AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ವರ್ಷದೊಳಗೆ ಯುವತಿ ಅನುಮಾನಾಸ್ಪದ ಸಾವು: ಎದೆಯ ಮೇಲೆ ಯುವಕನ ಹೆಸರು ಹಚ್ಚೆ ಹಾಕಿಸಿಕೊಂಡಿದ್ದೇ ಕಾರಣವಾಯ್ತಾ?

ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನವವಿವಾಹಿತೆ ಪ್ರೇಮಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಹಚ್ಚೆ ವಿಚಾರವಾಗಿ ದಂಪತಿ ನಡುವೆ ನಡೆಯುತ್ತಿದ್ದ ಕಲಹ ಹಾಗೂ ವರದಕ್ಷಿಣೆ ಕಿರುಕುಳವೇ ಈ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ. ಸದ್ಯ ಸಂತ್ರಸ್ತೆಯ ಕುಟುಂಬದವತು ನೀಡಿದ ದೂರಿನ ಆಧಾರದಲ್ಲಿ ಆಕೆಯ ಪತಿ ಶಿವಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಮದುವೆಯಾದ ವರ್ಷದೊಳಗೆ ಯುವತಿ ಅನುಮಾನಾಸ್ಪದ ಸಾವು: ಎದೆಯ ಮೇಲೆ ಯುವಕನ ಹೆಸರು ಹಚ್ಚೆ ಹಾಕಿಸಿಕೊಂಡಿದ್ದೇ ಕಾರಣವಾಯ್ತಾ?
ಪ್ರೇಮಾ ಹಾಗೂ ಶಿವಕುಮಾರ್Image Credit source: tv9
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:May 02, 2026 | 3:25 PM

Share

ಚಿಕ್ಕಬಳ್ಳಾಪುರ, ಮೇ 2: ಮದುವೆಯಾದ ಮೊದಲ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನಡೆದಿದೆ. ಮೇ 15ಕ್ಕೆ ಮದುವೆಯ ಸಂಭ್ರಮ ಆಚರಿಸಬೇಕಿದ್ದ ಮನೆ ಈಗ ಸ್ಮಶಾನ ಸದೃಶವಾಗಿದೆ.

ಪ್ರಕರಣದ ಹಿನ್ನೆಲೆ

ಗೌರಿಬಿದನೂರು ಮೂಲದ ಶಕುಂತಲಾ ಎಂಬುವರ ಪುತ್ರಿ ಪ್ರೇಮಾ ಹಾಗೂ ಶಿಡ್ಲಘಟ್ಟದ ಜಂಗಮಕೋಟೆಯ ಶಿವಕುಮಾರ್ ಪರಸ್ಪರ ಸಂಬಂಧಿಕರು. ಪ್ರೇಮಾಳನ್ನು ಶಿವಕುಮಾರ್ ಕಾಡಿ ಬೇಡಿ ಮದುವೆಯಾಗಿದ್ದ. ಮದುವೆಯಾದ ಮೊದಲ ಮೂರು ತಿಂಗಳು ದಂಪತಿ ಸುಖವಾಗಿದ್ದರು. ಆದರೆ, ಆ ನಂತರ ಪ್ರೇಮಾ ಎದೆಯ ಮೇಲೆ ಯುವಕನೊಬ್ಬನ ಹೆಸರಿನ ಹಚ್ಚೆ (Tattoo) ಇರುವುದನ್ನು ಕಂಡು ದಾಂಪತ್ಯದಲ್ಲಿ ಬಿರುಕು ಮೂಡಿತ್ತು ಎಂದು ಸಂಬಂಧಿಕರು ತಿಳಿಸಿದ್ದಾರೆ. ಅದು ಕೇವಲ ಸ್ನೇಹಿತನ ಹೆಸರು ಎಂದು ಪ್ರೇಮಾ ಹೇಳಿದ್ದರೂ, ಶಿವಕುಮಾರ್ ಅದನ್ನು ಅನುಮಾನಿಸಿ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲು ಆರಂಭಿಸಿದ್ದ ಎಂದು ಮೃತಳ ಸಂಬಂಧಿಕರು ಆರೋಪಿಸಿದ್ದಾರೆ.

ವರದಕ್ಷಿಣೆ ಕಿರುಕುಳದ ಆರೋಪ

ಕೇವಲ ಹಚ್ಚೆ ವಿವಾದ ಮಾತ್ರವಲ್ಲದೆ, ವರದಕ್ಷಿಣೆ ತರುವಂತೆ ಶಿವಕುಮಾರ್ ಪ್ರೇಮಾ ಮೇಲೆ ನಿರಂತರವಾಗಿ ಹಲ್ಲೆ ಮಾಡುತ್ತಿದ್ದ ಎಂದು ಪ್ರೇಮಾ ತಾಯಿ ಶಕುಂತಲಾ ಆರೋಪಿಸಿದ್ದಾರೆ. ತಿಂಗಳ ಹಿಂದೆಯಷ್ಟೇ ಜಗಳವಾಡಿ ತವರು ಮನೆ ಸೇರಿದ್ದ ಪ್ರೇಮಾಳನ್ನು, ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಶಿವಕುಮಾರ್ ಮತ್ತೆ ಮನೆಗೆ ಕರೆತಂದಿದ್ದ. ಆದರೆ ಮನೆಗೆ ಬಂದ ತಿಂಗಳೊಳಗೆ ಪ್ರೇಮಾ ಮೃತಪಟ್ಟಿರುವುದು ಕುಟುಂಬದವರ ಆಕ್ರೋಶಕ್ಕೆ ಕಾರಣವಾಗಿದೆ.

ಮೂರು ತಿಂಗಳ ಹಿಂದೆ ಪ್ರೇಮಾಗೆ ಗರ್ಭಪಾತವಾಗಿತ್ತು. ಆಗಲೂ ಗಂಡನ ಮನೆಯವರು ಸರಿಯಾಗಿ ನೋಡಿಕೊಂಡಿರಲಿಲ್ಲ ಎಂದು ಕುಟುಂಬಸ್ಥರು ದೂರಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗೃಹಿಣಿ ಅನುಮಾನಾಸ್ಪದ ಸಾವು, ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರ ಆರೋಪ

ಸದ್ಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪತಿ ಶಿವಕುಮಾರ್‌ನನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Sat, 2 May 26

Follow Us
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ