AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳಿನಿಂದ ಚಾರಣ ಮಾರ್ಗದರ್ಶಕರಿಗಿಲ್ಲ ಸಂಬಳ: ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

ಚಿಕ್ಕಬಳ್ಳಾಪುರ ಜಿಲ್ಲೆಯ ಸ್ಕಂದಗಿರಿ ಬೆಟ್ಟದ ಚಾರಣ ಮಾರ್ಗದರ್ಶಕರು ಕಳೆದ ಆರು ತಿಂಗಳಿಂದ ವೇತನ ಪಡೆಯದೆ ತೊಂದರೆ ಅನುಭವಿಸುತ್ತಿದ್ದಾರೆ. ಅರಣ್ಯ ಇಲಾಖೆಯಿಂದ ಈ ಮಾರ್ಗದರ್ಶಕರ ನೇಮಕಾತಿ ಆಗಿದ್ದು, ಪ್ರತಿ ಟ್ರೆಕ್ಕಿಂಗ್‌ಗೆ 800 ರೂಪಾಯಿ ಸಂಭಾವನೆ ನೀಡುವುದಾಗಿ ಒಪ್ಪಂದವಾಗಿತ್ತು. ಆದರೆ, ಇಲಾಖೆಯು ಈ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಮಾರ್ಗದರ್ಶಕರು ಆರೋಪಿಸುತ್ತಿದ್ದಾರೆ. ಡಿಎಫ್ಒ ಒಂದು ವಾರದೊಳಗೆ ವೇತನ ಪಾವತಿಸುವ ಭರವಸೆ ನೀಡಿದ್ದಾರೆ.

6 ತಿಂಗಳಿನಿಂದ ಚಾರಣ ಮಾರ್ಗದರ್ಶಕರಿಗಿಲ್ಲ ಸಂಬಳ: ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಸ್ಕಂದಗಿರಿ, ಅರಣ್ಯ ಇಲಾಖೆ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ವಿವೇಕ ಬಿರಾದಾರ

Updated on: Mar 19, 2025 | 8:42 AM

ಚಿಕ್ಕಬಳ್ಳಾಪುರ, ಮಾರ್ಚ್​ 19: ಜಿಲ್ಲೆಯಲ್ಲಿನ ಸ್ಕಂದಗಿರಿ (Skandagiri) ಚಾರಣಪ್ರಿಯರ ನೆಚ್ಚಿನ ತಾಣವಾಗಿದೆ. ರಾಜಧಾನಿ ಬೆಂಗಳೂರಿನಿಂದ (Bengaluru) 62 ಕಿಮೀ ಮತ್ತು ಚಿಕ್ಕಬಳ್ಳಾಪುರದಿಂದ (Chikkaballapur) 3 ಕಿಮೀ ದೂರದಲ್ಲಿದೆ. ಇಲ್ಲಿಗೆ ಬರುವ ಚಾರಣಿಗರಿಗೆ ಮಾರ್ಗದರ್ಶನ ನೀಡಲು ಅರಣ್ಯ ಇಲಾಖೆ ಚಾರಣ ಮಾರ್ಗದರ್ಶಕರ ನೇಮಕ ಮಾಡಿಕೊಂಡಿದೆ. ಆದರೆ, ಚಾರಣ ಮಾರ್ಗದರ್ಶಕರಿಗೆ ಕಳೆದ ಆರು ತಿಂಗಳುಗಳಿಂದ ವೇತನ ಜೊತೆಗೆ ಸೌಕರ್ಯಗಳನ್ನೂ ಸಹ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಒಂದು ಚಾರಣಕ್ಕೆ ಮಾರ್ಗದರ್ಶಕರಿಗೆ ಇಲಾಖೆಯಿಂದ ತಲಾ 800ರೂಪಾಯಿ ಸಂಬಾವನೆ ನೀಡಲಾಗುತ್ತಿತ್ತು. ಆದರೆ, ಅರಣ್ಯ ಇಲಾಖೆ ಕಳೆದ ಆರು ತಿಂಗಳುಗಳಿಂದ ಚಾರಣ ಮಾರ್ಗದರ್ಶಕರಿಗೆ ಸಂಭಾವನೆ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಇಲಾಖೆಯ ವಿರುದ್ಧ ಚಾರಣ ಮಾರ್ಗದರ್ಶಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲು ಕರ್ನಾಟಕ ಅರಣ್ಯ ಪ್ರವಾಸೋದ್ಯಮ ನಿಗಮ ಟ್ರೆಕ್ಕಿಂಗ್‌ ನಿರ್ವಹಣೆ ಮಾಡ್ತಿತ್ತು. ಆಗ ಚಾರಣ ಮಾರ್ಗದರ್ಶಕರಿಗೆ ಪ್ರತಿ ತಿಂಗಳು ಸಂಬಾವನೆ ನೀಡಲಾಗ್ತಿತ್ತು. ಆದರೆ, ಇದೀಗ ಅರಣ್ಯ ಇಲಾಖೆ ಚಾರಣ ನಿರ್ವಾಹಣೆ ಮಾಡುತ್ತಿದ್ದು, ಕಳೆದ ಆರು ತಿಂಗಳಿನಿಂದ ನಮಗೆ ಸಂಭಾವನೆ ನೀಡಿಲ್ಲ ಎಂದು ಚಾರಣ ಮಾರ್ಗದರ್ಶಕರು ಆರೋಪಿಸಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರ ಡಿಎಫ್​ಒ ಮಾತನಾಡಿ, ಒಂದು ವಾರದಲ್ಲಿ ಸಂಭಾವನೆ ನೀಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ
Image
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
Image
ಬಿಸಿಲಿಗೆ ಹೈರಾಣಾದ ಜನ: ವಾಂತಿ, ಬೇದಿ, ಜ್ವರ, ಜಾಂಡೀಸ್​ ಉಲ್ಬಣ
Image
ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, ಇಬ್ಬರು ಸಜೀವ ದಹನ
Image
ಮಹಿಳಾ ದಿನಾಚರಣೆ: ಚಿಕ್ಕಬಳ್ಳಾಪುರದ ಸ್ವಚ್ಛ ವಾಹಿನಿಗೆ ಮಹಿಳಾ ಸಾರಥಿ

ಇದನ್ನೂ ಓದಿ: ಮಹಿಳೆಯ ಮಾಟಮಂತ್ರಕ್ಕೆ‌ ಬೆಚ್ಚಿಬಿದ್ದ ಚಿಕ್ಕಬಳ್ಳಾಪುರ ಜನ

ಸ್ಕಂದಗಿರಿ ಬೆಟ್ಟ

ಕಳವರದುರ್ಗ ಎಂಬ ಹೆಸರಿನಿಂದಲೂ ಕರೆಯಲ್ಪಡುವ ಸ್ಕಂದಗಿರಿಯು ಕೋಟೆಯಿಂದಾವೃತ್ತವಾದ ಬೆಟ್ಟವಾಗಿದ್ದು, ಬೆಂಗಳೂರಿನಿಂದ ಸು. 62 ಕಿ.ಮೀ. ದೂರದಲ್ಲಿರುವ ಕಳವರ ಹಳ್ಲಿಯಲ್ಲಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಳ್ಳಾರಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿ 7 ರ ಬಳಿ ಇದೆ. ಬೆಟ್ಟದ ತುದಿಯು ಸಮುದ್ರ ಮಟ್ಟದಿಂದ 1450 ಮೀ. ನಷ್ಟು ಎತ್ತರದಲ್ಲಿದೆ. ಒಟ್ಟು ಅಂದಾಜು 5 ಗಂಟೆಗಳ ಚಾರಣವಾಗಿದ್ದು (ಆರೋಹಣ – 2 ತಾಸು, ವಿರಾಮ – 1 ತಾಸು, ಅವರೋಹಣ – 2 ತಾಸು) ಅತೀಸುಲಭವೂ ಅಲ್ಲದ ಅತೀ ಕಠಿಣವೂ ಅಲ್ಲದ ಚಾರಣ ಮಾರ್ಗ ಇದೆ. ವರ್ಷದ ಎಲ್ಲ ಸಮಯದಲ್ಲೂ ಚಾರಣ ಮಾಡಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ