AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳ ದಿನಾಚರಣೆದಂದು ನಂದಿಬೆಟ್ಟಕ್ಕೆ ಹೋಗುವ ಮುನ್ನ ಇದನ್ನು ಓದಲೇಬೇಕು

ಯಾರೆಲ್ಲಾ ವ್ಯಾಲೆಂಟೈನ್ಸ್ ಡೇಗೆ ನಂದಿಗಿರಿಧಾಮಕ್ಕೆ ಹೋಗಲು ಫ್ಲ್ಯಾನ್​​ ಮಾಡಿದ್ದೀರಾ ಈಗಲೇ ಬದಲಾಯಿಸಿಕೊಳ್ಳುವುದು ಉತ್ತಮ. ಏಕೆಂದರೆ ಫೆಬ್ರವರಿ 14ರ ಪ್ರೇಮಿಗಳ ದಿನದಂದು ಚಿಕ್ಕಬಳ್ಳಾಪುರದ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರೇಮಿಗಳು ಸೇರಿದಂತೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪ್ರೇಮಿಗಳ ದಿನಾಚರಣೆದಂದು ನಂದಿಬೆಟ್ಟಕ್ಕೆ ಹೋಗುವ ಮುನ್ನ ಇದನ್ನು ಓದಲೇಬೇಕು
Nandi Hills Image Credit source: thrillophilia.com
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Feb 06, 2026 | 5:28 PM

Share

ಚಿಕ್ಕಬಳ್ಳಾಪುರ, ಫೆಬ್ರವರಿ 06: ಪ್ರೇಮಿಗಳ ವಿಶೇಷ ದಿನವಾದ ವ್ಯಾಲೆಂಟೈನ್ಸ್ ಡೇಗೆ (Valentine’s Day) ಸದ್ಯ ದಿನಗಣನೆ ಶುರುವಾಗಿದೆ. ಪ್ರೀತಿ ಪೇಮಕ್ಕೆ ಹೆಚ್ಚು ಹೆಸರು ವಾಸಿಯಾಗಿರುವ ತಾಣವೆಂದರೆ ನಂದಿಗಿರಿಧಾಮ (nandi hills). ಪ್ರೇಮಿಗಳ ದಿನದಂದು ಈ ತಾಣಕ್ಕೆ ಹೆಚ್ಚಾಗಿ ಪ್ರೇಮಿಗಳು ಆಗಮಿಸಿ ಕಾಲಕಳೆಯುತ್ತಾರೆ. ಆದರೆ ಈ ಭಾರಿಯ ವ್ಯಾಲೆಂಟೈನ್ಸ್ ಡೇಗೆ ಅಂದರೆ ಫೆಬ್ರವರಿ 14ರಂದು ವಿಶ್ವವಿಖ್ಯಾತ ನಂದಿಗಿರಿಧಾಮ ಬಂದ್​ ಆಗಲಿದೆ.

ನಂದಿಗಿರಿಧಾಮ ಬಂದ್

ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಅದರಲ್ಲೂ ವ್ಯಾಲೆಂಟೈನ್ಸ್ ಡೇ ಸಂದರ್ಭದಲ್ಲಿ ಪ್ರಣಯ ಪಕ್ಷಿಗಳ ಕಲರವೇ ಹೆಚ್ಚಾಗಿರುತ್ತಿದೆ. ಈ ದಿನದಂದು ಕೆಲ ಜೋಡಿಗಳು ಪ್ರೇಮ ನಿವೇದನೆ ಮಾಡಿಕೊಂಡರೆ, ಮತ್ತೆ ಕೆಲವರು ಒಬ್ಬರಿಗೊಬ್ಬರು ತಬ್ಬಿ ಮುದ್ದಾಡುವ ಮೂಲಕ ಪ್ರೇಮಿಗಳ ದಿನ ಆಚರಿಸುತ್ತಾರೆ. ಆದರೆ ಈ ಭಾರಿ ಪ್ರೇಮಿಗಳ ದಿನಾಚರಣೆಗೆ ಅಂದರೆ ಫೆ.14ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಂದಿಗಿರಿಧಾಮ ಬಂದ್​ ಆಗಲಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದಿಂದ ಕ್ರಮಕೈಗೊಳ್ಳಲಾಗಿದ್ದು, ಡಿಸಿ ಜಿ.ಪ್ರಭು ಆದೇಶ ಹೊರಡಿಸಿದೆ.

ಆದೇಶದಲ್ಲೇನಿದೆ?

ಫೆಬ್ರವರಿ 14ರಂದು ಪ್ರೇಮಿಗಳ ದಿನದ ಆಚರಣೆ ಪ್ರಯುಕ್ತ ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳವಾದ ನಂದಿಗಿರಿಧಾಮ ಠಾಣಾ ವ್ಯಾಪ್ತಿಯ ನಂದಿ ಬೆಟ್ಟಕ್ಕೆ ಪ್ರತಿ ವರ್ಷದಂತೆ ಪ್ರೇಮಿಗಳ ದಿನವನ್ನು ಆಚರಣೆ ಮಾಡುವ ಸಲುವಾಗಿ ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರೇಮಿಗಳು, ಪ್ರವಾಸಿಗರು ಆಗಮಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ನಂದಿಗಿರಿಧಾಮ ಪ್ರವಾಸ ಹೋಗ್ತೀರಾ? ಈ ವಿಚಾರ ತಿಳಿದಿರಲೇಬೇಕು: ಇಲ್ಲಾಂದ್ರೆ ಅಪಾಯ ಕಟ್ಟಿಟ್ಟ ಬುತ್ತಿ

ಅಂಕಿ-ಅಂಶಗಳ ಪ್ರಕಾರ ನಂದಿಗಿರಿಧಾಮಕ್ಕೆ ವಿಶೇಷ ದಿನಗಳಲ್ಲಿ (ಭಾನುವಾರ, ಶನಿವಾರ ಹಾಗೂ ರಜೆ ದಿನಗಳಲ್ಲಿ) ಸುಮಾರು 16-18 ಸಾವಿರ ಪ್ರವಾಸಿಗರು ಹಾಗೂ 3000-3500 ದ್ವಿಚಕ್ರ ವಾಹನಗಳು ಹಾಗೂ 1500-1700 ನಾಲ್ಕು ಚಕ್ರ (ಕಾರು) ಇತರೆ ವಾಹನಗಳು ಆಗಮಿಸುವುದರಿಂದ ಪೊಲೀಸ್ ಇಲಾಖೆಯ ವತಿಯಿಂದ ವಾಹನ ಸಂಚಾರ ನಿಯಂತ್ರಣ ಮಾಡಬೇಕಾಗುತ್ತದೆ. ಸಾಮಾನ್ಯ ದಿನಗಳಲ್ಲಿ ಸುಮಾರು 5000-6000 ಪ್ರವಾಸಿಗರು, 1000-1500 ದ್ವಿಚಕ್ರವಾಹನಗಳು ಹಾಗೂ 500-700 ನಾಲ್ಕು ಚಕ್ರ (ಕಾರು) ಇತರೆ ವಾಹನಗಳು ಆಗಮಿಸುತ್ತವೆ.

ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಪ್ರೇಮಿಗಳ ದಿನ ಶನಿವಾರವಾಗಿರುವುದರಿಂದ ನಿರೀಕ್ಷೆಗೆ ಮೀರಿ 15-20 ಸಾವಿರ ಪ್ರವಾಸಿಗರು, ಪ್ರೇಮಿಗಳು ಹಾಗೂ 05-06 ಸಾವಿರ ವಾಹನಗಳು ಆಗಮಿಸುವ ಸಂಭವವಿದೆ. ನಂದಿ ಗಿರಿಧಾಮದ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತೀ ಕಷ್ಟ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.

ಇದನ್ನೂ ಓದಿ: ಪ್ರವಾಸಿತಾಣ ನಂದಿಗಿರಿಧಾಮ 1 ತಿಂಗಳು ಬಂದ್: ವೀಕೆಂಡ್​​​ನಲ್ಲಿ ಮಾತ್ರ ಓಪನ್..!

ಪ್ರೇಮಿಗಳ ದಿನವನ್ನು ಆಚರಿಸುವ ಪ್ರಯುಕ್ತ ಹೊರಗಡೆಯಿಂದ ಬರುವ ಪ್ರೇಮಿಗಳು, ಸಾರ್ವಜನಿಕರು ರಾತ್ರಿ ವೇಳೆಯಲ್ಲಿ ಮದ್ಯಪಾನ ಮತ್ತು ಧೂಮಪಾನ ಮಾಡಿ ಅಸಭ್ಯ ವರ್ತನೆಗಳನ್ನು ಮಾಡಿ ಈ ಆಚರಣೆಯಲ್ಲಿ ಮಹಿಳೆಯರು ಮತ್ತು ಹುಡುಗಿಯರು ಭಾಗವಹಿಸುವುದರಿಂದ ಕುಡಿದ ಅಮಲಿನಲ್ಲಿ ಅಸಭ್ಯವಾಗಿ ವರ್ತಿಸುವುದು, ಇತರ ಪ್ರವಾಸಿಗರಿಗೆ ತೊಂದರೆ ನೀಡುವುದು ಹಾಗೂ ಬೆಟ್ಟದ ಮೇಲೆ ನಿಷೇಧಿತ ಅಪಾಯಕರ ಸ್ಥಳಗಳಿಗೆ ಹೋಗುವ ಸಾಧ್ಯತೆಗಳು ಇರುತ್ತವೆ. ಈ ಸಮಯದಲ್ಲಿ ಹೆಚ್ಚಿನ ಪೊಲೀಸ್ ಇಲಾಖೆಯ ಸಿಬ್ಬಂದಿಯನ್ನು ನಿಯೋಜನೆ ಮಾಡಿದರೂ ಸಹ ಯಾವುದೇ ಪ್ರಯೋಜನೆಗಳು ಆಗುವ ಸಾಧ್ಯತೆ ಇಲ್ಲ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ನಂದಿ ಗಿರಿಧಾಮಕ್ಕೆ ಫೆಬ್ರವರಿ 14ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರಿಗೆ ಮತ್ತು ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:26 pm, Fri, 6 February 26