AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ನಂದಿ ಹಿಲ್ಸ್ ತಪ್ಪಲಿನಲ್ಲಿ ಸೂಪರ್ ಟ್ರೇನರ್ ಇನ್ಸ್ಟಿಟ್ಯೂಟ್!

ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಪ್ರಕೃತಿಯ ಸೊಬಗಿನ ಬೀಡು ಎಂದೇ ಖ್ಯಾತಿಯಾಗಿರುವ ಚಿಕ್ಕಬಳ್ಳಾಫುರ ತಾಲೂಕಿನ ನಂದಿಗಿರಿಧಾಮದ ತಪ್ಪಲಿನಲ್ಲಿ ದೇಶದಲ್ಲೇ ಪ್ರಥಮವಾದ ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಇನ್ಸಿಟಿಟ್ಯೂಟ್ ಫಾರ್ ಸೂಪರ್ ಟ್ರೈನರ್ಸ್​​ ಎನ್ನುವ ಸಂಸ್ಥೆಯೊಂದು ತಲೆಯೆತ್ತಿದೆ.

ಚಿಕ್ಕಬಳ್ಳಾಪುರ: ನಂದಿ ಹಿಲ್ಸ್ ತಪ್ಪಲಿನಲ್ಲಿ ಸೂಪರ್ ಟ್ರೇನರ್ ಇನ್ಸ್ಟಿಟ್ಯೂಟ್!
ಸೂಪರ್ ಟ್ರೇನರ್ ಇನ್ಸ್ಟಿಟ್ಯೂಟ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Aug 21, 2023 | 6:54 PM

Share

ಚಿಕ್ಕಬಳ್ಳಾಪುರ, ಆಗಸ್ಟ್​ 21: ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಪ್ರಕೃತಿಯ ಸೊಬಗಿನ ಬೀಡು ಎಂದೇ ಖ್ಯಾತಿಯಾಗಿರುವ ಚಿಕ್ಕಬಳ್ಳಾಫುರ ತಾಲೂಕಿನ ನಂದಿಗಿರಿಧಾಮದ (Nandi Hills) ತಪ್ಪಲಿನಲ್ಲಿ ದೇಶದಲ್ಲೇ ಪ್ರಥಮವಾದ ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಇನ್ಸಿಟಿಟ್ಯೂಟ್ ಫಾರ್ ಸೂಪರ್ ಟ್ರೈನರ್ಸ್​​ ಎನ್ನುವ ಸಂಸ್ಥೆಯೊಂದು ತಲೆಯೆತ್ತಿದೆ. ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಮಾಸ್ಟರ್ಸ್ ಟ್ರೈನರ್ಸ್​​ ಸಂಸ್ಥೆ ತಲೆಯೆತ್ತಿದೆ.

ಸೂಪರ್ ಟ್ರೇನರ್ ಇನ್ಸ್ಟಿಟ್ಯೂಟ್ ಅಂದರೆ ಏನು?

ವೃತ್ತಿನಿರತ, ವೃತ್ತಿಪರ ಆಯ್ದ ಪ್ರತಿಭಾವಂತ ಕುಶಲಕರ್ಮಿಗಳನ್ನು ಅಗತ್ಯಕ್ಕೆ ತಕ್ಕಂತೆ ತರಬೇತಿ ನೀಡಿ ಅವರಿಂದ ತಳಹಂತದಲ್ಲಿ ತರಬೇತಿ ಕೊಡಿಸಲು ವೃತ್ತಿಪರ ಪ್ರತಿಭಾವಂತ ಕುಶಲಕರ್ಮಿಗಳ ಕೊರತೆಯಿದೆ. ಇದರಿಂದ ದೇಶದಲ್ಲೇ ಮೊದಲ ಬಾರಿಗೆ ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಇನ್ಸಿಟಿಟ್ಯೂಟ್ ಫಾರ್ ಸೂಪರ್ ಟ್ರೈನರ್ಸ್​ ಸಂಸ್ಥೆ ಹುಟ್ಟುಹಾಕಲಾಗಿದೆ.

ಇದನ್ನೂ ಓದಿ: ಇಂದೇ ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದ ಮುಂಭಾಗ ಬಂದಿಳಿದ ಚಂದ್ರಯಾನ ಉಪಗ್ರಹ! ಭಲೇ ವಿದ್ಯಾರ್ಥಿಗಳೇ!

ಫ್ಲಂಬಿಂಗ್, ಎಲೆಕ್ಟ್ರಿಕಲ್, ಕಾಂಕ್ರೀಟ್ ತಂತ್ರಜ್ಞಾನ ಏರೋಸ್ಪೇಸ್ ತಂತ್ರಜ್ಞಾನ ಮೊಬೈಲ್ ತಂತ್ರಜ್ಞಾನ, ಸೇರಿದಂತೆ ಮುಂದುವರೆದ ಮತ್ತು ಅನಿವಾರ್ಯತೆಯಿರುವ ಕೋರ್ಸ್​ಗಳ ತರಬೇತಿ ನೀಡುವುದು. ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಅವರ ಕನಸಿನ ಕೂಸು ಆಗಿತ್ತು. ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಕೇಂದ್ರ ಸರ್ಕಾರದಲ್ಲಿ ಪೆಟ್ರೋಲಿಯಂ ಹಾಗೂ ರಾಸಾಯನಿಕ ಖಾತೆ ಸಚಿವರಾಗಿದ್ದಾಗ ಇಂಥದೊಂದು ಕನಸು ಕಂಡಿದ್ದು ಖ್ಯಾತ ನಾಮ ಎಂಎನ್‌ಸಿ ಕಂಪೆನಿಗಳ ಬೇಡಿಕೆಗಳಿಗನುಗುಣವಾಗಿ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ನಾಗಾರಾಧನೆ ವಿಶೇಷ ಪೂಜೆ: ಈಶಾ ಫೌಂಡೇಷನ್​ನತ್ತ ಭಕ್ತ ಸಾಗರ

ಸಂಸ್ಥೆಗೆ ಅಂದಿನ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರಿಂದ 14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಂದಿ ಗಿರಿಧಾಮದ ಬುಡದಲ್ಲಿ ಸಂಸ್ಥೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.

ವೀರಪ್ಪ ಮೊಯ್ಲಿ ಭೇಟಿ ನೀಡಿ ವೀಕ್ಷಣೆ

ಚಿಕ್ಕಬಳ್ಳಾಫುರ ಲೋಕಸಭೆ ಚುನಾವಣೆ ಮೇಲೆ ಕಣ್ನಿಟ್ಟಿರುವ ಮಾಜಿ ಮುಖ್ಯಮಂತ್ರಿ ಡಾ. ಎಂ.ವೀರಪ್ಪಮೊಯ್ಲಿ ತಮ್ಮ ಅವಧಿಯಲ್ಲಿ ಶಂಕುಸ್ಥಾಪನೆ ಮಾಡಿದ್ದ ದಿನಕ್ಕೊಂದು ಕಾಮಗಾರಿಯನ್ನು ವೀಕ್ಷಣೆ ಮಾಡುತ್ತಿದ್ದಾರೆ. ಇದೇ ರೀತಿ ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಇನ್ಸಿಟಿಟ್ಯೂಟ್ ಫಾರ್ ಸೂಪರ್ ಟ್ರೈನರ್ಸ್​​ ಸಂಸ್ಥೆಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸಂಸ್ಥೆಯ ಆಡಳಿತಾಧಿಕಾರಿಗಳು ಹಾಗೂ ಅಧಿಕಾರಿಗಳ ಜೊತೆ ಮಾಹಿತಿ ಪಡೆದು ಕಾಮಗಾರಿ ಶೀಘ್ರ ಮುಗಿಸಿ ತರಬೇತಿಗಳನ್ನು ಆರಂಭಿಸುವಂತೆ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು