AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್; ರೈತರ ಕೈ ಸೇರಲಿದೆ ಲಾಭದ ಹಣ!

ನಂದಿನಿ ಉತ್ಪನ್ನಗಳ ಬೇಡಿಕೆ ಹೆಚ್ಚಳದಿಂದ ಚಿಮುಲ್ 2 ಕೋಟಿ ರೂ. ಲಾಭ ಗಳಿಸಿದೆ. ಈ ಲಾಭವನ್ನು ಚಿಕ್ಕಬಳ್ಳಾಪುರ ರೈತರಿಗೆ ಹಂಚಲು ಮುಂದಾಗಿ, ಮೇ ತಿಂಗಳವರೆಗೆ ಪ್ರತಿ ಲೀಟರ್ ಹಾಲಿಗೆ 1.50 ರೂ. ಹೆಚ್ಚುವರಿ ದರ ನೀಡಲಿದೆ. ಈ ನಿರ್ಧಾರವು ರೈತರಿಗೆ ಉತ್ತಮ ಪ್ರೋತ್ಸಾಹ ನೀಡಲಿದ್ದು, ಚಿಮುಲ್ ರಾಜ್ಯದಲ್ಲೇ ಅತಿ ಹೆಚ್ಚು ಹಾಲಿನ ದರ ನೀಡುವ ಒಕ್ಕೂಟಗಳಲ್ಲಿ ಒಂದಾಗಲಿದೆ.

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್; ರೈತರ ಕೈ ಸೇರಲಿದೆ ಲಾಭದ ಹಣ!
ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Mar 07, 2026 | 3:17 PM

Share

ಚಿಕ್ಕಬಳ್ಳಾಪುರ, ಮಾರ್ಚ್​ 07: ನಂದಿನಿ ಉತ್ಪನ್ನಗಳಿಗೆ (Nandini Products) ಹೆಚ್ಚುತ್ತಿರುವ ಬೇಡಿಕೆಯ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ಚಿಮುಲ್) ಉತ್ತಮ ಲಾಭ ಗಳಿಸಿದ್ದು, ಅದರ ಲಾಭವನ್ನು ರೈತರಿಗೆ ಹಂಚಲು ಮುಂದಾಗಿದೆ. ಮುಂದಿನ ಮೇ ತಿಂಗಳವರೆಗೆ ಚಿಮುಲ್ ಪ್ರತಿ ಲೀಟರ್​ಗೆ ಹೆಚ್ಚಿನ ದರ ನೀಡುವ ಮೂಲಕ ರೈತರಿಗೆ ಶುಭ ಸುದ್ದಿ ನೀಡಿದೆ.

ಒಂದು ಲೀಟರ್​ಗೆ ಒಂದೂವರೆ ರೂ. ಹೆಚ್ಚಳ!

ಚಿಮುಲ್ ಪ್ರಸ್ತುತ ಸುಮಾರು 2 ಕೋಟಿ ರೂಪಾಯಿ ಲಾಭದಲ್ಲಿದ್ದು, ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿ ಲೀಟರ್ ಹಾಲಿನ ಮೇಲೆ 1.50 ರೂಪಾಯಿ ಹೆಚ್ಚುವರಿ ದರ ನೀಡಲು ನಿರ್ಧರಿಸಲಾಗಿದೆ. ಚಿಮುಲ್ ಅಧ್ಯಕ್ಷ ಮಂಜುನಾಥ್ ರೆಡ್ಡಿ ಟಿವಿ9 ಜೊತೆ ಮಾತನಾಡಿ, ಈ ಹೆಚ್ಚುವರಿ ದರವನ್ನು ಮುಂದಿನ ಮೇ ತಿಂಗಳವರೆಗೆ ರೈತರಿಗೆ ನೀಡಲಾಗುತ್ತದೆ. ಈಗಾಗಲೇ ಒಕ್ಕೂಟದಿಂದ ಪ್ರತಿ ಲೀಟರ್ ಹಾಲಿಗೆ 36 ರೂಪಾಯಿ 90 ಪೈಸೆ ನೀಡಲಾಗುತ್ತಿದ್ದು, ರಾಜ್ಯ ಸರ್ಕಾರದ 5 ರೂಪಾಯಿ ಸಬ್ಸಿಡಿ ಸೇರಿ ಒಟ್ಟು 41 ರೂಪಾಯಿ 90 ಪೈಸೆ ರೈತರಿಗೆ ಸಂದಾಯವಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತಾ? ಅಂತೆ-ಕಂತೆಗಳಿಗೆ ಕೆಎಂಎಫ್‌ ಎಂಡಿ ಸ್ಪಷ್ಟನೆ

ರಾಜ್ಯದಲ್ಲೇ ಅತಿ ಹೆಚ್ಚು ಹಾಲಿನ ದರ ನೀಡುತ್ತಿರುವ ಒಕ್ಕೂಟಗಳಲ್ಲಿ ಚಿಮುಲ್ ಕೂಡ ಒಂದಾಗಿದೆ. ಈಗ ಹೆಚ್ಚುವರಿ 1.50 ರೂಪಾಯಿ ನೀಡುವ ನಿರ್ಧಾರದಿಂದ ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಮತ್ತಷ್ಟು ಪ್ರೋತ್ಸಾಹ ಸಿಗಲಿದೆ ಎಂದು ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'
ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!
ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!
SIR ವೇಳೆ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು
SIR ವೇಳೆ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು
ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ
ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ
ಮಳೆ ಅಬ್ಬರ: ಬೆಳಗಾವಿ ಜಿಲ್ಲೆಯಲ್ಲಿ ಮೈದುಂಬಿ ಹರಿಯುತ್ತಿರುವ ನದಿಗಳು
ಮಳೆ ಅಬ್ಬರ: ಬೆಳಗಾವಿ ಜಿಲ್ಲೆಯಲ್ಲಿ ಮೈದುಂಬಿ ಹರಿಯುತ್ತಿರುವ ನದಿಗಳು