸರ್ಕಾರಿ ಕಟ್ಟಡಗಳ ಸಾರ್ವಜನಿಕ ಉದ್ದೇಶಕ್ಕಾಗಿ ಜಮೀನನ್ನು ಕಾಯ್ದಿರಿಸಿದೆ. ಇದೇ ಜಮೀನಿನಲ್ಲಿ ರಾಧಾಕೃಷ್ಣ ಹಾಗೂ ಅವರ ಪತ್ನಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಆದರೆ ಸ್ಥಳೀಯ ಗೌಡಗೆರೆ ಗ್ರಾಮಪಂಚಾಯ್ತಿ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿ ಕಂದಾಯ ಜಮೀನಿಗೆ ಖಾತೆ ಮಾಡಿ ಕಟ್ಟಡ ಪರವಾನಿಗೆ ನೀಡಿದ್ದಾರೆ. ಇದರಿಂದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ತನಿಖೆಗೆ ಸೂಚಿಸಿದ್ದಾರೆ. ಇದರಿಂದ ನಮ್ಮನ್ನು ಎದುರಿಸಲು ರಾಧಾಕೃಷ್ಣ ಮುಂದಾಗಿದ್ದಾರೆಂದು ಮಂಚೇನಹಳ್ಳಿ ತಹಶೀಲ್ದಾರ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಕಚೇರಿ ಬದಲು ಡಾಬಾದಲ್ಲಿ ಕೆಲಸ, ಎಣ್ಣೆ ಪಾರ್ಟಿ ಮಾಡುತ್ತಲೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್

ಆರ್ಥಿಕವಾಗಿ, ಸಾಮಾಜಿಕವಾಗಿ ಸುಸ್ಥಿತಿಯಲ್ಲಿರುವ ರಾಧಾಕೃಷ್ಣ ಕುಟುಂಬ ಸ್ವಂತ ಜಮೀನನ್ನು ಹೊರತುಪಡಿಸಿ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಲು ಯತ್ನಿಸಿದ್ದೆ ತಪ್ಪು. ಇಂತಹದರಲ್ಲಿ ಆತ್ಮಹತ್ಯೆ ಹೈಡ್ರಾಮಾ ಮಾಡಿರುವುದು ಇನ್ನು ತಪ್ಪು. ಏನೋ ಮಾಡಲು ಹೋಗಿ, ಏನೋ ಆದರೆ ಹೆಂಡತಿ, ಮಕ್ಕಳು ಬೀದಿಗೆ ಬೀಳಬೇಕಾಗುತ್ತೆ ಎನ್ನುತ್ತಾರೆ ಗ್ರಾಮಸ್ಥರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ