AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandi Hills: ನಂದಿ ಗಿರಿಧಾಮಕ್ಕೆ ತಾತ್ಕಾಲಿಕ ರಸ್ತೆ ನಿರ್ಮಾಣ; ಪ್ರವಾಸಿಗರಿಗೆ ಮುಂದುವರೆದ ನಿರ್ಬಂಧ

ನಂದಿ ಗಿರಿಧಾಮಕ್ಕೆ ಶಾಶ್ವತ ರಸ್ತೆಯನ್ನು ಪುನಃ ನಿರ್ಮಿಸಲು ಇನ್ನೂ ಹಲವು ದಿನಗಳ ಅವಶ್ಯಕತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Nandi Hills: ನಂದಿ ಗಿರಿಧಾಮಕ್ಕೆ ತಾತ್ಕಾಲಿಕ ರಸ್ತೆ ನಿರ್ಮಾಣ; ಪ್ರವಾಸಿಗರಿಗೆ ಮುಂದುವರೆದ ನಿರ್ಬಂಧ
ನಂದಿ ಗಿರಿಧಾಮಕ್ಕೆ ನಿರ್ಮಿಸಲಾದ ತಾತ್ಕಾಲಿಕ ರಸ್ತೆ (ಚಿತ್ರಕೃಪೆ; ಬೆಂಗಳೂರು ಮಿರರ್)
TV9 Web
| Updated By: guruganesh bhat|

Updated on: Aug 28, 2021 | 6:10 PM

Share

ಚಿಕ್ಕಬಳ್ಳಾಪುರ: ಇತ್ತೀಚಿಗಷ್ಟೇ ಸುರಿದ ಭಾರಿ ಮಳೆಯಿಂದ ಸಂಪರ್ಕ ಕಡಿತಗೊಂಡಿದ್ದ ನಂದಿ ಗಿರಿಧಾಮಕ್ಕೆ (Nandi Hills)  ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿದೆ. ಗುಡ್ಡೆ ಹಾಗೂ ಬಂಡೆ ಕುಸಿತಕ್ಕೆ ಕೊಚ್ಚಿ ಹೋಗಿದ್ದ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತಾತ್ಕಾಲಿಕ ಉಪಯೋಗಕ್ಕೋಸ್ಕರ ದುರಸ್ತಿಗೊಳಿಸಿದ್ದಾರೆ. ಸದ್ಯ ನಿರ್ಮಾಣವಾದ ತುರ್ತು ರಸ್ತೆಯನ್ನು ನಂದಿ ಗಿರಿಧಾಮಕ್ಕೆ ಅಧಿಕೃತ ಕೆಲಸಗಳಿಗಾಗಿ ಓಡಾಡುವ ಸಿಬ್ಬಂದಿ ಮಾತ್ರ ಬಳಸಬಹುದಾಗಿದೆ. ಯಾವುದೇ ಪ್ರವಾಸಿಗರಿಗೆ ತಾತ್ಕಾಲಿಕ ರಸ್ತೆಯ ಬಳಕೆಗೆ ಅನುಮತಿ ನೀಡಲಾಗಿಲ್ಲ. ರಸ್ತೆ ಸಮರ್ಪಕವಾಗಿ ನಿರ್ಮಾಣವಾಗುವವರೆಗೂ ಪ್ರವಾಸಿಗರಿಗೆ ನಂದಿ ಗಿರಿಧಾಮದ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನಂದಿ ಗಿರಿಧಾಮಕ್ಕೆ ಶಾಶ್ವತ ರಸ್ತೆಯನ್ನು ಪುನಃ ನಿರ್ಮಿಸಲು ಇನ್ನೂ ಹಲವು ದಿನಗಳ ಅವಶ್ಯಕತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಿರಿಧಾಮದ ಮೇಲ್ಭಾಗದಲ್ಲಿ ದೇವಸ್ಥಾನ, ಅಂಚೆ ಕಚೇರಿ ಮತ್ತು ಪೊಲೀಸ್ ಠಾಣೆಗಳಿರುವ ಕಾರಣ, ಅಲ್ಲಿನ ಸಿಬ್ಬಂದಿಗೆ ತಾತ್ಕಾಲಿಕ ಓಡಾಟದ ಸಲುವಾಗಿ ಈ ರಸ್ತೆಯನ್ನು ನಿರ್ಮಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕುಸಿತ ಉಂಟಾದ ದಿನ ಏನಾಗಿತ್ತು? ನಂದಿ ಗಿರಿಧಾಮದಲ್ಲಿ ಗುಡ್ಡ ಕುಸಿದು ರಸ್ತೆ ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಗಿರಿಧಾಮದಿಂದ ಬೆಂಗಳೂರಿಗೆ ಬರಲು ಪರ್ಯಾಯ ವ್ಯವಸ್ಥೆ ಮಾಡಲಾಗಿತ್ತು. ಕಾರುಗಳು ಕೆಳಗೆ ಬರಲಾಗದೆ ಇದ್ದಿದ್ದರಿಂದ ಕಾಲ್ನಡಿಗೆಯಲ್ಲಿ ಸುಲ್ತಾನ ಪೇಟೆ ಮಾರ್ಗವಾಗಿ ಕೆಳಗೆ ಇಳಿಯಲು ಕೆಎಸ್​​ಟಿಡಿಸಿ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದರು.

30ಕ್ಕೂ ಹೆಚ್ಚು ಜನ ಪ್ರವಾಸಿಗರು ಬೆಟ್ಟದಲ್ಲಿ ಸಿಲುಕಿದ್ದರು. ಹೀಗಾಗಿ ಸುಲ್ತಾನಪೇಟೆಯಿಂದ ಬೆಂಗಳೂರು ತಲುಪಲು ಕೆಎಸ್​​ಟಿಡಿಸಿಯ ಬಸ್​ಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್​​ಟಿಡಿಸಿ ಹಿರಿಯ ಅಧಿಕಾರಿ ಟಿವಿ9 ಡಿಜಿಟಲ್​ಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: 

Afghanistan Natural Resources: ಅಫ್ಘಾನಿಸ್ತಾನದಲ್ಲಿ ಅಗಾಧ ಖನಿಜ ಸಂಪತ್ತು ಲೆಕ್ಕಕ್ಕೆ ಸಿಕ್ಕಲ್ಲ, ಕೈಗೆ ದಕ್ಕಲ್ಲ ಏಕೆ ಗೊತ್ತಾ?

ಅಮರುಲ್ಲಾ ಸಲೇಹ್: ಅಫ್ಘಾನಿಸ್ತಾನ ಪ್ರತಿರೋಧ ಹೋರಾಟದ ಕೊನೆಯ ಆಸರೆ, ತಾಲಿಬಾನ್-ಪಾಕಿಸ್ತಾನವನ್ನು ಎಂದಿಗೂ ಒಪ್ಪದ ನಾಯಕನೀತ

(Chikkaballapur Nandi Hills temporary road Construction is done but Continued restriction on tourists)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ