Chikkaballapur News: ಚಿಂತಾಮಣಿಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ಗಿರಿ
ಮುಸ್ಲಿಂ ಯುವತಿ ಜತೆ ಹಿಂದೂ ಯುವಕ ಇದ್ದಿದ್ದಕ್ಕೆ ಆತನ ಮೇಲೆ ಹಲ್ಲೆ ಯತ್ನ ನಡೆಸಲಾಗಿದೆ. ಜತೆಗೆ ಮುಸ್ಲಿಂ ಯುವತಿ ಮೇಲೆಯೂ ಹಲ್ಲೆಗೆ ಯತ್ನ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ (Chintamani) ಮೆಹಬೂಬ್ ನಗರದಲ್ಲಿ ಯುವಕರು ನೈತಿಕ ಪೊಲೀಸ್ಗಿರಿ (Moral Policing) ನಡೆಸಿರುವುದು ತಿಳಿದುಬಂದಿದೆ. ಮುಸ್ಲಿಂ ಯುವತಿ ಜತೆ ಹಿಂದೂ ಯುವಕ ಇದ್ದಿದ್ದಕ್ಕೆ ಆತನ ಮೇಲೆ ಹಲ್ಲೆ ಯತ್ನ ನಡೆಸಲಾಗಿದೆ. ಜತೆಗೆ ಮುಸ್ಲಿಂ ಯುವತಿ ಮೇಲೆಯೂ ಹಲ್ಲೆಗೆ ಯತ್ನ ನಡೆಸಿದ್ದಾರೆ. ಚೇಳೂರು ಮೂಲದ ಯುವತಿ, ಚಿಂತಾಮಣಿ ಮೂಲದ ಯುವಕ ಜತೆಗೆ ಇದ್ದಾಗ ಸ್ಥಳಕ್ಕೆ ಬಂದ ಯುವಕರು ಯುವಕನನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್ಗಿರಿಗೆ ಅವಕಾಶ ಇಲ್ಲ, ಹೀಗೆ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಇತ್ತೀಚೆಗೆ ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ನೀಡಿದ್ದರು. ಬಳಿಕ ಅಧಿಕಾರಿಗಳು ಕೂಡ ನೈತಿಕ ಪೊಲೀಸ್ ಗಿರಿ ನಡೆಸುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದಾದ ಬೆನ್ನಲ್ಲೇ ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ಗಿರಿ ನಡೆದಿರುವ ಬಗ್ಗೆ ವರದಿಯಾಗಿವೆ.
ಇದನ್ನೂ ಓದಿ: Mangaluru News: ಸೋಮೇಶ್ವರ ಬೀಚ್ನಲ್ಲಿ ನೈತಿಕ ಪೊಲೀಸ್ಗಿರಿ; ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ
ಕರಾವಳಿ ನಗರ ಮಂಗಳೂರಿನ ಸೋಮೇಶ್ವರ ಬೀಚ್ನಲ್ಲಿ ಕೆಲವು ದಿನಗಳ ಹಿಂದಷ್ಟೇ ನೈತಿಕ ಪೊಲೀಸ್ಗಿರಿ ನಡೆದಿದ್ದು, ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿತ್ತು. ಅದಕ್ಕೂ ಮುನ್ನ, ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಹೋಟೆಲ್ಗೆ ಹೋಗಿದಕ್ಕೆ ಮುಸ್ಲಿಂ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಆ ನಂತರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಕೂಡ ನೈತಿಕ ಪೊಲೀಸ್ ಗಿರಿ ನಡೆದಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:09 pm, Wed, 7 June 23