ಪೆರೇಸಂದ್ರ ಬಳಿ ಕಂಟೈನರ್ ಪತ್ತೆ: 3 ಕೋಟಿ ರೂ ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ

ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ 3 ಕೋಟಿ ರೂಪಾಯಿ ಮೌಲ್ಯದ ಶಿಯೋಮಿ ಮೊಬೈಲ್‌ಗಳನ್ನು ಒಳಗೊಂಡ ಕಂಟೈನರ್ ಕಳವುಗೊಂಡಿದೆ. ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಮೊಬೈಲ್‌ಗಳು ಕಳವಾಗಿದ್ದು, ಖಾಲಿ ಕಂಟೈನರ್ ಪತ್ತೆಯಾಗಿದೆ. ಚಾಲಕ ನಾಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೆರೇಸಂದ್ರ ಬಳಿ ಕಂಟೈನರ್ ಪತ್ತೆ: 3 ಕೋಟಿ ರೂ ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ
ಪೆರೇಸಂದ್ರ ಬಳಿ ಕಂಟೈನರ್ ಪತ್ತೆ: 3 ಕೋಟಿ ರೂ. ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 29, 2024 | 8:27 PM

ಚಿಕ್ಕಬಳ್ಳಾಪುರ, ನವೆಂಬರ್​ 29: ಕಂಟೈನರ್​ ಸಮೇತ ಶಿಯೋಮಿ (Xiaomi Mobile) ಕಂಪನಿಗೆ ಸೇರಿದ 3 ಕೋಟಿ ಮೌಲ್ಯದ ಮೊಬೈಲ್​ ಕಳತನವಾಗಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ನಡೆದಿದೆ. ಎನ್​ಎಲ್ 01, ಎಎಫ್ 2743 ಕಂಟೇನರ್​ನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಮೊಬೈಲ್ ಸಾಗಣೆ ಮಾಡುವಾಗ ಕಳ್ಳತನವಾಗಿದೆ. ಸದ್ಯ ಪೆರೇಸಂದ್ರೆ ಠಾಣೆ ಪೊಲೀಸರು ಖಾಲಿ ಕಂಟೇನರ್ ವಶಕ್ಕೆ ಪಡೆದುಕೊಂಡಿದ್ದಾರೆ.

ನ. 22ರಂದು ಕಂಟೈನರ್​ ಒಂದರಲ್ಲಿ 3 ಕೋಟಿ ರೂ. ಮೌಲ್ಯದ ಶಿಯೋಮಿ ಕಂಪನಿಗೆ ಸೇರಿದ ಮೊಬೈಲ್ ಗಳನ್ನು ತುಂಬಿಕೊಂಡು ದೆಹಲಿಯಿಂದ ಬೆಂಗಳೂರಿನತ್ತ ಹೊರಟಿದ್ದ ಕಂಟೈನರ್ ಸಕಾಲಕ್ಕೆ ಬೆಂಗಳೂರಿಗೆ ತಲುಪಲಿಲ್ಲ.

ಇದನ್ನೂ ಓದಿ: ಎಸಿ ಕಚೇರಿ ಪಿಠೋಪಕರಣಗಳನ್ನ ಹೊತ್ತೊಯ್ದ ದೂರುದಾರರು: ಬೆಪ್ಪರಾಗಿ ನಿಂತ ಎಸಿ!

ಹಾಗಾಗಿ ಅನುಮಾನಗೊಂಡ ಕಂಪನಿಯ ಅಧಿಕಾರಿಗಳು ಕಂಟೈನರ್ ಜಿ.ಪಿ.ಎಸ್ ಪರಿಶೀಲನೆ ನಡೆಸಿದಾಗ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ಕಂಟೈನರ್​ ನಿಂತಿದ್ದು ಗೊತ್ತಾಗಿದೆ. ಕಂಟೈನರ್ ಪರಿಶೀಲನೆ ನಡೆಸಿದಾಗ ಅದರಲ್ಲಿದ್ದ 3 ಕೋಟಿ ರೂ. ಮೌಲ್ಯದ ಮೊಬೈಲ್​ಗಳು ಕಾಣೆಯಾಗಿದ್ದು, ಕಂಟೈನರ್ ಚಾಲಕನೂ ನಾಪತ್ತೆಯಾಗಿದ್ದಾನೆ.

ಚಾಲಕ ನಾಪತ್ತೆ

ಸೇಪ್ ಸ್ಪೀಡ್ ಕ್ಯಾರಿಯರ್ಸ್ ಪ್ರೈ. ಲಿಮಿಟೆಡ್ ಕಂಪನಿ ಶಿಯೋಮಿ ಕಂಪನಿಗೆ ಸೇರಿದ ಮೊಬೈಲ್​ಗಳನ್ನು ಸಾಗಾಟ ಹೊಣೆ ಹೊತ್ತಿತ್ತು. ಇದೇ ಕಂಪನಿಯಲ್ಲಿ ರಾಹುಲ್​ ಎಂಬಾತ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಲಾರಿ ಪತ್ತೆಯಾದರು ಚಾಲಕ ನಾಪತ್ತೆಯಾಗಿದ್ದು, ಸದ್ಯ ಪೊಲೀಸರು ಚಾಲಕನ ಜಾಡು ಹಿಡಿದು ತನಿಖೆ ಆರಂಭಿಸಿದ್ದಾರೆ.

ಬೈಕ್​ಗೆ ಟ್ರ್ಯಾಕ್ಟರ್ ಡಿಕ್ಕಿ:  ನರ್ಸಿಂಗ್​ ವಿದ್ಯಾರ್ಥಿ ಸ್ಥಿತಿ ಗಂಭೀರ

ಆರೂರು ಬಳಿ ಇರುವ ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಕ್ಯಾಂಪಸ್ ಬಳಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ನರ್ಸಿಂಗ್​ ವಿದ್ಯಾರ್ಥಿಗೆ ಗಂಭೀರ ಗಾಯವಾಗಿರುವಂತಹ ಘಟನೆ ನಡೆದಿದೆ. ಗುಡಿಬಂಡೆ ಮೂಲದ ವಿದ್ಯಾರ್ಥಿ ಮಧುಸೂದನ್(22) ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ: ಅರ್ಕಾವತಿ ನದಿ ನೀರಿನಲ್ಲಿ ಕ್ಯಾನ್ಸರ್ ಕಾರಕ ಮಾರಕ ರಾಸಾಯನಿಕ, ಡಿಡಿಟಿ ಪತ್ತೆ: ಸಂಶೋಧನಾ ವರದಿ

ಗಾಯಾಳು ವಿದ್ಯಾರ್ಥಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:23 pm, Fri, 29 November 24

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್