ಜೀವಂತವಾಗಿ ಹೂತುಹಾಕಿದ ದುರುಳರು: ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ, ಮುಂದೇನಾಯ್ತು?

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯೋಗ ಶಿಕ್ಷಕಿಯ ಅಪಹರಣ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ದಿಬ್ಬೂರಹಳ್ಳಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅಕ್ಟೋಬರ್ 23 ರಂದು ಶಿಕ್ಷಕಿಯನ್ನು ಅಪಹರಿಸಿ, ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿ ಗುಂಡಿಯಲ್ಲಿ ಹೂತುಹಾಕಲಾಗಿತ್ತು. ಆದರೆ ಸತ್ತಂತೆ ನಟಿಸಿ ಪ್ರಾಣಾಪಾಯದಿಂದ ಪಾರಾಗಿದ್ದರು.

ಜೀವಂತವಾಗಿ ಹೂತುಹಾಕಿದ ದುರುಳರು: ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ, ಮುಂದೇನಾಯ್ತು?
ಜೀವಂತವಾಗಿ ಹೂತುಹಾಕಿದ ದುರುಳರು: ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ, ಮುಂದೇನಾಯ್ತು?
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 07, 2024 | 6:13 PM

ಚಿಕ್ಕಬಳ್ಳಾಪುರ, ನವೆಂಬರ್​ 07: ಯೋಗ ಶಿಕ್ಷಕಿಯನ್ನು (Yoga teacher) ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಅಪಹರಣಕ್ಕೊಳಗಾಗಿದ್ದ ಯೋಗ ಶಿಕ್ಷಕಿ ಮೂಲತಃ ದೇವನಹಳ್ಳಿ ತಾಲೂಕಿನವರು. ಮದುವೆಯಾಗಿ ಪತಿಯಿಂದ ಪ್ರತ್ಯೇಕವಾಗಿ ವಾಸವಿದ್ದರು. ಶಿಕ್ಷಕಿ ಬಳಿ ಸತೀಶ್‌ರೆಡ್ಡಿ​ ಯೋಗ ಕಲಿಯುವುದಕ್ಕೆ ಹೋಗುತ್ತಿದ್ದ. ನಂತರ ಗನ್ ತರಬೇತಿ ನೀಡುವುದಾಗಿ ಮನೆಗೆ ಬಂದಿದ್ದ. ಸತೀಶ್‌ರೆಡ್ಡಿ ಮಾಜಿ ಸೈನಿಕ ಎನ್ನಲಾಗಿದೆ. ಕೊಪ್ಪಳದಲ್ಲಿ ಕಾರು ಕದ್ದು ಕಿಡ್ನ್ಯಾಪ್​ಗೆ ಬಳಸಲಾಗಿತ್ತು.

ಇದನ್ನೂ ಓದಿ: ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನ ಹತ್ಯೆ: ಆರೋಪಿಗಳಿಗೆ ತೆಲುಗು ಸಿನೆಮಾ ಪ್ರೇರಣೆ

ಯೋಗ ಶಿಕ್ಷಕಿಯ ಕೊಲೆಗೆ ಆಕೆಯ ಪ್ರಿಯಕರ ಸಂತೋಷ್​ಕುಮಾರ್ ಪತ್ನಿ ಸುಪಾರಿ ನೀಡಿದ್ದ ಆರೋಪ ಕೇಳಿಬಂದಿದೆ. ಸುಪಾರಿ ಪಡೆದಿದ್ದ ಸತೀಶ್​ರೆಡ್ಡಿ & ಗ್ಯಾಂಗ್​ನಿಂದ ಅ.23ರಂದು ಡಿಎಸ್​​ ಮ್ಯಾಕ್ಸ್ ಸನ್ವರ್ತ್​ ಅಪಾರ್ಟ್​ಮೆಂಟ್​ನಿಂದ ಯೋಗ ಶಿಕ್ಷಕಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ.

ಸತ್ತಂತೆ ನಟಿಸಿ ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ

ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಆದರೆ ಶಿಕ್ಷಕಿ ಒಪ್ಪದಿದ್ದಾಗ ಸ್ನೇಹಿತರ ಕರೆಸಿ ಕತ್ತು ಹಿಸುಕಿ ಕೊಲೆಗೆ ಯತ್ನಿಸಲಾಗಿದೆ. ಶಿಕ್ಷಕಿ ಸತ್ತು ಹೋಗಿದ್ದಾಳೆಂದು ಭಾವಿಸಿ ಗುಂಡಿ ತೋಡಿ ಆಕೆಯ ಮೇಲೆ ಮರದ ಕೊಂಬೆಗಳನ್ನು ಹಾಕಿ ಹೋಗಿದ್ದರು. ಅದುವರೆಗೂ ಸತ್ತಂತೆ ನಟಿಸಿ, ದುಷ್ಕರ್ಮಿಗಳು ಹೋದ ಬಳಿಕ ಗುಂಡಿಯಿಂದ ಎದ್ದು ಹೊರಬಂದಿದ್ದರು.

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಇಬ್ಬರು ಪ್ರಿಯಕರ ಜತೆ ಸೇರಿ ಗಂಡನನ್ನೇ ಕೊಂದ ಪತ್ನಿ

ಬಳಿಕ ಸ್ಥಳೀಯರಿಂದ ಬಟ್ಟೆ ಪಡೆದು ದಿಬ್ಬೂರಹಳ್ಳಿ ಠಾಣೆಗೆ ಆಗಮಿಸಿದ್ದಾರೆ. ಕೊಲೆಗೆ ಯತ್ನ, ಅಪಹರಣ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ದೂರು ನೀಡಿದ್ದಾರೆ. ಮಹಿಳೆ ದೂರು ಆಧರಿಸಿ ಆರೋಪಿಗಳ ಪತ್ತೆಗೆ ಚಿಕ್ಕಬಳ್ಳಾಪುರ ಎಸ್​ಪಿ ಕುಶಾಲ್ ಚೌಕ್ಸೆ ಬಳಿಕ ವಿಶೇಷ ತನಿಖಾ ತಂಡ ರಚಿಸಿ ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Thu, 7 November 24

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ