Chikkaballapur News: ಕೆ ಸುಧಾಕರ್ ನೀಡಿರುವ ಹಕ್ಕುಪತ್ರಗಳು ನಕಲಿ ಎಂದ ಪ್ರದೀಪ್ ಈಶ್ವರ್; ಅಧಿಕಾರಿಗಳ ವಿರುದ್ಧ ಗರಂ

ಮಾಜಿ ಸಚಿವ ಡಾ. ಕೆ ಸುಧಾಕರ್ ನೀಡಿರುವ ಹಕ್ಕುಪತ್ರಗಳು ನಕಲಿ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ನೂತನ ಶಾಸಕ ಪ್ರದೀಪ್ ಈಶ್ವರ್ ಅಯ್ಯರ್‌, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Chikkaballapur News: ಕೆ ಸುಧಾಕರ್ ನೀಡಿರುವ ಹಕ್ಕುಪತ್ರಗಳು ನಕಲಿ ಎಂದ ಪ್ರದೀಪ್ ಈಶ್ವರ್; ಅಧಿಕಾರಿಗಳ ವಿರುದ್ಧ ಗರಂ
ಪ್ರದೀಪ್ ಈಶ್ವರ್
Follow us
Ganapathi Sharma
|

Updated on:May 29, 2023 | 5:35 PM

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ. ಕೆ ಸುಧಾಕರ್ ನೀಡಿರುವ ಹಕ್ಕುಪತ್ರಗಳು ನಕಲಿ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ನೂತನ ಶಾಸಕ ಪ್ರದೀಪ್ ಈಶ್ವರ್ (Pradeep Eshwar), ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅನಧಿಕೃತವಾಗಿ ಹಕ್ಕು ಪತ್ರಗಳನ್ನು ಹಂಚಿದವರು ಯಾರು ಎಂದು ಪ್ರಶ್ನಿಸಿದರು. ಜತೆಗೆ, ನಕಲಿ ಹಕ್ಕುಪತ್ರಗಳನ್ನು ನೀಡಿದ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದರೆ ನಾನು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಇದರ ಬಗ್ಗೆ ಶಾಸನ ಸಭೆಯಲ್ಲಿ ಪ್ರಶ್ನಿಸಿ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲು ಮಾಡಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಮಾರ್ಚ್ 28-29 ರಂದು ಮಾಜಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ 21 ಸಾವಿರ ಜನರಿಗೆ ಹಕ್ಕುಪತ್ರಗಳನ್ನು ಹಂಚಿದ್ದರು.

ಚಿಕ್ಕಬಳ್ಳಾಫುರದಲ್ಲಿ ನಿರ್ಮಾಣ ಹಂತದ ಸರ್ಕಾರಿ ಮೆಡಿಕಲ್ ಕಾಲೇಜು ಉದ್ಘಾಟನೆ ಮಾಡಲಾಗಿದೆ. ಇನ್ನೂ 400 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಬೇಕಿದೆ. ಕಾಲೇಜು ಕಟ್ಟಡ ಕಾಮಗಾರಿ ಮುಗಿದ ಮೇಲೆ ಮತ್ತೆ ಉದ್ಘಾಟನೆ ಮಾಡುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕಾಲೇಜು ಉದ್ಘಾಟನೆ ಮಾಡಿಸುತ್ತೇವೆ. ಕಟ್ಟಡ ಕಾಮಗಾರಿ ಇನ್ನೂ ಪ್ರಗತಿಯಲ್ಲಿದೆ. ರಾಜಕೀಯ ಲಾಭಕ್ಕಾಗಿ ಬಿಜೆಪಿ ಸರ್ಕಾರ ಕಾಲೇಜು ಉದ್ಘಾಟನೆ ಮಾಡಿದೆ ಎಂದೂ ಪ್ರದೀಪ್ ಈಶ್ವರ್ ಹೇಳಿದರು.

ಜೈಲಿಗೆ ಹಾಕಿದ್ದಕ್ಕೆ ನಾನು ಎಂಎಲ್ ಎ ಆದೆ‌

ಜೈಲಿಗೆ ಹಾಕಿದ್ದಕ್ಕೆ ನಾನು ಎಂಎಲ್​​ಎ ಆದೆ‌. ಜೈಲಿಗೆ ಹಾಕಿಲ್ಲ ಅಂದಿದ್ದರೆ ನಾನು ಲೆಕ್ಚರರ್ ಆಗಿ ಇರ್ತಿದ್ದೆ. ಕುತಂತ್ರ ಮಾಡಿ ಪೊಲೀಸರಿಂದ ನನ್ನ ಮೇಲೆ ಕೇಸ್ ಗಳು ಹಾಕಿಸಿ ಜೈಲಿಗೆ ಹಾಕಿದ್ರು. ಅದಕ್ಕಾಗಿಯೇ ನಾನು ಪಾಸಿಟಿವ್ ಆಗಿ ತಗೊಂಡು ಎಂಎಲ್ಎ ಆಗಿದ್ದೀನಿ ಎಂದು ಅವರು ಹೇಳಿದರು.

ಇದನ್ನೂ ಓದಿ:  ಚುನಾವಣೆಯಲ್ಲಿ ಡಾ.ಕೆ ಸುಧಾಕರ್ ಸೋಲಿಸಿ ಗೆದ್ದ ಶಾಸಕ ಪ್ರದೀಪ್​ ಈಶ್ವರ್​ಗೆ ರಣ ಬೇಟೆಗಾರ ಬಿರುದು

‘ಚಿಕ್ಕಬಳ್ಳಾಪುರ ನಗರದಲ್ಲಿ ನನ್ನ ಫ್ಲೆಕ್ಸ್ ಇರಬಾರದು’

ಚಿಕ್ಕಬಳ್ಳಾಪುರ ನಗರದಲ್ಲಿ ನನ್ನ ಫ್ಲೆಕ್ಸ್ ಇರಬಾರದು ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರಸಭೆ ಆಯುಕ್ತರಿಗೆ ಪ್ರದೀಪ್ ಈಶ್ವರ್ ಸೂಚನೆ ನೀಡಿದ್ದಾರೆ. ನನ್ನ ಫ್ಲೆಕ್ಸ್ ಇರಬಾರದು ಬೇರೆಯವರ ಫ್ಲೆಕ್ಸ್ ಕೂಡ ಇರಬಾರದು. ಚಿಕ್ಕಬಳ್ಳಾಪುರ ನಗರ ಕ್ಲೀನ್ ಆಗಿರಬೇಕು. ಅಧಿಕಾರಿಗಳೇ, ಶಾಸಕರ ಪೋಟೋ ಇದೆ ಅಂತ ಭಯ ಬೀಳಬೇಡಿ. ನಾಳೆಯಿಂದ ಚಿಕ್ಕಬಳ್ಳಾಪುರ ನಗರದಲ್ಲಿ ಯಾವ ಫ್ಲೆಕ್ಸ್ ಇರಬಾರದು. ಫಸ್ಟ್ ನನ್ನ ಪೋಟೋ ಇರುವ ಫ್ಲೆಕ್ಸ್ ಕಿತ್ತು ಹಾಕಿ. ಚಿಕ್ಕಬಳ್ಳಾಪುರ ದಲ್ಲಿ ಫ್ಲೆಕ್ಸ್ ಕಲ್ಚರ್ ಇರಬಾರದು. ಯಾವ ಇನ್ ಪ್ಲೂಯನ್ಸ್ ಬಂದ್ರೂ ತಲೆ ಕೆಡಿಸಿಕೊಳ್ಳಬೇಡಿ ಅಂತ ಅಧಿಕಾರಿಗಳಿಗೆ ಅಭಯ ನೀಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಡಾ. ಕೆ ಸುಧಾಕರ್​ರನ್ನ ಸೋಲಿಸಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್, ರಾಜ್ಯದ ಗಮನವನ್ನು ಸೆಳೆದಿದ್ದಾರೆ. ನಾನು ಪ್ರಭಾವಿ ವ್ಯಕ್ತಿಯನ್ನು ಸೋಲಿಸಿದ್ದಕ್ಕೆ, ನನಗೆ ಅಪಾರ ಗೌರವ ಮನ್ನಣೆ ಸಿಕ್ತಿದೆ. ಸರ್ಕಾರದಲ್ಲಿ ನನಗೆ ಯಾವುದೇ ಸಚಿವ ಸ್ಥಾನ, ನಿಗಮ ಮಂಡಳಿಯೂ ಬೇಡವೆ ಬೇಡ. ನಾನು ಸಾಮಾನ್ಯರಲ್ಲಿ ಸಾಮಾನ್ಯನಾಗಿ ಇರುತ್ತೇನೆ ಎಂದು ಅವರು ಇತ್ತೀಚೆಗೆ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:28 pm, Mon, 29 May 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ