AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಹಳೆಯ ದ್ವೇಷಕ್ಕೆ ಇಡೀ ಕುಟುಂಬಕ್ಕೆ ವಿಷ ಹಾಕಿದ ಪಾಪಿರೆಡ್ಡಿ; ಮೂವರ ಸ್ಥೀತಿ ಗಂಭೀರ

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ಹಳೆಯ ದ್ವೇಷದ ಕಾರಣ ಒಂದೇ ಕುಟುಂಬದ 8 ಮಂದಿಗೆ ವಿಷ ನೀಡಲಾಗಿದ್ದು, ಕುಟುಂಬಸ್ಥರು ಅಸ್ವಸ್ಥಗೊಂಡಿದ್ದಾರೆ. ಸಾಂಬಾರಿಗೆ ವಿಷ ಬೆರೆಸಿ ಈ ಕೃತ್ಯ ಎಸಗಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರೆದಿದೆ.

ಚಿಕ್ಕಬಳ್ಳಾಪುರ: ಹಳೆಯ ದ್ವೇಷಕ್ಕೆ ಇಡೀ ಕುಟುಂಬಕ್ಕೆ ವಿಷ ಹಾಕಿದ ಪಾಪಿರೆಡ್ಡಿ; ಮೂವರ ಸ್ಥೀತಿ ಗಂಭೀರ
ಚಿಕ್ಕಬಳ್ಳಾಪುರದಲ್ಲಿ ಹಳೆಯ ದ್ವೇಷಕ್ಕೆ ಇಡೀ ಕುಟುಂಬಕ್ಕೆ ವಿಷ , 8 ಮಂದಿ ಅಸ್ವಸ್ಥ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Nov 15, 2025 | 11:11 AM

Share

ಚಿಕ್ಕಬಳ್ಳಾಪುರ, ನವೆಂಬರ್ 15: ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಬಾಗೇಪಲ್ಲಿ(ಭಾಗ್ಯನಗರ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ಒಂದೇ ಕುಟುಂಬದ 8 ಜನ ವಿಷ ಸೇವಿಸಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೆಂದು ಕೇಳಿಬಂದಿದ್ದು, ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂಬಾರಿಗೆ ವಿಷ ಬೆರೆಸಿದ್ದ ಪಾಪಿ

ದೇವಿರೆಡ್ಡಿಪಲ್ಲಿಯ ಮದ್ದರೆಡ್ಡಿ ಮತ್ತು ಪಾಪಿರೆಡ್ಡಿ ಎಂಬುವವರು ಅಕ್ಕಪಕ್ಕದ ಮನೆಯವರಾಗಿದ್ದು, ಎರಡು ವರ್ಷಗಳ ಹಿಂದೆ ಇಬ್ಬರ ಮನೆಗಳ ನಡುವಿನ ಮೂರಡಿ ಖಾಲಿ ಜಾಗದ ಸಲುವಾಗಿ ಜಗಳವಾಗಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ ಚೌಡರೆಡ್ಡಿ ಎಂಬಾತನಿಗೆ ಸುಪಾರಿ ಕೊಟ್ಟ ಪಾಪಿರೆಡ್ಡಿ ಕುಟುಂಬದವರ ಆಹಾರದಲ್ಲಿ ವಿಷ ಬೆರೆಸುವಂತೆ ಹೇಳಿದ್ದ. ಅಂತೆಯೇ ಮದ್ದರೆಡ್ಡಿಯ ಅಡುಗೆ ಮನೆಗೆ ನೀರು ಕುಡಿಯುವ ನೆಪದಲ್ಲಿ ತೆರಳಿದ್ದ ಚೌಡರೆಡ್ಡಿ, ಸಾಂಬಾರಿಗೆ ವಿಷದ ಪೌಡರ್ ಬರೆಸಿದ್ದ.

ವಿಷ ಸೇವಿಸಿದ ಮೂವರ ಸ್ಥಿತಿ ಚಿಂತಾಜನಕ

ಇದನ್ನರಿಯದ ಕುಟುಂಬಸ್ಥರು ಎಂದಿನಂತೆ ಊಟ ಮಾಡಿದ್ದು, ಮನೆ ಯಜಮಾನಿ ಮದ್ದಕ್ಕ ಹಾಗೂ ಇವರ ಇಬ್ಬರು ಮಕ್ಕಳಾದ ಮದ್ದರೆಡ್ಡಿ ಹಾಗೂ ಮಂಜುನಾಥ್ ಸೇರಿದಂತೆ ಮದ್ದರೆಡ್ಡಿ ಪತ್ನಿ ಭಾಗ್ಯಮ್ಮ, ಮಗಳು ಮಣಿ, ಮಂಜುನಾಥ್ ಪತ್ನಿ ಈಶ್ವರಮ್ಮ, ಮಂಜುನಾಥ್ ನ ಮಗ ಸುಬ್ರಮಣಿ, ಹಾಗೂ ಸಂಬಂಧಿ ಬಾಲಕಿ ಭಾನುಶ್ರೀ ಈ ಎಂಟೂ ಜನ ಅಸ್ವಸ್ಥರಾಗಿದ್ದಾರೆ.

ಈ 8 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸದ್ಯಕ್ಕೆ ಮಂಜುನಾಥ್ ಹಾಗೂ ಮದ್ದರೆಡ್ಡಿ ಸೇರಿದಂತೆ ಸುಬ್ರಮಣಿ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿರಿಸಲಾಗಿದೆ. ಉಳಿದ 5 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರೂ ದೇಹದೊಳಗೆ ವಿಷ ಸೇರಿರುವುದರಿಂದ ಯಾವಾಗ ಏನಾಗುತ್ತದೆಂದು ಹೇಳಲಾಗುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಈ ಹಿನ್ನೆಲೆ ಎಸ್ಪಿ ಕುಶಲ್ ಚೌಕ್ಸೆ ಸೇರಿದಂತೆ ಬಾಗೇಪಲ್ಲಿ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಪ್ರಮುಖ ಆರೋಪಿಗಳಾದ ಪಾಪಿರೆಡ್ಡಿ ಹಾಗೂ ಚೌಡರೆಡ್ಡಿಯನ್ನು ಬಂಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ