ಶಿಡ್ಲಘಟ್ಟ: ಆಡುತ್ತಿದ್ದ ಬಾಲಕನನ್ನು ಕಚ್ಚಿ ಗಾಯಗೊಳಿಸಿದ ಬೀದಿನಾಯಿಗಳು, ನಗರಸಭೆ ಎದುರು ಜನರೊಂದಿಗೆ ಧರಣಿ ಕುಳಿತ ಪುಟಾಣಿ

ಶಿಡ್ಲಘಟ್ಟದಲ್ಲಿ ಹೆಚ್ಚಾದ ಬೀದಿ ನಾಯಿಗಳ ಹಾವಳಿಗೆ ಜನರು ಕಂಗಾಲಾಗಿದ್ದಾರೆ. ಮನೆಯ ಬಳಿ ಆಟವಾಡುತ್ತಿದ್ದ 8 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ಮಾಡಿ ಬಾಲಕನನ್ನು ಕಚ್ಚಿ ಗಾಯಗೋಳಿಸಿದೆ.

ಶಿಡ್ಲಘಟ್ಟ: ಆಡುತ್ತಿದ್ದ ಬಾಲಕನನ್ನು ಕಚ್ಚಿ ಗಾಯಗೊಳಿಸಿದ ಬೀದಿನಾಯಿಗಳು, ನಗರಸಭೆ ಎದುರು ಜನರೊಂದಿಗೆ ಧರಣಿ ಕುಳಿತ ಪುಟಾಣಿ
ಶಿಡ್ಲಘಟ್ಟದಲ್ಲಿ ನಾಯಿ ದಾಳಿ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 15, 2022 | 3:21 PM

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ಹಾವಳಿಯು ಇತ್ತೀಚೆಗೆ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಮಹಿಳೆಯರು, ಪುರುಷರು, ಮಕ್ಕಳ ಮೇಲೆ ದಾಳಿ ಮಾಡುತ್ತಿವೆ. ಈ ಹಿಂದೆ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾದ ಸಂದರ್ಭದಲ್ಲಿ ಅವುಗಳನ್ನು ನಿಯಂತ್ರಿಸಲು ಸಂತಾನಹರಣ, ಕಾಡುಗಳಿಗೆ ಬಿಟ್ಟು ಬರುವ ಕ್ರಮ ತೆಗೆದುಕೊಳ್ಳಲಾಗುತ್ತಿತ್ತು. ಆದರೆ ಇತ್ತೀಚೆಗೆ ಅಂಥ ಕ್ರಮಗಳು ಅಪರೂಪವಾಗಿವೆ. ಜೊತೆಗೆ ನಾಯಿಗಳು ಹೆಚ್ಚಾಗಿ ಮಟನ್​, ಚಿಕನ್​ ಅಂಗಡಿಗಳ ಬಳಿ ಬಿಡಾರ ಹೂಡಿವೆ. ಮಾಂಸದ ರುಚಿ ನೋಡಿದ ನಾಯಿಗಳು ಮನುಷ್ಯರ ಮೇಲೆ ದಾಳಿ ಮಾಡಲು ಆರಂಭಿಸಿವೆ.

ಶಿಡ್ಲಘಟ್ಟ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನರು ಹೆದರಿದ್ದಾರೆ. ಸಾರ್ವಜನಿಕರು ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ. ಶುಕ್ರವಾರ (ನ 11) ದಸ್ತಗೀರ್ ಎಂಬ 8ವರ್ಷದ ಬಾಲಕನು ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ಬೀದಿ ನಾಯಿಗಳ ಹಿಂಡು ಬಾಲಕನ ಮೇಲೆ ದಾಳಿ ಮಾಡಿ ಕಚ್ಚಿಗಾಯಗೊಳಿಸಿದೆ. ಈ ಬಾಲಕ ತನಗೆ ಆದ ನೋವು ಬೇರೆ ಯಾರಿಗೂ ಆಗಬಾರದು ಎಂದು ಶಿಡ್ಲಘಟ್ಟ ನಗರಸಭೆಯ ಮುಂದೆ ಧರಣಿ ಆರಂಭಿಸಿದ. ಬೀದಿ ನಾಯಿಗಳ ಹಾವಳಿಗೆ ಬೇಸತ್ತಿದ್ದ ಸಂತೋಷನಗರ ಹಾಗೂ ತೈಬಾ ಬಡಾವಣೆಯ ಜನರು ಬಾಲಕನ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಘಟನೆ ನಡೆದ ದಿನವೇ ದಾಳಿಗೊಳಗಾದ ಬಾಲಕನ ಮನೆಯವರು ನಗರಸಭೆಗೆ ಈ ಬಗ್ಗೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದರು. ಆದರೆ ಮೂರ್ನಾಲ್ಕು ದಿನಗಳಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ನಗರಸಭೆಯ ಮುಂದೆ ಧರಣಿ ಕುಳಿತುಕೊಂಡಿದ್ದಾರೆ, ಈ ಹಿಂದೆ ಕೂಡ ಬೀದಿ ನಾಯಿ ದಾಳಿಯಿಂದ ನಗರದಲ್ಲಿ ಒಂದು ಮಗು ಮೃತಪಟ್ಟಿತ್ತು. ಮತ್ತೊಮ್ಮೆ ಅಂಥದ್ದೇ ಅನಾಹುತ ಸಂಭವಿಸಿರುವುದರಿಂದ ನಗರಸಭೆ ಶೀಘ್ರ ಗಮನ ಹರಿಸಬೇಕು ಎಂದು ಮಗುವಿನ ಸಂಬಂಧಿಕರು ಶಿಡ್ಲಘಟ್ಟ ನಗರಸಭೆ ಆಯುಕ್ತ ಶ್ರೀಕಾಂತ್ ಅವರಿಗೆ ಮನವಿ ಮಾಡಿದರು.

ಘಟನೆ ಕುರಿತು ಪ್ರತಿಕ್ರಿಯಿಸಿದ ನಗರಸಭೆ ಆಯುಕ್ತ ಶ್ರೀಕಾಂತ್, ಈ ಹಿಂದೆ ಬೀದಿ ನಾಯಿ ದಾಳಿಗೆ ಬಲಿಯಾದ ಬಾಲಕನ ಕುಟುಂಬಕ್ಕೆ ಆರ್ಥಿಕ ಪರಿಹಾರ ನೀಡಿ ವಸತಿ ವ್ಯವಸ್ಥೆ ಮಾಡುತ್ತಿದ್ದೇವೆ. ಈಗ ಮತ್ತೆ ಇದೇ ರೀತಿಯ ಘಟನೆ ಮರುಕಳಿಸಿದೆ. ನಾಯಿಯ ದಾಳಿಗೆ ಒಳಗಾದ ಬಾಲಕನಿಗೆ ಸೂಕ್ತ ಪರಿಹಾರ ನೀಡುತ್ತೇವೆ. ಬೀದಿ ನಾಯಿಗಳನ್ನು ಕೂಡಲೇ ಸ್ಥಳಾಂತರ ಮಾಡಲು ಕಾನೂನು ಪ್ರಕಾರ ಅವಕಾಶವಿಲ್ಲ. ಅದಕ್ಕೆ ಪ್ರಾಣಿದಯಾ ಸಂಘದವರು ಕೂಡ ಬಿಡುವುದಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಬೀದಿ ನಾಯಿಗಳ ಕಾಟಕ್ಕೆ ಸೂಕ್ತವಾದ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವರದಿ: ಭೀಮಪ್ಪ ಪಾಟೀಲ, ಟಿವಿ9 ಚಿಕ್ಕಬಳ್ಳಾಪುರ

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ: ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಬಾಲಕನ ಮೇಲೆ ನಾಯಿ ದಾಳಿ; ಚಿಕಿತ್ಸೆ ಫಲಿಸದೇ ಬಾಲಕ ಸಾವು

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ