ಚಿಕ್ಕಬಳ್ಳಾಪುರ: ಚಲಿಸುವ ರೈಲಿಗೆ ಸಿಲುಕಿ 80ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲಿ ಸಾವು

ಚಿಕ್ಕಬಳ್ಳಾಫುರ ಜಿಲ್ಲೆಯ ಶಿಡ್ಲಘಟ್ಟ(Sidlaghatta) ತಾಲೂಕಿನ ಅಮ್ಮನ ಕೆರೆಯಂಗಳದಲ್ಲಿ ಚಲಿಸುವ ರೈಲಿಗೆ ಸಿಲುಕಿ 80ಕ್ಕೂ ಹೆಚ್ಚು ಕುರಿ(Sheep)ಗಳು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ: ಚಲಿಸುವ ರೈಲಿಗೆ ಸಿಲುಕಿ 80ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲಿ ಸಾವು
ಚಿಕ್ಕಬಳ್ಳಾಪುರದ ಬಳಿ ರೈಲಿಗೆ ಸಿಲುಕಿ ಕುರಿಗಳು ಸಾವು
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 15, 2023 | 4:12 PM

ಚಿಕ್ಕಬಳ್ಳಾಪುರ, ಡಿ.15: ಚಲಿಸುವ ರೈಲಿಗೆ ಸಿಲುಕಿ 80ಕ್ಕೂ ಹೆಚ್ಚು ಕುರಿ(Sheep)ಗಳು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಫುರ ಜಿಲ್ಲೆಯ ಶಿಡ್ಲಘಟ್ಟ(Sidlaghatta) ತಾಲೂಕಿನ ಅಮ್ಮನ ಕೆರೆಯಂಗಳದಲ್ಲಿ ನಡೆದಿದೆ. ಕುರಿಗಾಯಿ ಕೂದಲಮ್ಮಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು-ಕೋಲಾರ ಮಾರ್ಗವಾಗಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಈ ದುರ್ಘಟನೆ ನಡೆದಿದೆ. ಹುಸಹುಡ್ಯಾ ನಿವಾಸಿಗಳಾದ ಆಂಜಿನಮ್ಮ, ಕೂದಲಪ್ಪ, ಶಶಿಕಲಾ ಹಾಗೂ ನಾರಾಯಣಸ್ವಾಮಿಗೆ ಸೇರಿದ ಕುರಿಗಳು ಇದಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆಕೆಆರ್‌ಟಿಸಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ನಗರದ ಜಿಲ್ಲಾ ಕಾರಾಗೃಹದ ಬಳಿ ಕೆಕೆಆರ್‌ಟಿಸಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತರಾದ ಘಟನೆ ನಡೆದಿದೆ. ತಿಪ್ಪಣ್ಣ ಇಜೇರಿ(30), ರಾಜೇದ್ರ ಇಜೇರಿ(20) ಮೃತ ದುರ್ದೈವಿಗಳು. ಈ ವೇಳೆ ರಾಣಪ್ಪ ಕಟ್ಟಿಮನಿ ಖಣದಾಳ ಎಂಬುವವರಿಗೆ ಗಂಭೀರ ಗಾಯವಾದರೆ, ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಮೂವರಿಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ರಾಯಚೂರಿನಿಂದ ಕಲಬುರಗಿಗೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈ ಕುರಿತು ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಚಿಕ್ಕಮಗಳೂರು: ಭೀಕರ ಅಪಘಾತ, ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾದ ಸ್ಕೂಟಿ ಸವಾರ, ವಿಡಿಯೋ ನೋಡಿ

ಕ್ಯಾಂಟರ್​ ಡಿಕ್ಕಿಯಾಗಿ ಬೈಕ್​ ಸವಾರ ಸಾವು

ಬೆಂಗಳೂರು: ನೆಲಮಂಗಲ ತಾಲೂಕಿನ ಬಾಣವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕ್ಯಾಂಟರ್​ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ. ಶಶಿಕುಮಾರ್(27) ಸ್ಥಳದಲ್ಲೇ ಮೃತ ವ್ಯಕ್ತಿ. ಶಶಿಕುಮಾರ್ ಬಾಣವಾಡಿ ಗ್ರಾಮ ಪಂಚಾಯತಿ ಕಾರ್ಯಾಲಯದ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಇನ್ನು ಘಟನೆಗೆ ಸಂಬಂಧಿಸಿದಂತೆ ಕ್ಯಾಂಟರ್​ನ್ನು ಜಪ್ತಿ ಮಾಡಿ, ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ