ಚಿಕ್ಕಬಳ್ಳಾಪುರ: ಹಾಸ್ಟೆಲ್​ನಲ್ಲಿ ಉಪಹಾರ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ವಾರ್ಡನ್​ ಅಮಾನತು

Chikkaballapur News: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ.ರಾಗುಟ್ಟಹಳ್ಳಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್​ನಲ್ಲಿ ಇಂದು ಬೆಳಿಗ್ಗೆ ಉಪಹಾರ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ, 30 ವಿದ್ಯಾರ್ಥಿಗಳು ವಾಂತಿ, ಭೇದಿಯಿಂದ ನರಳಾಡಿದ್ದು, ಅಸ್ವಸ್ಥರಾಗಿರುವಂತಹ ಘಟನೆ ನಡೆದಿದೆ. ಸದ್ಯ ಹಾಸ್ಟೆಲ್​ನಲ್ಲೇ ಚಿಕಿತ್ಸೆ ನೀಡಲಾಗಿದೆ.

ಚಿಕ್ಕಬಳ್ಳಾಪುರ: ಹಾಸ್ಟೆಲ್​ನಲ್ಲಿ ಉಪಹಾರ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ವಾರ್ಡನ್​ ಅಮಾನತು
ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳು
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 16, 2023 | 4:18 PM

ಚಿಕ್ಕಬಳ್ಳಾಪುರ, ಆಗಸ್ಟ್​ 16: ಹಾಸ್ಟೆಲ್​ನಲ್ಲಿ ತಿಂಡಿ ಮಾಡಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು (students) ಅಸ್ವಸ್ಥರಾಗಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ.ರಾಗುಟ್ಟಹಳ್ಳಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್​ನಲ್ಲಿ ನಡೆದಿದೆ. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೆಳಗ್ಗೆ ಉಪಹಾರಕ್ಕೆ ಇಡ್ಲಿ, ಸಾಂಬರ್​ ಸೇವಿಸಿದ್ದರು. ಬಳಿಕ ವಾಂತಿ, ಭೇದಿ ಶುರುವಾಗಿದೆ. ಸದ್ಯ ಹಾಸ್ಟೆಲ್​ಗೆ ವೈದ್ಯರು ಭೇಟಿ ನೀಡಿದ್ದು, ಅಸ್ವಸ್ಥಗೊಂಡ ಕೆಲವು ವಿದ್ಯಾರ್ಥಿಗಳಿಗೆ ಹಾಸ್ಟೆಲ್​ನಲ್ಲೇ ಚಿಕಿತ್ಸೆ ನೀಡಿದ್ದಾರೆ. ಮತ್ತೆ ಕೆಲವು ವಿದ್ಯಾರ್ಥಿಗಳನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್​ ವಾರ್ಡನ್ ಕೆ.ಎನ್. ನಾಗಮಣಿ ವಿರುದ್ದ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ನಿರ್ಲಕ್ಷ್ಯ ಆರೋಪ ಕೂಡ ಕೇಳಿಬಂದಿದ್ದು, ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

ನೆಚ್ಚಿನ ಶಿಕ್ಷಕನ ವರ್ಗಾವಣೆ: ಅತ್ತು ಅತ್ತು ಅಸ್ವಸ್ಥರಾದ ವಿದ್ಯಾರ್ಥಿಗಳು

ಕಲಬುರಗಿ: ನೆಚ್ಚಿನ ಶಿಕ್ಷಕ ವರ್ಗಾವಣೆಯಾಗಿದ್ದಕ್ಕೆ ವಿದ್ಯಾರ್ಥಿಗಳು ಕಣ್ಣೀರು ಹಾಕಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ನಾಗಯ್ಯ ಮಠ್​ ಎನ್ನುವವರು ವರ್ಗಾವಣೆಯಾಗಿದೆ.

ಇದನ್ನೂ ಓದಿ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ಹೊಟ್ಟೆನೋವು, ವಾಂತಿಭೇದಿ: 27ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಹೀಗಾಗಿ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದಾರೆ. ಬಹಳ ಹೊತ್ತು ಅತ್ತಿದ್ದರಿಂದ, ಕೆಲ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಬಳಿಕ ಸೇಡಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ವಿದ್ಯಾರ್ಥಿಗಳಿಗೆ ಬಸ್​ ನಿಲ್ಲಿಸದ ಕೆಎಸ್​ಆರ್​ಟಿಸಿ ಸಿಬ್ಬಂದಿ: ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಕಾರವಾರ: ರಾಜ್ಯ ಹೆದ್ದಾರಿಯ ಅಸಮರ್ಪಕ ರಸ್ತೆಯಿಂದಾಗಿ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆ ಮಾಡದೇ ಕೆ.ಎಸ್.ಆರ್.ಟಿ.ಸಿ ಬಸ್ ತೆರಳುತ್ತಿರುವ ಹಿನ್ನಲೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಹಾವೇರಿ ಹೆದ್ದಾರಿ ತಡೆದು ಇತ್ತೀಚೆಗೆ ಪ್ರತಿಭಟನೆ ಮಾಡಲಾಗಿತ್ತು. ಶಿರಸಿಯ ಬಿಸಲಕೊಪ್ಪ ಗ್ರಾಮಪಂಚಾಯ್ತಿ ವ್ಯಾಪ್ತಿಯ ಮಳಲಗಾಂವ್​ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ರೈತ ಸಂಘದ ಸದಸ್ಯರು ಶೀಘ್ರದಲ್ಲಿ ರಸ್ತೆ ಸರಿಪಡಿಸುವ ಜೊತೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಮಳಲಗಾಂವ್​ನಲ್ಲಿ ಬಸ್​ ಅನ್ನು ನಿಲ್ಲಿಸಬೇಕು.

ಇದನ್ನೂ ಓದಿ: ಕಾರವಾರ: ಚಾಕೊಲೇಟ್​​ ಎಂದು ಪ್ಯಾಂಟ್ ಬಟನ್​ ನುಂಗಿದ ಹಸುಳೆ: ಜೀವ ಉಳಿಸಿದ ಸರಕಾರಿ ಆಸ್ಪತ್ರೆ ವೈದ್ಯರು

ಹೆದ್ದಾರಿಯಲ್ಲಿ ಅರ್ಧಕ್ಕೆ ನಿಲ್ಲಿಸಿರುವ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಪ್ರತಿಭಟನೆ ಹಿನ್ನಲೆಯಲ್ಲಿ ಶಿರಸಿ-ಹಾವೇರಿ ಹೆದ್ದಾರಿ ಮಾರ್ಗದಲ್ಲಿ ಕೆಲವು ಸಮಯ ಸಂಚಾರವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕೆಎಸ್ ಆರ್​ಟಿಸಿ ಅಧಿಕಾರಿಗಳು ಪ್ರತಿಭಟನಾಕಾರರಿಗೆ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:01 pm, Wed, 16 August 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು