AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಬಯಲು ಬರ್ಹಿದೆಸೆಗೆ ಹೋಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗಾಗಿ ಹುಡುಕಾಟ

ಚಿಕ್ಕಬಳ್ಳಾಫುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಯಲು ಬರ್ಹಿದೆಸೆಗೆಂದು ಮಹಿಳೆಯೊಬ್ಬರು ಮನೆಯಿಂದ ಆಚೆ ಹೋಗಿದ್ದರು. ಅದನ್ನು ಗಮನಿಸಿದ ಗ್ರಾಮದ ವ್ಯಕ್ತಿಯೋರ್ವ ಮಾನವೀಯತೆಯಿಲ್ಲದೆ ಮೃಗದಂತೆ ವರ್ತಿಸಿ ಗೃಹಿಣಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಬಯಲು ಬರ್ಹಿದೆಸೆಗೆ ಹೋಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗಾಗಿ ಹುಡುಕಾಟ
ಪ್ರಾತಿನಿಧಿಕ ಚಿತ್ರ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 03, 2023 | 8:02 PM

ಚಿಕ್ಕಬಳ್ಳಾಪುರ, ಸೆ.03: ಬಯಲು ಬರ್ಹಿದೆಸೆಗೆಂದು ಮಹಿಳೆಯೊಬ್ಬರು ಮನೆಯಿಂದ ಆಚೆ ಹೋಗಿದ್ದರು. ಅದನ್ನು ಗಮನಿಸಿದ ಗ್ರಾಮದ ವ್ಯಕ್ತಿಯೋರ್ವ ಮಾನವೀಯತೆಯಿಲ್ಲದೆ ಮೃಗದಂತೆ ವರ್ತಿಸಿ ಗೃಹಿಣಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಚಿಕ್ಕಬಳ್ಳಾಫುರ (Chikkaballapur) ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 32 ವರ್ಷದ ಗೃಹಿಣಿ ಸಂಜೆ 5ಗಂಟೆ ಸಮಯದಲ್ಲಿ ಊರಾಚೆ ಇರುವ ರಸ್ತೆ ಬದಿ ಬಯಲು ಬರ್ಹಿದೆಶೆಗೆ ಹೋಗಿದ್ದಳು. ಆಗ ಪರಿಚಿತ ವ್ಯಕ್ತಿ ಮಹಿಳೆಯನ್ನು ನೋಡಿದ್ದೇ ತಡ ಕಿಚಕನಂತೆ ಮಹಿಳೆಯ ಸೀರೆಯನ್ನು ಎಳೆದಾಡಿ ಆಕೆಯ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತವಾಗಿ ವರ್ತಿಸಿದ್ದಾನೆ.

ಪೊಲೀಸರಿಗೆ ದೂರು ನೀಡಿದ ನೊಂದ ಮಹಿಳೆ

ಇನ್ನು ಈ ವೇಳೆ ಮಹಿಳೆ ವಿರೋಧ ವ್ಯಕ್ತಪಡಿಸಿದ್ರೂ ಆಕೆಯನ್ನು ಗಟ್ಟಿಯಾಗಿ ಹಿಡಿದು ಎಳೆದಾಡಿ ವಿಕೃತಿ ಮೆರೆದು ಮಾನಭಂಗ ಮಾಡಿದ್ದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ನಂತರ ದಾರಿಹೋಕರು ಬರುತ್ತಿರುವುದನ್ನು ಗಮನಿಸಿದ ಪರಿಚಿತ ವ್ಯಕ್ತಿ, ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 341, 354(ಬಿ) 504, 506 ಸೆಕ್ಷನ್‍ಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:Tumakuru News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ 10 ವರ್ಷ ಜೈಲು, 25 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಮೇಕೆ ಮೇಲೆ ಅತ್ಯಾಚಾರ ನಡೆಸಿದ ಆರೋಪ; ಠಾಣೆಗೆ ದೂರು

ರಾಮನಗರ: ಮನುಷ್ಯನ ವಿಕೃತಿ ಮೀತಿಮಿರಿದೆ. ಹೌದು, ಮೇಕೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಜಮೀರ್ ಖಾನ್ ಎಂಬುವವರು ರಾಮನಗರ ಜಿಲ್ಲೆಯ ಚನ್ನಪಟ್ಟಣ ಟೌನ್ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನು ಈ ಘಟನೆ ಚನ್ನಪಟ್ಟಣದ ಇಂದಿರಾ ಕಾಟೇಜ್‌ನಲ್ಲಿ ನಡೆದಿದ್ದು, ರೋಹಿದ್ (25) ಎಂಬಾತ ಮೇಕೆ‌ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ. ಇತ ಪ್ರತಿದಿನ ಬಂದು ಮೇಕೆ ಕೊಂಡೊಯ್ಯುತ್ತಿದ್ದನಂತೆ. ಹೀಗೆ ರೋಹಿದ್ ಹಿಂಬಾಲಿಸಿ ಹೋದಾಗ ಕೃತ್ಯ ಬೆಳಕಿಗೆ ಬಂದಿದೆ. ಜೊತೆಗೆ ಮೇಕೆ ಮೇಲೆ ಅತ್ಯಾಚಾರ ಮಾಡುವ ವಿಡಿಯೋ ಕೂಡ ಜಮೀರ್ ಸೆರೆ ಹಿಡಿದಿದ್ದು, ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ