ಚಿಕ್ಕಬಳ್ಳಾಪುರದಲ್ಲಿ ಪೊಲೀಸರಿಂದ ಕಿರುಕುಳ ಆರೋಪ! ವಿಷ ಸೇವಿಸಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು

TV9 Digital Desk

| Edited By: sandhya thejappa

Updated on:Oct 10, 2021 | 9:22 AM

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಕುರುಬರಪೇಟೆ ವೆಂಕಟೇಶ್ ಬಾಬು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪದ್ಮಾವತಿ ಶಿಡ್ಲಘಟ್ಟ ನಗರ ಠಾಣೆಯಲ್ಲಿ ಅಪರಾಧ ಪತ್ತೆ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಾರೆ.

ಚಿಕ್ಕಬಳ್ಳಾಪುರದಲ್ಲಿ ಪೊಲೀಸರಿಂದ ಕಿರುಕುಳ ಆರೋಪ! ವಿಷ ಸೇವಿಸಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು
ವೆಂಕಟೇಶ್ ಬಾಬು

Follow us on

ಚಿಕ್ಕಬಳ್ಳಾಪುರ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪೊಲೀಸರ ಕಿರುಕುಳದಿಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಪಿಎಸ್ಐ ಪದ್ಮಾವತಿ ಎಂಬುವವರು ಯುವಕ ವೆಂಕಟೇಶ್ ಬಾಬು ಎಂಬ ಯುವಕನಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ. ಇನ್ಸ್ಪೆಕ್ಟರ್ ಪದ್ಮಾವತಿಯ ಕಿರುಕುಳ ಸಹಿಸಲಾಗದೆ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರಂತೆ. ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಕುರುಬರಪೇಟೆ ವೆಂಕಟೇಶ್ ಬಾಬು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪದ್ಮಾವತಿ ಶಿಡ್ಲಘಟ್ಟ ನಗರ ಠಾಣೆಯಲ್ಲಿ ಅಪರಾಧ ಪತ್ತೆ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಾರೆ. ಯುವಕನ ಪತ್ನಿ ಮನೆಗೆಲಸ ಮಾಡುತ್ತಿದ್ದಳು. ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನದ ಸರ ಕಾಣೆಯಾಗಿತ್ತು. ಕೆಲಸದವಳ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಲಾಗಿತ್ತು. ಪತ್ನಿಯ ಬದಲು ಆಕೆಯ ಗಂಡನಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಪ್ರಕರಣ ದಾಖಲಿಸದೆ ಯುವಕನಿಗೆ ಇನ್ಸ್ಪೆಕ್ಟರ್ ಪದ್ಮಾವತಿ ಚಿತ್ರಹಿಂಸೆ ನೀಡುತ್ತಿದ್ದರೆಂದು ಆರೋಪಿಸಿದ್ದಾರೆ.

ಪೊಲೀಸರ ಕಿರುಕುಳದಿಂದ ಬೇಸತ್ತು ವೆಂಕಟೇಶ್ ಬಾಬು ವಿಷ ಸೇವಿಸಿದ್ದರಂತೆ. ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೆಂಕಟೇಶ್ ಮೃತಪಟ್ಟಿದ್ದಾರೆ.

ಇದನ್ನೂ ಓದಿ

ಧಾರವಾಡದಲ್ಲಿ ಸರಣಿ ಅಪಘಾತ; ಅದೃಷ್ಟವಶಾತ್ ಸ್ಥಳದಲ್ಲಿದ್ದ ಎಲ್ಲರೂ ಬಚಾವ್

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಲಘು ಭೂಕಂಪ, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.4ರಷ್ಟು ದಾಖಲು

ತಾಜಾ ಸುದ್ದಿ

Related Stories

Click on your DTH Provider to Add TV9 Kannada