Chikkaballapura: ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳರನ್ನ ಬಂಧಿಸಿದ ಪೊಲೀಸರು

ಕುರಿ, ಕೋಳಿ, ದನ ಕರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಅಂತರರಾಜ್ಯ ಕಳ್ಳರನ್ನು ಇದೀಗ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರ

Chikkaballapura: ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳರನ್ನ ಬಂಧಿಸಿದ ಪೊಲೀಸರು
ಚಿಕ್ಕಬಳ್ಳಾಪುರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 11, 2022 | 2:23 PM

ಚಿಕ್ಕಬಳ್ಳಾಪುರ: ಅಂತರರಾಜ್ಯ ಕುರಿ, ಕೋಳಿ, ಮೇಕೆ, ದನಗಳ್ಳರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಒಳ್ಳೋಳ್ಳೆ ಕಾರುಗಳಲ್ಲಿ ಬಂದು ಹಗಲು ಸ್ಕೇಚ್ ಹಾಕಿ, ರಾತ್ರಿಯಾದರೆ ಸಾಕು ರೈತರ ಕುರಿ ಮೇಕೆ ಹಸುಗಳನ್ನು ಕದ್ದು ಪರಾರಿಯಾಗುತ್ತಿದ್ದ ಹೊಸಕೋಟೆ ತಾಲೂಕಿನ ಬೈಲನರಸಾಪುರ ಗ್ರಾಮದ ಪೈರೋಜ್ ಹಾಗೂ ತಮಿಳುನಾಡಿನ ಸತೀಶ್ ಎಂಬುವವರನ್ನ ಈಗಾಗಲೇ ಬಂಧಿಸಲಾಗಿದ್ದು, ಬಂಧಿತರಿಂದ 17 ಕುರಿಗಳು, 4 ಲಕ್ಷ37 ಸಾವಿರ ನಗದು ಸೇರಿದಂತೆ ಕುರಿಗಳ ಕಳ್ಳತನಕ್ಕೆ ಬಳಸುತ್ತಿದ್ದ ಎರಡು ಸ್ಯಾಂಟ್ರೋ ಕಾರುಗಳನ್ನು ಜಪ್ತಿ ಮಾಡಲಾಗಿದೆ.

ಆಕ್ಟೋಬರ್ 19 ರಂದು ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಡ್ಲಚಿಂತೆ ಗ್ರಾಮದಲ್ಲಿ ರೈತ ವೆಂಕಟರಾಯಪ್ಪ ಹಾಗೂ ಶ್ರೀನಿವಾಸ್ ಎಂಬುವವರಿಗೆ ಸೇರಿದ 24 ಕುರಿಗಳನ್ನ ಕಳವು ಮಾಡಲಾಗಿತ್ತು. ಈ ಸಂಬಂಧ ರೈತ ಶ್ರೀನಿವಾಸ್ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡ ಶಿಡ್ಲಘಟ್ಟ ತಾಲೂಕಿನ ಪೊಲೀಸರು, ಶಿಡ್ಲಘಟ್ಟ ವೃತ್ತ ನೀರಿಕ್ಷಕ ನಂದಕುಮಾರ್ ನೇತೃತ್ವದಲ್ಲಿ ಇಬ್ಬರು ಕುಖ್ಯಾತ ದನಗಳ್ಳರನ್ನು ಬಂಧಿಸಿದ್ದು, ನೆರೆಯ ದೊಡ್ಡಬಳ್ಳಾಪುರ, ಹೊಸಕೋಟೆ, ಚೇಳೂರು, ಕೆಂಚಾರ್ಲಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲೂ ಸಹ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಕುಖ್ಯಾತ ಮೊಬೈಲ್ ಫೋನ್ ಕಳ್ಳರ ಬಂಧನ, ಪೊಲೀಸ್ ವಶಕ್ಕೆ ರೂ. 30 ಲಕ್ಷ ಮೌಲ್ಯದ ಫೋನ್​ಗಳು!

ಇನ್ನು ಆರೋಪಿಗಳು ಕದ್ದ ಕುರಿ, ಮೇಕೆ, ಜಾನುವಾರುಗಳನ್ನು ಕಸಾಯಿ ಖಾನೆ ಸೇರಿದಂತೆ ಸಂತೆಗಳಲ್ಲಿ ಮಾರಾಟ ಮಾಡುತ್ತಿದ್ದರಂತೆ. ಬಂದ ಹಣದಲ್ಲಿ ಮೋಜು ಮಸ್ತಿ ಮಾಡುವುದನ್ನೆ ಕಾಯಕ ಮಾಡಿಕೊಂಡಿದ್ದರು. ಇದರಿಂದ ಪೊಲೀಸರು ಹಾಗೂ ರೈತರಿಗೆ ತಲೆ ನೋವಾಗಿತ್ತು. ಕಳ್ಳರ ಸಮೇತ ಕದ್ದ ಕುರಿಗಳನ್ನು ಪೊಲೀಸ್ ಠಾಣೆಯಲ್ಲಿ ನಡೆದ ಸುದ್ದಿಗೋಷ್ಟಿಗೆ ಕರೆ ತಂದಿದ್ದು ವಿಶೇಷವಾಗಿತ್ತು. ಇದರಿಂದ ಚಿಂತಾಮಣಿ ಉಪವಿಭಾಗದ ಎಎಸ್ಪಿ ಕುಶಾಲ್ ಚೋಕ್ಸಿ ಕಾರ್ಯಾಚರಣೆಯಲ್ಲಿ ಬಾಗಿಯಾಗಿದ್ದ ಪೊಲೀಸ್ ಸಿಬ್ಬಂದಿಗೆ ನಗದು ಬಹುಮಾನ ವಿತರಿಸಿ ಅಭಿನಂದನೆ ಸಲ್ಲಿಸಿದರು.

ವರದಿ: ಭೀಮಪ್ಪ ಪಾಟೀಲ ಟಿವಿ9 ಚಿಕ್ಕಬಳ್ಳಾಪುರ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್