ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ: ನಾಲ್ವರ ಬಂಧನ

| Updated By: ರಮೇಶ್ ಬಿ. ಜವಳಗೇರಾ

Updated on: Jun 07, 2024 | 8:10 PM

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ದಿನದ ರಾತ್ರಿಯೇ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ನಿವಾಸದ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಜೂನ್ 04ರ ರಾತ್ರಿ ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್​ ನಿವಾಸಕ್ಕೆ ರಾತ್ರಿ ಕಲ್ಲು ಹೊಡೆದಿದ್ದರು.

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ: ನಾಲ್ವರ ಬಂಧನ
Follow us on

ಚಿಕ್ಕಬಳ್ಳಾಪುರ, (ಜೂನ್ 07): ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ದಿನದ ರಾತ್ರಿಯೇ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ನಿವಾಸದ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಎಂಬುವರನ್ನು ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಮನೆ ಮೇಲೆ ಕಲ್ಲು ಹೊಡೆದಿದ್ದಾಗಿ ತಿಳಿದುಬಂದಿದೆ.

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್ 04ರ ರಾತ್ರಿ ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್​ ನಿವಾಸಕ್ಕೆ ರಾತ್ರಿ ಕಲ್ಲು ಹೊಡೆದಿದ್ದರು. ಇದರಿಂದ ಮನೆ ಕಿಟಕಿ ಗಾಜು ಪುಡಿಪುಡಿಯಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಸುಧಾಕರ್ ಗೆಲುವು ಬೆನ್ನಲ್ಲೇ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ; ಕಿಟಕಿ ಗಾಜು ಪುಡಿ ಪುಡಿ

ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಗೃಹ ಕಚೇರಿ ಮೇಲೆ ಜೂನ್ 04ರ ರಾತ್ರಿ 10 ಗಂಟೆ 30 ನಿಮಿಷದ ಸುಮಾರಿಗೆ ಕಲ್ಲು ಎಸೆಯಲಾಗಿತ್ತು. ಘಟನೆಯಲ್ಲಿ ಮನೆಯ ಹಿಂಭಾಗದಲ್ಲಿರುವ ಬೃಹತ್ ಗಾತ್ರದ ಕಿಟಕಿಯ ಗಾಜು ಪುಡಿ ಪುಡಿಯಾಗಿತ್ತು. ಘಟನೆ ವಿಷಯ ತಿಳಿಯುತ್ತಿದ್ದಂತೆಯೇ ಶಾಸಕರ ನಿವಾಸದ ಬಳಿ ಚಿಕ್ಕಬಳ್ಳಾಪುರ ಡಿವೈಎಸ್​ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ