ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಬರುತ್ತಿದ್ದವರ ಕಾರಿನ ಮೇಲೆ ಬಿದ್ದ ಲಾರಿ: ಚಿಕ್ಕಬಳ್ಳಾಪುರದ ಮೂವರು ಸಾವು

ಆಂಧ್ರದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ಲಾರಿ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಬಳ್ಳಾಪುರ ಮೂಲದ ಮೂವರು ಮೃತಪಟ್ಟಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ತಿರುಪತಿ-ಅನಂತಪುರ ರಾಷ್ಟ್ರೀಯ ಹೆದ್ದಾರಿಯ ಭಾಕರಪೇಟ ಘಾಟ್‌ನಲ್ಲಿ ಘಟನೆ ನಡೆದಿದೆ. 

ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಬರುತ್ತಿದ್ದವರ ಕಾರಿನ ಮೇಲೆ ಬಿದ್ದ ಲಾರಿ: ಚಿಕ್ಕಬಳ್ಳಾಪುರದ ಮೂವರು ಸಾವು
ರಾಮನಗರ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ದುರ್ಮರಣ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ವಿವೇಕ ಬಿರಾದಾರ

Updated on:Sep 14, 2024 | 2:46 PM

ಚಿಕ್ಕಬಳ್ಳಾಪುರ, ಸೆಪ್ಟೆಂಬರ್​ 13: ಆಂಧ್ರ ಪ್ರದೇಶದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ಲಾರಿ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಬಳ್ಳಾಪುರ (Chikkaballapur) ಮೂಲದ ಮೂವರು ಮೃತಪಟ್ಟಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ತಿರುಪತಿ-ಅನಂತಪುರ ರಾಷ್ಟ್ರೀಯ ಹೆದ್ದಾರಿಯ ಭಾಕರಪೇಟ ಘಾಟ್‌ನಲ್ಲಿ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹರಿಸ್ಥಳ ನಿವಾಸಿಗಳಾದ ಮುನಿವೆಂಕಟ ರೆಡ್ಡಿ (55) , ಚಾಲಕ ರಮೇಶ (34), ಮಂಜುನಾಥ್ (38) ಮೃತ ದುರ್ದೈವಿಗಳು. ತೇಜಸ್​ ಎಂಬುವರಿಗೆ ಗಂಭೀರ ಗಾಯವಾಗಿದೆ. ತಿರುಪತಿಗೆ ಹೋಗಿ, ಗುರುವಾರ ಸಂಜೆ ಚಿಕ್ಕಬಳ್ಳಾಪುರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಒಂದೇ ಕುಟುಂಬವದರು ಎರಡು ಕಾರಿನಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದರು. ತಿಮ್ಮಪ್ಪನ ದರ್ಶನ ಪಡೆದು ಗುರವಾರ ಸಂಜೆ ಕುಟುಂಬಸ್ಥರು ಚಿಕ್ಕಬಳ್ಳಾಪುರಕ್ಕೆ ವಾಪಸ್​ ಆಗುತ್ತಿದ್ದರು. ಈ ವೇಳೆ ಒಂದು ಕಾರಿನ ಮೇಲೆ ಟೊಮ್ಯಾಟೊ ಸಾಗಿಸುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಚಾಲಕ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾರು ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಎಲ್.ಸುಬ್ಬರಾಯುಡು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

ಡಿವೈಡರ್​ಗೆ ಕಾರು ಡಿಕ್ಕಿ, ಇಬ್ಬರು ಸಾವು

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮೊಗ್ಲಿಯಲ್ಲಿ ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಒಂದು ಮಗು ಸೇರಿದಂತೆ ಐವರಿಗೆ ಗಂಭೀರ ಗಾಯವಾಗಿದೆ. ಮೃತರನ್ನು ಬೆಂಗಳೂರು ಮೂಲದವರೆಂದು ಗುರುತಿಸಲಾಗಿದೆ. ಕೆಎ50ಪಿ 1154 ನಂಬರ್​ನ ಇನ್ನೋವಾ ಕಾರು ತಿರುಮಲದಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ಟೈರ್ ಒಡೆದು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ.

ವಾಹನದಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಬಂಗಾರ್ ಪಾಳಯಂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಚಿತ್ತೂರು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಂಗಾರ್ ಪಾಳಯಂ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:09 am, Fri, 13 September 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?