Chikkaballapur News: ವಿದ್ಯಾರ್ಥಿಗಳಿಗಾಗಿ ಪ್ರತಿ ತಿಂಗಳು 12,000 ರೂ. ಖರ್ಚು ಮಾಡುವ ಶಿಕ್ಷಕ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಹೋಬಳಿಯ ಅಡ್ಡಗಲ್‌ ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕರ ಶ್ರಮದಿಂದ ಮೂರು ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದ್ವಿಗುಣಗೊಂಡಿದೆ.

Chikkaballapur News: ವಿದ್ಯಾರ್ಥಿಗಳಿಗಾಗಿ ಪ್ರತಿ ತಿಂಗಳು 12,000 ರೂ. ಖರ್ಚು ಮಾಡುವ ಶಿಕ್ಷಕ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Jul 07, 2023 | 11:10 AM

ಚಿಕ್ಕಬಳ್ಳಾಪುರ: ಕರ್ನಾಟಕದ ಪ್ರತಿಯೊಂದು ಮಗುವು ಶಿಕ್ಷಣ ಪಡೆಯಬೇಕೆಂದು‌ ರಾಜ್ಯ ಸರ್ಕಾರ (Karnataka Government) ಸಾಕಷ್ಟು ಹಣ ಖರ್ಚು ಮಾಡುತ್ತದೆ. ಮತ್ತು ಸರ್ಕಾರಿ ಶಾಲೆಗಳಿಗೆ (Government School) ಹೆಚ್ಚಿನ ಮಕ್ಕಳು ದಾಖಲಾಗಲೆಂದು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ ಕೂಡ ಸರ್ಕಾರಿ ಶಾಲೆಗಳಿಗೆ (School) ಮಕ್ಕಳ ಸಂಖ್ಯೆ ಕಡಿಮೆಯಾಗುತ್ತದೆ. ಆದರೆ ಇಲ್ಲವೊಬ್ಬರ ಶಿಕ್ಷಕರ (Teacher) ಉದಾರತೆಯಿಂದ ಮತ್ತು ಪರಿಶ್ರಮದಿಂದ ಸರ್ಕಾರಿ ಶಾಲೆಗೆ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿದೆ. ಹೌದು ಇವರು ಮಕ್ಕಳಿಗಾಗಿ ಪ್ರತಿ ತಿಂಗಳು 12000 ರೂ. ಖರ್ಚು ಮಾಡುತ್ತಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಟೌಮ್ಸ್​ ಆಫ್​​ ಇಂಡಿಯಾ ವರದಿ ಮಾಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಹೋಬಳಿಯ ಅಡ್ಡಗಲ್‌ ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕರ ಶ್ರಮದಿಂದ ಮೂರು ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದ್ವಿಗುಣಗೊಂಡಿದೆ. ಮೂರು ವರ್ಷಗಳ ಹಿಂದೆ ಶಾಲೆಯಲ್ಲಿ 50 ವಿದ್ಯಾರ್ಥಿಗಳಿದ್ದರು. ಬಂಡಹಳ್ಳಿ, ಪಿಲ್ಲಗುಂಡ್ಲಹಳ್ಳಿ, ಶೆಟ್ಟಿಗೆರೆ, ಗೊರಮಿಡ್ಲಹಳ್ಳಿ ಸೇರಿದಂತೆ ಸುಮಾರು ಏಳು ಗ್ರಾಮಗಳಿಂದ ಅಡ್ಡಗಲ್‌ನ ಸರ್ಕಾರಿ ಪ್ರೌಢ ಶಾಲೆಗೆ ಬರುತ್ತಿರಲಿಲ್ಲ.

ಇದನ್ನೂ ಓದಿ: ಸರ್ಕಾರಿ ಶಾಲೆ ಮುಚ್ಚುವುದನ್ನು ತಪ್ಪಿಸಲು 16 ಲಕ್ಷ ರೂ. ವೆಚ್ಚದಲ್ಲಿ ತರಗತಿ ಕೊಠಡಿಗಳನ್ನು ನಿರ್ಮಿಸಿಕೊಟ್ಟ ಸುಳ್ಯದ ರೈತ

ಮಕ್ಕಳು ಶಾಲೆಗೆ ಯಾಕೆ ಬರುತ್ತಿಲ್ಲವೆಂದು ಸಮೀಕ್ಷೆ ನಡೆಸಿದ ಶಿಕ್ಷಕರಿಗೆ ತಿಳಿದಿದ್ದು, ಈ ಗ್ರಾಮಗಳಿಗೆ ಸರಿಯಾದ ಸಾರಿಗೆ ಸೌಲಭ್ಯವಿಲ್ಲದ ಕಾರಣ ಹೆಚ್ಚಿನ ಮಕ್ಕಳು ಶಾಲೆಗೆ ಬರುತ್ತಿರಲಿಲ್ಲವೆಂದು. ಮಕ್ಕಳ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಶಾಲೆ ಆರಂಭದ ಸಮಯದಲ್ಲಿ, ಶಿಕ್ಷಕರು‌ ಈ ಗ್ರಾಮಗಳಿಗೆ ತೆರಳಿ ಮಕ್ಕಳನ್ನು ಶಾಲೆಗೆ ಸೇರಿಸಲು ಪೋಷಕರನ್ನು ಒತ್ತಾಯಿಸಿದರು. ಮತ್ತು ಸರಿಯಾದ ಸಾರಿಗೆ ಸೌಲಭ್ಯವನ್ನು ಒದಗಿಸುವ ಭರವಸೆ ನೀಡಿದರು.

ನೀಡಿದ ಭರವಸೆಯಂತೆ ಶಾಲೆಯ ಗಣಿತ ಶಿಕ್ಷಕ ಮೊದಲು ವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡು ಹೋಗಲು ಮತ್ತು ಮರಳಿ ಮನೆಗೆ ಬಿಡಲು ಆಟೋರಿಕ್ಷಾ ವ್ಯವಸ್ಥೆ ಮಾಡಿದರು. ಇದರಿಂದ ಶಾಲೆಯಲ್ಲಿ ದಾಖಲಾತಿ ಹೆಚ್ಚಾಯಿತು. ಮಕ್ಕಳ ಸಂಖ್ಯೆ ಏರುತ್ತಾ ಸಾಗಿತು. ಮಕ್ಕಳ ಹೆಚ್ಚಾದ ನಂತರ, ಅವರು ಮಕ್ಕಳನ್ನು ಕರೆದೊಯ್ಯಲು ಟೆಂಪೋವೊಂದನ್ನು ಬಾಡಿಗೆ ಪಡೆದರು. ಈ ಟೆಂಪೊಗೆ ಪ್ರತಿ ತಿಂಗಳು 12000 ರೂ. ಬಾಡಿಗೆ ನೀಡುತ್ತಿದ್ದಾರೆ. ಮೂರು ವರ್ಷಗಳ ನಂತರ ಇದೀಗ ಶಾಲೆಯ ಪಟ್ಟಿಯಲ್ಲಿ 132 ವಿದ್ಯಾರ್ಥಿಗಳು ಇದ್ದಾರೆ. ಹೀಗೆ ಶಿಕ್ಷಕರೊಬ್ಬರು ನಿಸ್ವಾರ್ಥ ಕಾರ್ಯದಿಂದ ನೂರಾರು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:37 am, Fri, 7 July 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ