AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರದ ಪೆರೇಸಂದ್ರ ಗ್ರಾಮದಲ್ಲಿ 18 ವರ್ಷದ ಯುವತಿ ಶ್ರುತಿ ಅತ್ತೆಯ ಅಡುಗೆ ಕಲಿಯುವ ಬುದ್ಧಿವಾದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಣ್ಣ ಕುಟುಂಬದ ವಿಚಾರಕ್ಕೆ ಯುವಜನರು ಜೀವ ಕಳೆದುಕೊಳ್ಳುವ ಇಂತಹ ದುರಂತಗಳು ಹೆಚ್ಚುತ್ತಿವೆ. ಮೊಬೈಲ್ ವಿಚಾರ ಅಥವಾ ಪಿಯುಸಿ ಫಲಿತಾಂಶದ ಒತ್ತಡದಿಂದಲೂ ಇತ್ತೀಚೆಗೆ ಆತ್ಮಹತ್ಯೆಗಳು ನಡೆದಿವೆ. ಯುವ ಮನಸ್ಸುಗಳ ಸೂಕ್ಷ್ಮತೆಯನ್ನು ಅರ್ಥಮಾಡಿಕೊಂಡು, ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವ ಅಗತ್ಯವಿದೆ.

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!
ಪೆರೇಸಂದ್ರ ಗ್ರಾಮದ ನಿವಾಸಿ ಶ್ರುತಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Apr 18, 2026 | 6:02 PM

Share

ಚಿಕ್ಕಬಳ್ಳಾಪುರ, ಏ, 18: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿದ್ದಳು. ಪಿಯುಸಿ ಫಲಿತಾಂಶ ಬಂದ ಸಮಯದಲ್ಲೂ ವಿದ್ಯಾರ್ಥಿನಿಯೊಬ್ಬಳು ದುಡುಕಿ ಪ್ರಾಣ ಕಳೆದುಕೊಂಡಿದ್ದಳು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಪೆರೇಸಂದ್ರ ಗ್ರಾಮದಲ್ಲಿ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಅತ್ತೆ ಅಡುಗೆ ಮಾಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಪೆರೇಸಂದ್ರ ಗ್ರಾಮದ ನಿವಾಸಿ ಶ್ರುತಿ (18) ಎಂಬ ಯುವತಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾಳೆ. ಅತ್ತೆ ಮನೆಯಲ್ಲಿ ಇರುವಾಗ ಸ್ವಲ್ಪ ಕೆಲಸ ಮಾಡಬೇಕಮ್ಮ, ನನಗೂ ಸ್ವಲ್ಪ ಸಹಾಯ ಆಗುತ್ತದೆ. ಸುಮ್ಮನೆ ಇರುವ ಬದಲು ಅಡುಗೆ ಮಾಡುವುದನ್ನು ಕಲಿ ಎಂದು ಹೇಳಿದರು. ಅತ್ತೆ ಹೇಳಿದ ರೀತಿ ಇಲ್ಲ ಎಂದು ಶ್ರುತಿ ಅಪಾರ್ಥ ಮಾಡಿಕೊಂಡು ಇದರಿಂದ ತೀವ್ರವಾಗಿ ಮನನೊಂದುಕೊಂಡಿದ್ದಾಳೆ.

ಇದನ್ನೂ ಓದಿ: “ವಾಸ್ತು ಹೇಳುವ ನೆಪದಲ್ಲಿ ನನ್ನ ಎದೆಯ ಭಾಗ ಮುಟ್ಟಿದ್ದಾರೆ”: ಮಹಿಳೆಯ ಗಂಭೀರ ಆರೋಪ, ಇದು ಹನಿಟ್ರಾಪ್ ಎಂದ ಮಾಲೀಕ!

ಅತ್ತೆಯ ಮಾತನ್ನು ತುಂಬಾ ಮನಸ್ಸಿಗೆ ತೆಗೆದುಕೊಂಡು, ಮನೆಯಲ್ಲಿದ್ದ ವಿಷಸೇವನೆ ಮಾಡಿದ್ದಾಳೆ. ತಕ್ಷಣ ಶೃತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಂಸಾರದ ಸಣ್ಣಪುಟ್ಟ ವಿಚಾರಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ. ಇಂತಹ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದು ತಪ್ಪು, ಇಂತಹ ಕ್ಷುಲ್ಲಕ ಕಾರಣಕ್ಕೆ ಜೀವ ಕಳೆದುಕೊಳ್ಳುವುದು ಸರಿಯಲ್ಲ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್