ಚಿಂತಾಮಣಿ: ಚಾರಣಕ್ಕೆ ಬಂದಿದ್ದ 30ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

ಚಾರಣಕ್ಕೆ ಬಂದಿದ್ದ 30ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂದನಹಳ್ಳಿ ಗ್ರಾಮದ ಬಳಿ ಇರುವ ತಪತೇಶ್ವರ ಬೆಟದ್ದಲ್ಲಿ ನಡೆದಿದೆ.

ಚಿಂತಾಮಣಿ: ಚಾರಣಕ್ಕೆ ಬಂದಿದ್ದ  30ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು
ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 10, 2023 | 6:51 PM

ಚಿಕ್ಕಬಳ್ಳಾಪುರ: ಚಾರಣಕ್ಕೆ ಬಂದಿದ್ದ 30ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ (bee attacked) ಮಾಡಿದ್ದು, ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂದನಹಳ್ಳಿ ಗ್ರಾಮದ ಬಳಿ ಇರುವ ತಪತೇಶ್ವರ ಬೆಟದ್ದಲ್ಲಿ ನಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಹೆಜ್ಜೇನು ದಾಳಿಗೊಳಗಾದ ವಿದ್ಯಾರ್ಥಿಗಳನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ವೇಣು ವಿದ್ಯಾ ಸಂಸ್ಥೆಗೆ ಸೇರಿದ ವಿದ್ಯಾರ್ಥಿಗಳಾಗಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಶವಸಂಸ್ಕಾರದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ 15ಕ್ಕೂ ಹೆಚ್ಚು ಜನರು ಅಸ್ವಸ್ಥವಾದ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರ ಗ್ರಾಮದಲ್ಲಿ ನಡೆದಿತ್ತು. ಘಟನೆ ಪರಿಣಾಮ ಐದು ಜನ ಮಹಿಳೆಯರು ಸಹಿತ ಒಟ್ಟು ಹತ್ತು ಜನ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು.

ಶವಸಂಸ್ಕಾರಕ್ಕೆಂದು ಮರದ ಅಡಿ ಹೊಗೆ ಹಾಕಲಾಗಿತ್ತು. ಆ ವೇಳೆ, ಮರದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನು ಜನರ ಮೇಲೆ ದಾಳಿ ಮಾಡಿತ್ತು. ದಾವಣಗೆರೆಯ ಗುಮ್ಮನೂರ ಗ್ರಾಮದಲ್ಲಿ ಶವಸಂಸ್ಕಾರ ವೇಳೆ ದುರ್ಘಟನೆ ಸಂಭವಿಸಿದ್ದು, ಜಿಲ್ಲಾ ಆಸ್ಪತ್ರೆಯ ವೈದ್ಯರ ತಂಡದಿಂದ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: Bengaluru: ಡ್ರ್ಯಾಗರ್​ ಹಿಡಿದು ರಸ್ತೆಯಲ್ಲೇ ಸಾರ್ವಜನಿಕವಾಗಿ ಬೆದರಿಕೆ: ವಿಡಿಯೋ ಸಮೇತ​ ದೂರು ನೀಡಿದ ಬೈಕ್​ ಸವಾರ

ಗೊಂಬೆಗಳ ಮಾರಾಟ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ. ನಷ್ಟ

ಬೆಂಗಳೂರು: ಗೊಂಬೆಗಳ ಮಾರಾಟ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಆಟಿಕೆ ವಸ್ತುಗಳು ಬೆಂಕಿಗಾಹುತಿ ಆಗಿರುವಂತಹ ಘಟನೆ ವಿವೇಕನಗರದ ಮುಖ್ಯರಸ್ತೆಯಲ್ಲಿ ನಡೆದಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿದ  ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಕ್ಕಳ ಕಳ್ಳರೆಂದು ಭಾವಿಸಿ ಬೆನ್ನತ್ತಿದ ಜನರಿಂದ ಕಾರಿಗೆ ಬೆಂಕಿ

ಬಾಗಲಕೋಟೆ: ಮಕ್ಕಳ‌ ಕಳ್ಳರೆಂದು ಭಾವಿಸಿ ಕಾರಿನಲ್ಲಿದ್ದವರನ್ನು ಬೆನ್ನತ್ತಿದ ಜನರು ಬಳಿಕ ಕಾರಿಗೆ ಬೆಂಕಿ ಹಚ್ಚಿದ ಘಟನೆ ತಾಲ್ಲೂಕಿನ ಖಜ್ಜಿಡೋಣಿ ಗ್ರಾಮದಲ್ಲಿರುವ ಬಾಗಲಕೋಟೆ ಬೆಳಗಾವಿ ಹೆದ್ದಾರಿ ಬಳಿ ನಡೆದಿದೆ. ಕಾರಿನಲ್ಲಿರುವ ಪ್ರಯಾಣಿಕರು ಮಕ್ಕಳ ಕಳ್ಳರೆಂದು ಭಾವಿಸಿದ ಹನರು ಚಿಕ್ಕೂರು ಗ್ರಾಮದಿಂದ ಚೇಸ್ ಮಾಡಲು ಆರಂಭಿಸಿದ್ದಾರೆ. ಈ ವೇಳೆ ಕಾರು ವೇಗವಾಗಿ ಖಜ್ಜಿಡೋಣಿ ಗ್ರಾಮದ ಕಡೆ ಬಂದಿದೆ. ಆದರೂ ಬೆನ್ನುಬಿಡಿದ ಜನರು ಕಾರನ್ನು ತಡೆದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಒಳಉಡುಪಿನಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ: 1.33 ಕೋಟಿ ಮೌಲ್ಯದ ಚಿನ್ನ ವಶಕ್ಕೆ, ಮೂವರ ಬಂಧನ

ಈ ವೇಳೆ ಕೆಲವು ಕಿಡಿಗೇಡಿಗಳು ಕಾರಿಗೆ ಬೆಂಕಿ ಹಚ್ಚಿದ್ದು, ಸುಟ್ಟು ಕರಕಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಲೋಕಾಪುರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ಆಕಸ್ಮಿಕ ಬೆಂಕಿಯಿಂದ 10ಕ್ಕೂ ಹೆಚ್ಚು ಬಣವೆಗಳು ಸುಟ್ಟುಭಸ್ಮ

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸನಾಳ್ ಗ್ರಾಮದಲ್ಲಿ 10ಕ್ಕೂ ಹೆಚ್ಚು ಬಣವೆಗಳು ಸುಟ್ಟುಭಸ್ಮವಾಗಿರುವ ಘಟನೆ ಸಂಭವಿಸಿದೆ. 6ಕ್ಕೂ ಹೆಚ್ಚು ರೈತರಿಗೆ ಸೇರಿದ ಬಣವೆಗಳು ಬೆಂಕಿಗಾಹುತಿಯಾಗಿದೆ. ವಿದ್ಯುತ್ ಕಂಬದಿಂದ ಬೆಂಕಿ ಸಿಡಿದು ಅಗ್ನಿ ಆಕಸ್ಮಿಕ ಘಟನೆ ನಡೆದಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಣಕ್ಕೆ ಹರಸಾಹಸಪಟ್ಟಿದ್ದಾರೆ. ಆಕಸ್ಮಿಕ ದುರ್ಘಟನೆಯಿಂದ ಹತ್ತಕ್ಕೂ ಹೆಚ್ಚು ಬಣವೆಗಳು ಬೆಂಕಿಗೆ ಆಹುತಿಯಾಗಿದೆ.

ಜಾನುವಾರು ಮೇವು ಸಂಪೂರ್ಣ ನಾಶವಾಗಿದ್ದು, ರೈತರಿಗೆ ಪರಿಹಾರ ನೀಡುವಂತೆ ಅರಸನಾಳ್ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:51 pm, Mon, 10 April 23

ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP