AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಇಲಾಖೆಯಲ್ಲಿ ಅಧಿಕಾರಿ, ಸಿಬ್ಬಂದಿಗಳೇ ಇಲ್ಲ! ಬಣಗುಡುತ್ತಿದೆ ಚಿಕ್ಕಬಳ್ಳಾಪುರ RTO

ರಾಜ್ಯ ಸರ್ಕಾರದಲ್ಲಿ ಅದೊಂದು ಇಲಾಖೆಗೆ ಮಹತ್ವದ ಪಾತ್ರವಿದೆ. ಆ ಇಲಾಖೆ ರಾಜ್ಯ ಸರ್ಕಾರಕ್ಕೆ ಚಿನ್ನದ ಮೊಟ್ಟೆಯಿದ್ದಂತೆ. ಆದರೆ, ಅದೇ ಇಲಾಖೆಯಲ್ಲಿ ಬಹುತೇಕ ಅಧಿಕಾರಿ ಸಿಬ್ಬಂದಿಗಳಿಲ್ಲದೇ ಬಣಗುಡುತ್ತಿದೆ. ಇದರಿಂದ ಒಂದೆಡೆ ಸಾರ್ವಜನಿಕರ ಕೆಲಸ-ಕಾರ್ಯಗಳು ಆಗುತ್ತಿಲ್ಲ. ಮತ್ತೊಂದಡೆ ಸರ್ಕಾರಕ್ಕೆ ಬರಬೇಕಾದ ರಾಜಧನ ಸೋರಿಕೆಯಾಗುತ್ತಿದೆ. ಅಷ್ಟಕ್ಕೂ ಆ ಇಲಾಖೆ ಯಾವುದು ಅಂತೀರಾ? ಇಲ್ಲಿದೆ ನೋಡಿ.

ಸಾರಿಗೆ ಇಲಾಖೆಯಲ್ಲಿ ಅಧಿಕಾರಿ, ಸಿಬ್ಬಂದಿಗಳೇ ಇಲ್ಲ! ಬಣಗುಡುತ್ತಿದೆ ಚಿಕ್ಕಬಳ್ಳಾಪುರ RTO
ಚಿಕ್ಕಬಳ್ಳಾಪುರ ಆರ್​ಟಿಓ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Nov 14, 2023 | 4:35 PM

Share

ಚಿಕ್ಕಬಳ್ಳಾಪುರ, ನ.14: ಚಿಕ್ಕಬಳ್ಳಾಪುರ(Chikkaballapur)ದಲ್ಲಿರುವ ಆರ್​ಟಿಒ(RTO) ಕಛೇರಿಯಲ್ಲಿ 6 ಜನ ಆರ್​ಟಿಒ ಇನ್‌ಸ್ಪೆಕ್ಟರ್‌ಗಳು ಇರಬೇಕಿತ್ತು. ಆದರೆ, ಕಳೆದ ಕೆಲವು ವರ್ಷಗಳಿಂದ ಕೇವಲ ಒಬ್ಬನೆ ಆರ್​ಟಿಒ ಇನ್‌ಸ್ಪೆಕ್ಟರ್‌(RTO Inspector) ಮಾತ್ರ ಇದ್ದು, ಎಲ್ಲವನ್ನು ನೋಡಿಕೊಳ್ಳುತ್ತಿದ್ದಾರೆ. ಹೌದು, ಸದ್ಯ ವಿವೇಕಾನಂದ ಎನ್ನುವ ಓರ್ವ ಆರ್​ಟಿಒ ಇದ್ದು, ಅವರೂ ಸಹ ಸಹಾಯಕರಾಗಿದ್ದಾರೆ. ಇದರಿಂದ ಕಛೇರಿಗೆ ಬರುವ ಸಾರ್ವಜನಿಕರ ಕೆಲಸ ಕಾರ್ಯಗಳಾಗದೇ ಪರದಾಡುತ್ತಿದ್ದಾರೆ.

ಇದು ಅಧಿಕಾರಿಗಳ ಕಥೆಯಾದರೆ, ಇನ್ನು ಆ ಕಛೇರಿಯಲ್ಲಿ ಶೇ.75% ರಷ್ಟು ಕ್ಲರಿಕಲ್ ಸ್ಟಾಪ್ ಹಾಗೂ ಇತರ ಅಧಿಕಾರಿಗಳು ಕೂಡ ಇಲ್ಲವಾಗಿದೆ. ಇದರಿಂದ ಸಕಾಲಕ್ಕೆ ಕಡತಗಳ ವಿಲೇವಾರಿ ಮಾಡಲಾಗುತ್ತಿಲ್ಲ. ತುರ್ತು ಕೆಲಸಗಳಿಗೆಂದು ಕೋಲಾರ, ಬಂಗಾರಪೇಟೆ ಸೇರಿದಂತೆ ಸುತ್ತಮುತ್ತಲಿನ ಆರ್​ಟಿಒ ಕಛೇರಿಗಳಿಂದ ಸರದಿಯಂತೆ ಆರ್​ಟಿಒ ಇನ್ಸ್‍ಪೆಕ್ಟರ್​ಗಳನ್ನು ನಿಯೋಜನೆ ಮಾಡುತ್ತಿದ್ದಾರೆ. ಅದರಂತೆ ಒಬ್ಬರಂತೆ ಒಬ್ಬರು ಪಾಳಿಯಲ್ಲಿ ಬಂದು ಕಡತಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಹಿನ್ನಲೆ ಯಾವುದು ಸಹ, ಸಮಯಕ್ಕೆ ಸರಿಯಾಗಿ ಆಗುತ್ತಿಲ್ಲ.

ಇದನ್ನೂ ಓದಿ:ಸಂಚಾರ ನಿಯಮ ಉಲ್ಲಂಘನೆ ದಂಡ ವಸೂಲಿಗೆ ಬೆಂಗಳೂರು ಟ್ರಾಫಿಕ್ ಪೊಲೀಸರ ಹೊಸ ಕ್ರಮ: ಆರ್​ಟಿಒ ಕಚೇರಿಗಳಿಗೆ ಸಿಬ್ಬಂದಿ ನಿಯೋಜನೆ

ಅಸಲಿಗೆ ರಾಜ್ಯಾದ್ಯಂತ ಸಾರಿಗೆ ಇಲಾಖೆಯಲ್ಲಿ ಅಧಿಕಾರಿ ಸಿಬ್ಬಂದಿಗಳ ಕೊರತೆ ಇದೆ. ಪ್ರಸ್ತುತ ಸಾರಿಗೆ ಸಚಿವರಾಗಿರುವ ರಾಮಲಿಂಗಾರೆಡ್ಡಿ ಇಲಾಖೆಯಲ್ಲಿ ಖಾಲಿ ಇರುವ ಅಧಿಕಾರಿ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುತ್ತಾರ? ಇಲಾಖೆಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸುಗಮಗೊಳಿಸುತ್ತಾರೆಯೇ ಎನ್ನುವುದನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರೇ ತಿಳಿಸಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ