AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋದರಸಂಬಂಧಿಯನ್ನೇ ವರಿಸಿದ ಯುವತಿ! ಚಿಕ್ಕಬಳ್ಳಾಪುರದಲ್ಲೊಂದು ವಿಚಿತ್ರ ವಿವಾಹ

ದೇವನಹಳ್ಳಿಯ ಯುವತಿಯೊಬ್ಬಳು ತಾಯಿಯ ತಂಗಿಯ ಮಗನನ್ನೇ (ವರಸೆಯಲ್ಲಿ ತಮ್ಮ) ಪ್ರೀತಿಸಿ ಮದುವೆಯಾಗಿರುವ ವಿಚಿತ್ರ ವಿದ್ಯಮಾನ ಬೆಳಕಿಗೆ ಬಂದಿದೆ. ಮೇ 29ಕ್ಕೆ ಬೇರೊಬ್ಬನೊಂದಿಗೆ ನಡೆಯಬೇಕಿದ್ದ ಮದುವೆಯನ್ನು ನಿರಾಕರಿಸಿ, ಸೋದರಸಂಬಂಧಿಯನ್ನೇ ವರಿಸಿದ್ದಾಳೆ. ಸದ್ಯ ಈ ನವ ಜೋಡಿ ರಕ್ಷಣೆ ಕೋರಿ ಚಿಕ್ಕಬಳ್ಳಾಪುರ ಪೊಲೀಸರ ಮೊರೆ ಹೋಗಿದೆ.

ಸೋದರಸಂಬಂಧಿಯನ್ನೇ ವರಿಸಿದ ಯುವತಿ! ಚಿಕ್ಕಬಳ್ಳಾಪುರದಲ್ಲೊಂದು ವಿಚಿತ್ರ ವಿವಾಹ
ಸಾಂದರ್ಭಿಕ ಚಿತ್ರImage Credit source: istockphoto.com
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:May 07, 2026 | 1:13 PM

Share

ಚಿಕ್ಕಬಳ್ಳಾಪುರ, ಮೇ 7: ಪ್ರೀತಿ ಕುರುಡು ಎಂಬ ಮಾತಿಗೆ ಸಾಕ್ಷಿಯೆಂಬಂತೆ, ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಾದವರೇ ಪ್ರೀತಿಸಿ ಮದುವೆಯಾಗಿ ಪೋಷಕರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೇವನಹಳ್ಳಿ (Devanahalli) ತಾಲ್ಲೂಕಿನ ಸಾವಕನಹಳ್ಳಿಯ ಶಶಿಕಲಾ (29), ಹೊಸಕೋಟೆ ತಾಲ್ಲೂಕಿನ ಹಳೆಊರಿನ ಪ್ರವೀಣ್ (24) ಎಂಬಾತನನ್ನು ಮದುವೆಯಾಗುವ ಮೂಲಕ ಸಮಾಜ ಮತ್ತು ಕುಟುಂಬದ ವಿರೋಧದ ನಡುವೆಯೂ ಒಂದಾಗಿದ್ದಾರೆ. ಅಷ್ಟೇ ಅಲ್ಲದೆ, ತಮಗೆ ರಕ್ಷಣೆ ನೀಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

ಮುಖ್ಯಾಂಶಗಳು

  • ಶಶಿಕಲಾ ಮತ್ತು ಪ್ರವೀಣ್ ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದರು.
  • ಮೇ 29 ರಂದು ಶಶಿಕಲಾಗೆ ಬೇರೊಬ್ಬ ಯುವಕನೊಂದಿಗೆ ಮದುವೆ ನಿಗದಿಯಾಗಿತ್ತು.
  • ಶಶಿಕಲಾ ತಾಯಿಯ ತಂಗಿಯ ಮಗ ಪ್ರವೀಣ್​ನನ್ನೇ ಮದುವೆಯಾಗಿದ್ದಾಳೆ.

ಪೋಷಕರ ವಿರೋಧದ ನಡುವೆ ಮದುವೆ

ಶಶಿಕಲಾ ಮತ್ತು ಪ್ರವೀಣ್ ಸಂಬಂಧಿಕರಾಗಿದ್ದು, ಶಶಿಕಲಾಳ ತಾಯಿಯ ತಂಗಿಯ ಮಗನೇ ಪ್ರವೀಣ್. ಅಂದರೆ, ವರಸೆಯಲ್ಲಿ ಇವರಿಬ್ಬರು ಅಕ್ಕ-ತಮ್ಮನಾಗಬೇಕು. ಇವರ ಪ್ರೀತಿಯ ವಿಷಯ ತಿಳಿದ ಪೋಷಕರು, ಈ ಸಂಬಂಧ ಸಮಾಜದಲ್ಲಿ ಒಪ್ಪಿತವಲ್ಲ ಎಂದು ವಿರೋಧಿಸಿದ್ದರು. ಅಲ್ಲದೆ, ಶಶಿಕಲಾಗೆ ಬೇರೊಬ್ಬ ಹುಡುಗನೊಂದಿಗೆ ನಿಶ್ಚಿತಾರ್ಥ ನಡೆಸಿ ಇದೇ ಮೇ 29ಕ್ಕೆ ಮದುವೆ ದಿನಾಂಕವನ್ನೂ ನಿಗದಿಪಡಿಸಿದ್ದರು. ಆದರೆ ಮದುವೆಗೆ ಕೆಲವೇ ದಿನ ಬಾಕಿ ಇರುವಾಗ ಶಶಿಕಲಾ ಮನೆಯಿಂದ ಹೊರಬಂದು ಪ್ರವೀಣ್‌ನನ್ನು ಮದುವೆಯಾಗಿದ್ದಾಳೆ.

ಪೊಲೀಸ್ ರಕ್ಷಣೆ ಕೋರಿದ ನವಜೋಡಿ

ಮದುವೆಯಾದ ಬಳಿಕ ಈ ಜೋಡಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ ಧಾವಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ‘ನಾವು ಪರಸ್ಪರ ಇಷ್ಟಪಟ್ಟು ಮದುವೆಯಾಗಿದ್ದೇವೆ, ನಮ್ಮನ್ನು ನಮ್ಮ ಪಾಡಿಗೆ ಬದುಕಲು ಬಿಡಿ’ ಎಂದು ಶಶಿಕಲಾ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ. ಇತ್ತ ಪೋಷಕರು ‘ವರಸೆಯಲ್ಲಿ ತಮ್ಮನಾಗುವವನನ್ನೇ ಮದುವೆಯಾಗಿ ಇಡೀ ಕುಟುಂಬಕ್ಕೆ ಅವಮಾನ ತಂದಿದ್ದೀಯಾ’ ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಚಿತ್ರ ಮದುವೆ ಪ್ರಕರಣ ಸ್ಥಳೀಯವಾಗಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಹೊಸಕೋಟೆ ಪೊಲೀಸರ ಭರ್ಜರಿ ಬೇಟೆ: 50 ಬೈಕ್ ಸಮೇತ ಇಬ್ಬರು ಅಂತರರಾಜ್ಯ ಕಳ್ಳರ ಬಂಧನ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Thu, 7 May 26

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!