Chikkaballapur News: ಹಣ ದ್ವಿಗುಣದ ಆಸೆಗೆ 3.21 ಲಕ್ಷ ರೂಪಾಯಿ ಕಳೆದುಕೊಂಡ ಚಿಕ್ಕಬಳ್ಳಾಪುರ ಶಿಕ್ಷಕಿ!

ಇನ್​​​ಸ್ಟಾಗ್ರಾಂನಲ್ಲಿ ಬ್ಲಾಕ್ ಚೈನ್ ಎಂಬ ಕಂಪನಿಯ ಲಿಂಕ್ ಬಂದಿದ್ದು, ಅದನ್ನು ಶಿಕ್ಷಕಿ ಓಪನ್ ಮಾಡಿದ್ದಾರೆ. ಆಗ ಆ್ಯಪ್​​ನಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಹಣ ದ್ವಿಗುಣಗೊಳಿಸಿ ಕೊಡುವುದಾಗಿ ಮಾಹಿತಿ ಬಂದಿದೆ.

Chikkaballapur News: ಹಣ ದ್ವಿಗುಣದ ಆಸೆಗೆ 3.21 ಲಕ್ಷ ರೂಪಾಯಿ ಕಳೆದುಕೊಂಡ ಚಿಕ್ಕಬಳ್ಳಾಪುರ ಶಿಕ್ಷಕಿ!
ಸಾಂದರ್ಭಿಕ ಚಿತ್ರ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: Ganapathi Sharma

Updated on: Jul 22, 2023 | 5:38 PM

ಚಿಕ್ಕಬಳ್ಳಾಪುರ: ಸಾಮಾಜಿಕ ಜಾಲತಾಣ ಇನ್​​ಸ್ಟಾಗ್ರಾಮ್​​ನಲ್ಲಿ (Instagram) ಬಂದ ಆನ್ ಲೈನ್ ಲಿಂಕ್ ಅನ್ನು ನಂಬಿದ ಶಿಕ್ಷಕಿಯೊಬ್ಬರು, ಹಣ ದ್ವಿಗುಣದ ಆಸೆಗೆ ಮರುಳಾಗಿ 3 ಲಕ್ಷ 21 ಸಾವಿರ ರೂಪಾಯಿ ಹಣ ಕಳೆದುಕೊಂಡ ಬಗ್ಗೆ ವರದಿಯಾಗಿದೆ. ಬ್ಲಾಕ್ ಚೈನ್ ಎಂಬ ಕಂಪನಿಯ ಲಿಂಕ್ ಅನ್ನು ನಂಬಿ ಹಣ ದ್ವಿಗುಣದ ಆಸೆಗೆ ಮರುಳಾದ ಶಿಕ್ಷಕಿ ಅವರು ಹೇಳಿದಂತೆ ಕೇಳಿ ಕೊನೆಗೆ ಪಂಗನಾಮ ಹಾಕಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಮುಷ್ಟೂರು ಗ್ರಾಮದ ನಿವಾಸಿ ಶ್ರೀಮತಿ ಕೆ.ರಾಗಿಣಿ ಕೋಂ ಎಂ ರಮೇಶ್ ಬಾಬು ಎನ್ನುವ ಖಾಸಗಿ ಶಾಲಾ ಶಿಕ್ಷಕಿಯೇ ಮೋಸ ಹೋಗಿರುವ ಮಹಿಳೆಯಾಗಿದ್ದಾರೆ.

ಇನ್​​​ಸ್ಟಾಗ್ರಾಂನಲ್ಲಿ ಬ್ಲಾಕ್ ಚೈನ್ ಎಂಬ ಕಂಪನಿಯ ಲಿಂಕ್ ಬಂದಿದ್ದು, ಅದನ್ನು ಶಿಕ್ಷಕಿ ಓಪನ್ ಮಾಡಿದ್ದಾರೆ. ಆಗ ಆ್ಯಪ್​​ನಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಹಣ ದ್ವಿಗುಣಗೊಳಿಸಿ ಕೊಡುವುದಾಗಿ ಮಾಹಿತಿ ಬಂದಿದೆ. ಹೀಗಾಗಿ ಬಿಡುವಿನ ಸಮಯದಲ್ಲಿ ಹಣವನ್ನು ಹಾಕಿ ಹೆಚ್ಚಿನ ಹಣವನ್ನು ಸಂಪಾದನೆ ಮಾಡೋಣವೆಂದು ಯೋಚನೆ ಮಾಡಿದ ಶಿಕ್ಷಕಿ, ಬ್ಯಾಂಕ್ ಖ್ಯಾತೆಗಳಿಂದ ವಿವಿಧ ದಿನಾಂಕಗಳಲ್ಲಿ ಒಟ್ಟು 3,21,000 ರೂ, ಹಣವನ್ನು ಹೂಡಿಕೆ ಮಾಡಿದ್ದಾರೆ.

ಇದಾದ ನಂತರ ಬ್ಲಾಕ್ ಚೈನ್ ಆ್ಯಪ್ ಅಕೌಂಟ್​​ನಲ್ಲಿ ರಾಗಿಣಿ ಹೆಸರಿನಲ್ಲಿ 10 ಲಕ್ಷ ಹಣ ಇರುವುದಾಗಿ ಕಾಣಿಸಿದೆಯಂತೆ. ಇದರಿಂದ ಸಂತಸಗೊಂಡ ಶಿಕ್ಷಕಿ ಕೊನೆಗೆ ಹಣ ಡ್ರಾ ಮಾಡಲು ಯತ್ನಿಸಿದಾಗ ಸಾಧ್ಯವಾಗಿಲ್ಲ. ಇದರಿಂದ ಅನುಮಾನಗೊಂಡು ಕಂಪನಿಯವರನ್ನು ಸಂಪರ್ಕಿಸಲು ಯತ್ನಿಸಿದಾಗ ಯಾರೂ ಸಂಪರ್ಕಕ್ಕೆ ಸಿಕ್ಕಿಲ್ಲ. ಕೊನೆಗೆ ಮೋಸ ಹೋಗಿರುವ ಬಗ್ಗೆ ಅವರಿಗೆ ಅರಿವಾಗಿದೆ.

ಇದನ್ನೂ ಓದಿ: Devanahalli News: ದೇವನಹಳ್ಳಿಯಲ್ಲಿ ಬ್ಯಾಂಕ್ ಮ್ಯಾನೇಜರ್​​ನಿಂದಲೇ ಗ್ರಾಹಕರ ಖಾತೆಗೆ ಕನ್ನ; 1.89 ಕೋಟಿ ರೂ. ವರ್ಗಾವಣೆ

ಈಗ ಶಿಕ್ಷಕಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಚಿಕ್ಕಬಳ್ಳಾಪುರ ಸಿಇಎನ್ ಠಾಣೆ ಪೊಲೀಸರು ಐಟಿ ಕಾಯ್ದೆಯ ಕಲಂ 66(ಡಿ) ಮತ್ತು ಭಾರತೀಯ ದಂಡಸಂಹಿತೆಯ ಕಲಂ 419, 420 ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್