ಚಿಕ್ಕಬಳ್ಳಾಪುರ: ಇಬ್ಬರು ಹೆಣ್ಣು ಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ ತಾಲ್ಲೂಕಿನ ರಂಗಸ್ಥಳ ಬಳಿ ಇರುವ ರಂಗಧಾಮ ಕೆರೆಗೆ ಹಾರಿ ತಾಯಿ ಮತ್ತು ಮಕ್ಕಳು ಮೃತಪಟ್ಟಿದ್ದಾರೆ. ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಮೂವರ ಮೃತದೇಹಗಳನ್ನು ಶುಕ್ರವಾರ ಪತ್ತೆ ಹಚ್ಚಲಾಗಿದೆ.ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ, ಜೂನ್ 06: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ರಂಗಸ್ಥಳ ಬಳಿಯ ರಂಗಧಾಮ ಕೆರೆಗೆ ಹಾರಿ ತಾಯಿ ಮತ್ತು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಲಾವಣ್ಯ (30), ನಿಹಾರಿಕಾ (12), ನೇಹಾ (9) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಚಿಕ್ಕಬಳ್ಳಾಪುರ ತಾಲೂಕಿನ ಬಾಧಗಾನಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ತಾಯಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಗುರುವಾರ ಸಂಜೆಯಿಂದ ಕಾಣೆಯಾಗಿದ್ದರು. ಶುಕ್ರವಾರ (ಜೂ.06) ಕೆರೆಯಲ್ಲಿ ತಾಯಿ ಮತ್ತು ಮಕ್ಕಳ ಶವ ಪತ್ತೆಯಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕರೆಂಟ್ ತಗುಲಿ ಪೆಟ್ರೋಲ್ ಬಂಕ್ ಕಾರ್ಮಿಕ ಸಾವು
ಬಾಗಲಕೋಟೆ: ಬೀಳಗಿ ಪಟ್ಟಣದ ಸೂಳಿಕೇರಿ ಪೆಟ್ರೋಲ್ ಬಂಕ್ನಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟಿದ್ದಾನೆ. ಮಹದೇವ ಟಕ್ಕಳಕಿ (29) ಮೃತದುರ್ದೈವಿ. ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಸ್ ಹಾಗೂ ಕಾರಿನ ನಡುವೆ ಅಪಘಾತ: ಓರ್ವ ಸಾವು
ಚಾಮರಾಜನಗರ: ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಇಬ್ಬರಿಗೆ ಗಾಯವಾಗಿದೆ. ಕೊಯಮತ್ತೂರಿನ ವಿಘ್ನೇಶ್ (31) ಮೃತದುರ್ದೈವಿ. ಕೊಳ್ಳೆಗಾಲ ತಾಲೂಕಿನ ಧನಗೆರೆ ಬಳಿ ಘಟನೆ ನಡೆದಿದೆ. ಬೆಂಗಳೂರು ಕಡೆಗೆ ಬರುತ್ತಿದ್ದ ಮಹದೇಶ್ವರ ಬೆಟ್ಟ ಪ್ರಾಧಿಕಾರದ ಬಸ್ಗೆ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಘ್ನೇಶ್ ಮೃತಪಟ್ಟಿದ್ದಾನೆ. ಸದ್ಯ ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟ್ರ್ಯಾಕ್ಟರ್ ಮುಗುಚಿ ಬಿದ್ದು ಓರ್ವ ಸಾವು
ಮೈಸೂರು: ಟಿ.ನರಸೀಪುರ ತಾಲೂಕಿನ ಅಕ್ಕೂರು ಗೇಟ್ ಬಳಿ ಟ್ರ್ಯಾಕ್ಟರ್ ಮುಗುಚಿ ಬಿದ್ದು ಓರ್ವ ಮೃತಪಟ್ಟಿದ್ದಾನೆ. ಶ್ರೀರಂಗಪಟ್ಟಣ ಮೂಲದ ಲೋಕೇಶ್ (26) ಮೃತದುರ್ದೈವಿ. ಘಟನಾ ಸ್ಥಳಕ್ಕೆ ತಲಕಾಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:48 pm, Fri, 6 June 25




