ಒಕ್ಕಲಿಗ, ಲಿಂಗಾಯತ ಸಮುದಾಯಕ್ಕೆ ಮೀಸಲಾತಿಗೆ ತಂದ ತಡೆಯಾಜ್ಞೆ ಕೆಲವೇ ದಿನಗಳಲ್ಲಿ ತೆರವು: ಸುಧಾಕರ್

ಸುಧಾಕರ್‌ ಬುದ್ಧಿವಂತ, ವಿದ್ಯಾವಂತ ವಿನೂತನ ಶೈಲಿಯಲ್ಲಿ ಕೆಲಸ ಮಾಡುತ್ತಾರೆ. ಇವರು ಮತ್ತಷ್ಟು ಎತ್ತರಕ್ಕೆ ಬೆಳೆದು ಕೀರ್ತಿ ತರಲಿ ಎಂದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸುವ ಕಾರ್ಯಕ್ರಮದಲ್ಲಿ ಶ್ರೀಗಳು ಸಚಿವರ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದರು.

ಒಕ್ಕಲಿಗ, ಲಿಂಗಾಯತ ಸಮುದಾಯಕ್ಕೆ ಮೀಸಲಾತಿಗೆ ತಂದ ತಡೆಯಾಜ್ಞೆ ಕೆಲವೇ ದಿನಗಳಲ್ಲಿ ತೆರವು: ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್
Follow us
Rakesh Nayak Manchi
|

Updated on:Mar 15, 2023 | 5:26 PM

ಚಿಕ್ಕಬಳ್ಳಾಪುರ: ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ವಿರೋಧಿಸಿ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಆದರೆ ಈ ತಡೆಯಾಜ್ಞೆ ಕೆಲವೇ ದಿನಗಳಲ್ಲಿ ತೆರವು ಆಗಲಿದೆ. ಈ ಸಂಬಂಧ ಸರ್ಕಾರ ಕಾನೂನು ತಜ್ಞರ ಅಭಿಪ್ರಾಯ ಪಡೆದಿದೆ. ಮೀಸಲಾತಿ ಕುರಿತು ಯಾವುದೇ ಆತಂಕ ಬೇಡ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Dr. K. Sudhakar) ಭರವಸೆ ನೀಡಿದರು. ಜಿಲ್ಲೆಯಲ್ಲಿ ನಿರ್ಮಿಸಲಾದ 14 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿ (Kempegowda statue unveiled At Chikkaballapura) ಮಾತನಾಡಿದ ಅವರು, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾದ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ (Dr. Nirmalanandanatha Swamiji) ಮುಖ್ಯಮಂತ್ರಿಗಳು, ಮಂತ್ರಿಗಳಿಗಿಂತ ಬ್ಯೂಜಿ. ಇವರು ಅತ್ಯಂತ ಕ್ರೀಯಾಶೀಲ ಸಮಾಜಮುಖಿ ಸ್ವಾಮೀಜಿಯಾಗಿದ್ದಾರೆ. ರಾಜ್ಯ ದೇಶ ವಿದೇಶಗಳಲ್ಲಿಯೂ ಮಠದ ಬೆಳವಣಿಗೆ ಮಾಡಿದ್ದಾರೆ. ದೇಶ ವಿದೇಶದಲ್ಲಿಯೂ ಶೈಕ್ಷಣಿಕ ಕ್ರಾಂತಿ ಮಾಡುತ್ತಿದ್ದಾರೆ ಎಂದು ಬಣ್ಣಿಸಿದರು.

ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದ ಬಳಿ ಒಕ್ಕಲಿಗರ ಸಂಘದಿಂದ ಸ್ಥಾಪಿಸಲಾದ ಕೋಟೆ ಸಹಿತ 14 ಅಡಿಗಳ ಎತ್ತರದ ಕೆಂಪೇಗೌಡರ ಪ್ರತಿಮೆಯನ್ನು ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಅನಾವರಣಗೊಳಿಸಿದರು. 2750 ಕೆ.ಜಿ ಕಂಚಿನ ಪ್ರತಿಮೆ ಇದಾಗಿದ್ದು, 14 ಅಡಿ ಎತ್ತರ, 16 ಅಡಿ ಉದ್ದ, 4 ಅಡಿ ಅಗಲದ ಹೊಂದಿದೆ.

ಇದನ್ನೂ ಓದಿ: ಚಿಂತಾಮಣಿ ರಾಮ ರಾಜ್ಯವಾಗಲು ಬಿಜೆಪಿ ಗೆಲ್ಲಬೇಕು: ಸಚಿವ ಸುಧಾಕರ್

ಸುಧಾಕರ್‌ ಬುದ್ಧಿವಂತ, ವಿನೂತನ ಶೈಲಿಯ ಕೆಲಸಗಾರ: ಡಾ.ನಿರ್ಮಲಾನಂದನಾಥ ಶ್ರೀ

ಸಚಿವ ಸುಧಾಕರ್‌ ಬುದ್ಧಿವಂತ, ವಿದ್ಯಾವಂತ ಆಗಿದ್ದು, ವಿನೂತನ ಶೈಲಿಯಲ್ಲಿ ಕೆಲಸ ಮಾಡುತ್ತಾರೆ ಎಂದು ಡಾ. ನಿರ್ಮಲಾನಂದನಾಥ ಶ್ರೀಗಳು ಪ್ರಶಂಸಿದರು. ಆರೋಗ್ಯ ಸಚಿವ ಸುಧಾಕರ್‌ ಅವರಿಗೆ ಇನ್ನೂ ಎತ್ತರಕ್ಕೆ ಬೆಳೆಯುವ ಸಾಮರ್ಥ್ಯವಿದೆ. ಎತ್ತರಕ್ಕೆ ಬೆಳೆದು ಕೀರ್ತಿ ತರಲಿ ಎಂದು ಆಶಿರ್ವಾದ ಮಾಡಿದರು.

ಒಕ್ಕಲಿಗರ ಸಂಘ ಇರುವುದೇ ಸಮುದಾಯದ ಅಭಿವೃದ್ಧಿಗಾಗಿ. ಒಕ್ಕಲಿಗ ಸಮುದಾಯ ಹಾಗೂ ಸಂಘಟನೆಯ ದಿಕ್ಕು ತಪ್ಪಿಸಬೇಡಿ. ಒಕ್ಕಲಿಗ ಸಮುದಾಯದಲ್ಲಿ ಸಾಕಷ್ಟು ಬಡವರು ಇದ್ದಾರೆ. ಇವರಿಗೆ ನ್ಯಾಯ ದೊರಕಿಸಬೇಕಿದೆ. ಸಮುದಾಯದ ಬಡ ಮಕ್ಕಳಿಗೆ ಮೀಸಲಾತಿ ದೊರೆಯಬೇಕಿದೆ. ಒಕ್ಕಲಿಗರಿಗೆ ಮೀಸಲಾತಿ ದೊರೆಯಲು ಡಾ.ಸುಧಾಕರ್ ಶ್ರಮಿಸಿದ್ದಾರೆ ಎಂದು ಶ್ರೀಗಳು ಹೇಳಿದರು.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Wed, 15 March 23

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ