
ಚಿಕ್ಕಬಳ್ಳಾಪುರ, ಅಕ್ಟೋಬರ್ 03: ದಸರಾ (Dasara) ರಜೆ ಇದ್ದ ಕಾರಣ ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರುಪಾಲಾಗಿರುವಂತ (death) ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಗ್ರಾಮದ ನಡೆದಿದೆ. ವಿಷ್ಣು(14), ನಿಹಾಲ್ ರಾಜ್(12) ಮತ್ತು ಹರ್ಷವರ್ಧನ್(16) ಮೃತ ಬಾಲಕರು. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ದಸರಾ ರಜೆ ಇದ್ದ ಕಾರಣ ಕೆರೆಗೆ ಈಜಲು ವಿದ್ಯಾರ್ಥಿಗಳು ತೆರಳಿದ್ದಾರೆ. ಮೂವರ ಪೈಕಿ ಇಬ್ಬರು ಕೆರೆಯಲ್ಲಿ ಈಜಲು ಹೋಗಿದ್ದು, ಈಜಲು ಬಾರದ್ದರಿಂದ ಮುಳುಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರನ್ನು ರಕ್ಷಿಸಲು ಹೋದ ಹರ್ಷವರ್ಧನ್ ಕೂಡ ಮೃತಪಟ್ಟಿದ್ದಾನೆ.
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿರುವ ಓಂ ಬೀಚ್ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಸಮುದ್ರಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಶಿವಮೊಗ್ಗದ ಅಸ್ಲಾಮ್(45) ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ವ್ಯಕ್ತಿ.
ಇದನ್ನೂ ಓದಿ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ಮಹಿಳೆ ಸಾವು, 6 ಜನರಿಗೆ ಗಾಯ
ಶಿವಮೊಗ್ಗದಿಂದ 10 ಜನ ಸ್ನೇಹಿತರ ಜೊತೆಗೆ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದಾಗ ದುರಂತ ಸಂಭವಿಸಿದ್ದು, ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಮೃತದೇಹವನ್ನು ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.
ಎಲ್ಪಿಜಿ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ತಾಯಿ ಮತ್ತು ಮಗ ಸಾವನ್ನಪ್ಪಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ನಡೆದಿದೆ. ವಕೀಲ ಹಾಲಪ್ಪ(43), ತಾಯಿ ಗಂಗಮ್ಮ(80) ಮೃತರು.
ಸೆ.27ರಂದು ಸಿಲಿಂಡರ್ ಸ್ಫೋಟದಲ್ಲಿ 11 ಜನ ಗಾಯಗೊಂಡಿದ್ದರು. ಹಾಲಪ್ಪ ಮತ್ತು ಗಂಗಮ್ಮ ಕೂಡ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ವಿಜಯಪುರ: ದುರ್ಗಾದೇವಿ ಜಾತ್ರೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಫೈರಿಂಗ್, ಬಾಲಕಿಗೆ ತಗುಲಿದ ಗುಂಡು
ಹೊಸಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್, ಶವಗಳನ್ನು ಊರಿಗೆ ಕೊಂಡೊಯ್ಯಲು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದರು. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಮತ್ತು ಮನೆ ಕಟ್ಟಿಸಿಕೊಡುವ ಭರವಸೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:51 pm, Fri, 3 October 25