Chikkaballapur News: ಜಮೀನಿನಲ್ಲಿದ್ದ ರೈತನ ಮೇಲೆ ಲಾರಿ ಹರಿಸಿ ಹತ್ಯೆ; ಸ್ವಾಭಾವಿಕ ಅಪಘಾತವೆಂದು ದೂರು ದಾಖಲಿಸಿಕೊಂಡ ಪೊಲೀಸರು

ಇತ್ತೀಚಿಗೆ ಕಲಬುರಗಿಯಲ್ಲಿ ಅಕ್ರಮ ಮರಳು ದಂಧೆ ತೆಡೆಯಲು ಹೋಗಿದ್ದ ಹೆಡ್​​​ಕಾನ್​ಸ್ಟೇಬಲ್​ ಮೇಲೆ ಟ್ಯಾಕ್ಟರ್​ ಹರಿಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಪ್ರಕರಣ ಮಾಸುವ ಮುನ್ನವೇ ಈ ರೀತಿ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಪ್ರಕರಣ ನಡೆದಿದೆ.

Chikkaballapur News: ಜಮೀನಿನಲ್ಲಿದ್ದ ರೈತನ ಮೇಲೆ ಲಾರಿ ಹರಿಸಿ ಹತ್ಯೆ; ಸ್ವಾಭಾವಿಕ ಅಪಘಾತವೆಂದು ದೂರು ದಾಖಲಿಸಿಕೊಂಡ ಪೊಲೀಸರು
ಮೃತ ರೈತ ರಾಘವೇಂದ್ರ (ಎಡಚಿತ್ರ) ಹರಿದ ಲಾರಿ (ಬಲಚಿತ್ರ)
Follow us
ವಿವೇಕ ಬಿರಾದಾರ
|

Updated on:Jun 20, 2023 | 9:56 AM

ಚಿಕ್ಕಬಳ್ಳಾಫುರ: ಇತ್ತೀಚಿಗೆ ಕಲಬುರಗಿಯಲ್ಲಿ (Kalaburagi) ಅಕ್ರಮ ಮರಳು ದಂಧೆ ತೆಡೆಯಲು ಹೋಗಿದ್ದ ಹೆಡ್​​​ಕಾನ್​ಸ್ಟೇಬಲ್ (Head Constable)​ ಮೇಲೆ ಟ್ಯಾಕ್ಟರ್ (Tractor)​ ಹರಿಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಪ್ರಕರಣ ಮಾಸುವ ಮುನ್ನವೇ ಈ ರೀತಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಗುಮ್ಮಲಾಪುರ ಗ್ರಾನೈಟ್ ಕ್ವಾರಿ ಬಳಿಯ ಜಮೀನಿನಲ್ಲಿ ರೈತನ (Farmer) ಮೇಲೆ ಲಾರಿ ಹರಿಸಿ ಹತ್ಯೆ ಆರೋಪ ಕೇಳಿಬಂದಿದೆ. ಅಡ್ಡಗಲ್ಲ ಗ್ರಾಮದ ರಾಘವೇಂದ್ರ (35) ಮೃತ ರೈತ. ಜಮೀನಿನಲ್ಲಿ ಗ್ರಾನೈಟ್ ಲಾರಿ ಓಡಿಸದಂತೆ ತಡೆದಿದ್ದಕ್ಕೆ ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಗುಮ್ಮಲಾಪುರ ಗ್ರಾನೈಟ್ ಕ್ವಾರಿ ಬಳಿಯ ಜಮೀನುಗಳಲ್ಲಿ ಲಾರಿಗಳ ಸಂಚಾರ ಮಿತಿ ಮೀರಿತ್ತು. ಹೀಗಾಗಿ ಜೂ.18ರಂದು ಜಮೀನಿನಲ್ಲಿ ಸಂಚರಿಸುತ್ತಿದ್ದ ಲಾರಿಗಳನ್ನು ರಾಘವೇಂದ್ರ ತಡೆದಿದ್ದರು. ಹೀಗಾಗಿ  ಸಂಜೆ ಜಮೀನಿನಲ್ಲಿದ್ದ ರಾಘವೇಂದ್ರ ಅವರ ಮೇಲೆ ಹರಿ ಹರಿಸಲಾಗಿತ್ತು.

ಇದನ್ನೂ ಓದಿ: ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮವಾಗಿ ಗಣಿ ಉತ್ಪನ್ನ ಸಾಗಾಟ

ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ರಾಘವೇಂದ್ರ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಘವೇಂದ್ರ ಸಾವನ್ನಪ್ಪಿದ್ದಾನೆ. ಮೃತ ರಾಘವೇಂದ್ರನ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಗ್ರಾನೈಟ್ ಮಾಫಿಯಾ ಜೊತೆ ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಮತ್ತು ಆರ್.ಟಿ.ಒ ಸೇರಿದಂತೆ ಚಿಕ್ಕಬಳ್ಳಾಫುರ ಜಿಲ್ಲಾಡಳಿತದ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆದರೆ ಪೊಲೀಸರು ಐಪಿಸಿ ಸೆಕ್ಷನ್ 338 ರ ಅಡಿ ಸ್ವಾಭಾವಿಕ ಅಪಘಾತವೆಂದು ಎಫ್​ಐಆರ್​ ದಾಖಲಿಸಿದ್ದಾರೆ. ಮೃತ ರಾಘವೇಂದ್ರನ ತಂದೆ ಬೈಯಣ್ಣನಿಂದ ಸ್ವಾಭಾವಿಕ ಅಪಘಾತವೆಂದು ದೂರು ಬರೆಸಿಕೊಂಡ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಪೊಲೀಸರ ನಡೆ ಅನುಮಾನಕ್ಕೆ ಕಾರಣವಾಗಿದೆ. ಪೆರೇಸಂದ್ರ ಠಾಣೆ ಪೊಲೀಸರು ಆರೋಪಿ ಕ್ವಾರಿ ಮಾಲಿಕರ ಜೊತೆ ಶಾಮೀಲು ಆಗಿದ್ದಾರೆ ಎಂಬ ಆರೋಪವಿದೆ.

ಯಾರೇ ಪ್ರಭಾವಿಗಳು ಇದ್ದರೂ ನಿರ್ದಾಕ್ಷಿಣ್ಯ ಕ್ರಮ

ಪ್ರಕರಣ ಸಂಬಂಧ ತನಿಖೆ ನಡೆಸಲು ಸೂಚನೆ ನೀಡಲಾಗಿದೆ. ಪೊಲೀಸರಿಂದ ವರದಿ ಬಂದ ಬಳಿಕ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಯಾರೇ ಪ್ರಭಾವಿಗಳು ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಹೇಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 am, Tue, 20 June 23

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ