Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮ ವಿವಾಹ

ಪ್ರೀತಿ ಕುರುಡು ಎನ್ನುವ ಹಾಗೆ ಜಾತಿ, ಧರ್ಮ, ಸಾಮಾಜಿಕ ಹಾಗೂ ಧಾರ್ಮಿಕ ಕಟ್ಟಲೆಗಳನ್ನು ಮೀರಿದ ಜೋಡಿಯೊಂದು ಪ್ರೇಮ ವಿವಾಹವಾಗಿತ್ತು. ಎದುರು ಬದುರು ಮನೆಯ ಮಸ್ಲಿಂ ಯುವತಿ ಹಾಗೂ ಹಿಂದೂ ಯುವಕ ತಮ್ಮ-ತಮ್ಮ ಧರ್ಮ, ಜಾತಿಗೆ ತಿಲಾಂಜಲಿ ಇಟ್ಟು ಪೋಷಕರ ವಿರೋಧದ ನಡುವೆಯೇ ಸಪ್ತಪದಿ ತುಳಿದಿತ್ತು. ಆದ್ರೆ, ಈ ಪ್ರೇಮ ವಿವಾಹ ಎರಡೇ ವಾರಕ್ಕೆ ಮುರಿದು ಬಿದ್ದಿದೆ. ಯವಕನನ್ನು ನಡು ನೀರಿನಲ್ಲೇ ಬಿಟ್ಟು ಯುವತಿ ಹೋಗಿದ್ದಾಳೆ.

ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮ ವಿವಾಹ
ಫಸಿಯಾ ಹಾಗೂ ನಾಗಾರ್ಜುನ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ರಮೇಶ್ ಬಿ. ಜವಳಗೇರಾ

Updated on: Apr 07, 2025 | 6:02 PM

ಚಿಕ್ಕಬಳ್ಳಾಪುರ, (ಏಪ್ರಿಲ್ 07): ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪ್ರೇಮ ವಿವಾಹ (Love Marriage) ಎರಡೇ ವಾರಕ್ಕೆ ಮುರಿದುಬಿದ್ದಿದೆ. ಎದುರು ಬದುರು ಮನೆಯವರಾಗಿದ್ದ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮೈಲಪನಹಳ್ಳಿ ಗ್ರಾಮದ ಫಸಿಯಾ ಹಾಗೂ ನಾಗಾರ್ಜುನ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಇಬ್ಬರ ಮದ್ವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಜೋಡಿ ಮನೆಬಿಟ್ಟು ಹೋಗಿ ಪ್ರೇಮ ವಿವಾಹವಾಗಿತ್ತು. ಆದ್ರೆ, ಇದೀಗ 15 ದಿನದಲ್ಲೇ ಈ ಪ್ರೇಮ ವಿವಾಹ ಅಂತ್ಯಕಂಡಿದೆ. ತಾಯಿಗೆ ಅನಾರೋಗ್ಯದ ಕಾರಣ ನೀಡಿ ಫಸಿಯಾ, ನಾಗಾರ್ಜುನನನ್ನು ಸಂಸಾರ ಎನ್ನುವ ಸಾಗರದ ನಡು ನೀರಿನಲ್ಲೇ ಬಿಟ್ಟು ತವರಿಗೆ ವಾಪಸ್​​ ಹೋಗಿದ್ದಾಳೆ. ಇದರಿಂದ ಫಸಿಯಾಳನ್ನು ನಂಬಿ ಹೋಗಿದ್ದ ನಾಗಾರ್ಜುನ ಈಗ ಕಂಗಾಲಾಗಿದ್ದಾನೆ.

ಮಾರ್ಚ್ 24ರಂದು ಪ್ರೇಮ ವಿವಾಹವಾಗಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ರು. ಆದ್ರೆ, ಇದೀಗ ಮದುವೆಯಾಗಿ 15 ದಿನ ಕಳೆಯೋದರೊಳಗೆ ಯುವತಿ ಫಸಿಹಾ ತಾಯಿ ಮನೆ ಸೇರಿಕೊಂಡಿದ್ದಾಳೆ. ತಾಯಿಗೆ ಅನಾರೋಗ್ಯ ಇದೆ. ನನ್ನ ನೋವಲ್ಲೇ ಕೊರಗಿ ನೋವಿನಲ್ಲಿದ್ದಾರೆ ಎನ್ನುವ ಕಾರಣ ನೀಡಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಮುಚ್ಚಳಿಕೆ ಬರೆದುಕೊಟ್ಟು ತಾಯಿ ಮನೆ ವಾಪಸ್ ಹೋಗಿದ್ದಾಳೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಸಪ್ತಪದಿ ತುಳಿದ ಎದುರು ಬದುರು ಮನೆಯ ಹಿಂದೂ-ಮುಸ್ಲಿಂ ಜೋಡಿ!

ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದ 23 ವರ್ಷದ ಫಸಿಹಾ ಹಾಗೂ ಇದೇ ಗ್ರಾಮದ 25 ವರ್ಷದ ನಾಗಾರ್ಜುನ ಇಬ್ಬರು ಪರಸ್ಪರ 2 ವರ್ಷಗಳಿಂದ ಪ್ರೀತಿ ಮಾಡಿ ಕಳೆದ ತಿಂಗಳು ಮಾರ್ಚ್ 23 ರಂದು ಪ್ರೇಮವಿವಾಹವಾಗಿದ್ದರು. ಪ್ರೇಮ ವಿವಾಹಕ್ಕೆ ಯುವಕನ ಮನೆಯಲ್ಲಿ ಒಪ್ಪಿಗೆ ಇದ್ರೂ ಯುವತಿ ಮನೆಯಲ್ಲಿ ಒಪ್ಪಿಗೆ ಇರಲಿಲ್ಲ. ಹೀಗಾಗಿ ಮನೆ ಬಿಟ್ಟುಬಂದು ಮದುವೆಯಾಗಿ ಬಳಿಕ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್​ ಠಾಣೆಗೆ ತೆರಳಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ
Image
ಚಿಕ್ಕಬಳ್ಳಾಪುರ: ಸಪ್ತಪದಿ ತುಳಿದ ಎದುರು ಬದುರು ಮನೆಯ ಹಿಂದೂ-ಮುಸ್ಲಿಂ ಜೋಡಿ
Image
19ರ ಯುವತಿ ಹಿಂದೆ ಬಿದ್ದ 47ರ ವ್ಯಕ್ತಿ: ಕಿರುಕುಳಕ್ಕೆ ವಿದ್ಯಾರ್ಥಿನಿ ಬಲಿ!
Image
ಇನ್ಸ್ಟಾಗ್ರಾಮ್ ಸುಂದ್ರಿ ಜತೆ ಹೋಗಿದ್ದವ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
Image
50 ವರ್ಷದ ಅಂಕಲ್​ನ ಮದ್ವೆಯಾದ 18 ವರ್ಷದ ಯುವತಿ!

ಆಗ ಪೊಲೀಸರು ಎರಡೂ ಕಡೆಯ ಪೋಷಕರನ್ನ ಕರೆಸಿ ವಿಚಾರಣೆ ಮಾಡಿದ್ದರು. ಯುವತಿಯನ್ನ ಸಹ ಅವರ ಪೋಷಕರ ಜೊತೆ ಮಾತನಾಡಲು ಅವಕಾಶ ನೀಡಲಾಗಿತ್ತು. ಆ ವೇಳೆ ಪೋಷಕರು ಎಷ್ಟು ಬೇಡಿಕೊಂಡಿದ್ದರೂ ಸಹ ಯುವತಿ ಮಾತ್ರ ತಾನು ಮದುವೆಯಾದ ಯುವಕನ ಜೊತೆಯಲ್ಲೇ ಹೋಗುವುದಾಗಿ ಕಡ್ಡಿಮುರಿದಂತೆ ಹೇಳಿದ್ದಳು. ಆದ್ರೆ, ಇದೀಗ ಯುವತಿ, ಯುವಕನನ್ನು ನಡು ನೀರಿನಲ್ಲೇ ಕೈಕೊಟ್ಟು ಹೋಗಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್